ಕಿನ್ಯ: ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನ ಪಲ್ಟಿ

ಶಾಲಾ ಮಕ್ಕಳ ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಕಿನ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಂಪ್ರಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ನಾಟೆಕಲ್ ನ ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಇದಾಗಿದೆ. ಘಟನೆಯಲ್ಲಿ ಸಣ್ಣಪುಟ್ಟ ತರಚು ಗಾಯಗಳೊಂದಿಗೆ ಮಕ್ಕಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story