Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ್ಯಾಯಕ್ಕೆ ಆಗ್ರಹಿಸಿ ಕೇರಳ ಸಿಎಂ...

ನ್ಯಾಯಕ್ಕೆ ಆಗ್ರಹಿಸಿ ಕೇರಳ ಸಿಎಂ ಭೇಟಿಯಾದ 'ಜಸ್ಟಿಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿ', ವಯನಾಡ್ ಸಿಪಿಎಂ ನಾಯಕರು

ಕುಡುಪು ಅಶ್ರಫ್ ಗುಂಪು ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 May 2025 1:23 PM IST
share
ನ್ಯಾಯಕ್ಕೆ ಆಗ್ರಹಿಸಿ ಕೇರಳ ಸಿಎಂ ಭೇಟಿಯಾದ ಜಸ್ಟಿಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿ, ವಯನಾಡ್ ಸಿಪಿಎಂ ನಾಯಕರು

ಮಂಗಳೂರು: ಮಂಗಳೂರಿನಲ್ಲಿ ಗುಂಪು ಥಳಿತಕ್ಕೆ ಒಳಗಾಗಿ ಹತ್ಯೆಯಾದ ವಯನಾಡ್ ನಿವಾಸಿ ಅಶ್ರಫ್ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕೇರಳದ ವಯನಾಡ್ ನಲ್ಲಿ ಹೋರಾಟ ಬಲಗೊಳ್ಳುತ್ತಿದೆ. ವಯನಾಡ್ ಪ್ರವಾಸದಲ್ಲಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು 'ಜಸ್ಟಿಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿ' ಮತ್ತು ಅಲ್ಲಿನ ಸಿಪಿಎಂ ಮುಖಂಡರ ಜಂಟಿ ನಿಯೋಗವು ಇಂದು (ಮೇ 21) ಭೇಟಿಯಾಗಿ ನ್ಯಾಯ ಒದಗಿಸುವಂತೆ ಮನವಿ ಮಾಡಿತು.

ನಿಯೋಗವು ಅಶ್ರಫ್ ಹತ್ಯೆ ಪ್ರಕರಣದ ಕುರಿತು ಮುಖ್ಯಮಂತ್ರಿಗೆ ಸವಿಸ್ತಾರವಾಗಿ ವಿವರಿಸಿತು. ಕರ್ನಾಟಕ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಯ ಜೊತೆ ಈ ಬಗ್ಗೆ ಮಾತನಾಡಿ ಅಶ್ರಫ್ ಕುಟುಂಬಕ್ಕೆ ನ್ಯಾಯ ಒದಗಿಸಲು ಕಾರ್ಯಪ್ರವೃತ್ತರಾಗುವಂತೆ ವಿನಂತಿಸಿತು. ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗದಲ್ಲಿ ಮಾಜಿ ಸಚಿವ, ಹಿರಿಯ ಕಮ್ಯುನಿಸ್ಟ್ ನೇತಾರ ಪಾಲೋಳಿ ಮುಹಮ್ಮದ್ ಕುಟ್ಟಿ, ಸಿಪಿಎಂ ವಯನಾಡ್ ಜಿಲ್ಲಾ ನಾಯಕರಾದ ಅಹ್ಮದ್ ಮಟ್ಟಿ, ಅಡ್ವಕೇಟ್ ಜಯಕೃಷ್ಣನ್, ಆ್ಯಕ್ಷನ್ ಕಮಿಟಿಯ ನಝರ್ ಪರಪ್ಪೂರ್, ನಾಸರ್ ಕಪ್ಪನ್, ರಹೀಮ್ ಕೆ.ಕೆ., ಅಬ್ದುಲ್ ಹಖ್ ಉಪಸ್ಥಿತರಿದ್ದರು.

ವಯನಾಡ್ ನ ಸಿಪಿಎಂಗೆ ಸಾಧ್ಯವಾಗುವುದು, ದ.ಕ. ಜಿಲ್ಲಾ ಕಾಂಗ್ರೆಸ್ ಗೆ ಏಕೆ ಸಾಧ್ಯವಾಗುವುದಿಲ್ಲ ?

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ದ.ಕ. ಜಿಲ್ಲಾ ಪ್ರವಾಸದಲ್ಲಿದ್ದರು. ಆ ಸಂದರ್ಭ ಗುಂಪು ಹತ್ಯೆಗೆ ಬಲಿಯಾದ ಅಶ್ರಫ್ ಗೆ ನ್ಯಾಯ ದೊರಕಬೇಕು, ಮಂಗಳೂರು ಪೊಲೀಸರು ಪ್ರಕರಣವನ್ನು ತೇಲಿಸುತ್ತಿದ್ದಾರೆ ಎಂಬ ಆಕ್ರೋಶ ಬಲವಾಗಿತ್ತು. ಆದರೆ, ಈ ಕುರಿತು ಗಮನ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯರ ಭೇಟಿಗೆ ಸಮಯ ನಿಗದಿಗೊಳಿಸಲು ಜಿಲ್ಲೆಯ ಕಾಂಗ್ರೆಸ್ ಪಕ್ಷ ಏಕೆ ಪ್ರಯತ್ನಿಸಿಲ್ಲ? ಕನಿಷ್ಟ ಒಂದು ಮನವಿ ಪತ್ರವನ್ನು ಸಲ್ಲಿಸಲೂ ಪ್ರಯತ್ನಿಸದಿರುವುದು ಯಾವ ಸಂದೇಶ ನೀಡುತ್ತದೆ ಎಂದು ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.

ಕೇರಳದ ವಯನಾಡ್ ನ ಸಿಪಿಎಂ ಪಕ್ಷಕ್ಕೆ ಸಾಧ್ಯವಾಗುವುದು, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕತ್ವಕ್ಕೆ ಯಾಕೆ ಸಾಧ್ಯವಾಗುವುದಿಲ್ಲ ? ಈಗಂತೂ ಕಾಂಗ್ರೆಸ್ ಪಕ್ಷದ ಯಾವೊಬ್ಬ ಜಿಲ್ಲಾ ನಾಯಕನೂ ಅಶ್ರಫ್ ಗುಂಪು ಹತ್ಯೆ ಪ್ರಕರಣದ ಕುರಿತು ತುಟಿ ಬಿಚ್ಚುತ್ತಿಲ್ಲ. ಕಾಂಗ್ರೆಸ್ ಪಕ್ಷದ ಮುಸ್ಲಿಮ್ ನಾಯಕರಷ್ಟೆ ಸ್ಪೀಕರ್ ಬಳಿ, ಉಸ್ತುವಾರಿ ಸಚಿವರ ಬಳಿ ನ್ಯಾಯಕ್ಕಾಗಿ ಅಗ್ರಹಿಸಿ ಮನವಿ ಪತ್ರ ಹಿಡಿದು ಓಡಾಡುತ್ತಿದ್ದಾರೆ. ಈ ನಾಯಕರ ಅಸಹಾಯಕತೆ ಎದ್ದು ಕಾಣುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕುಡುಪು ಮಾಬ್ ಲಿಂಚಿಂಗ್ ಪ್ರಕರಣದಲ್ಲಿ ನ್ಯಾಯ ದೊರಕಲು ಸಾಧ್ಯವೆ ? ಪ್ರಕರಣ ದುರ್ಬಲಗೊಳ್ಳುತ್ತಾ ಹಾಗೆಯೆ ಮುಚ್ಚಿ ಹೋಗುವುದರ ಕುರಿತು ಯಾರಿಗಾದರು ಅನುಮಾನ ಇದೆಯೆ, ಇದೆಲ್ಲದರ ಅರ್ಥ ಏನು ಎಂದು ಕಾಂಗ್ರೆಸ್ ಪಕ್ಷ ವಿವರಿಸುತ್ತದೆಯೆ ಎಂದವರು ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X