Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯುತ್ ದರವನ್ನು ಕೆಇಆರ್‌ಸಿ ನಿಗದಿ...

ವಿದ್ಯುತ್ ದರವನ್ನು ಕೆಇಆರ್‌ಸಿ ನಿಗದಿ ಮಾಡುತ್ತದೆ: ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ4 Aug 2025 10:19 PM IST
share
ವಿದ್ಯುತ್ ದರವನ್ನು ಕೆಇಆರ್‌ಸಿ ನಿಗದಿ ಮಾಡುತ್ತದೆ: ಜೆ.ಆರ್.ಲೋಬೊ

ಮಂಗಳೂರು, ಆ.4: ವಿದ್ಯುತ್ ದರವನ್ನು ನಿಗದಿ ಮಾಡುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ( ಕೆಇಆರ್‌ಸಿ) ವಿದ್ಯುತ್ ದರ ನಿಗದಿ ಮಾಡುತ್ತದೆ. ಆದರೆ ಬಿಜೆಪಿಯು ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸಿ, ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಸ್ಪಷ್ಟಪಡಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಇಆರ್‌ಸಿ ನಿಗದಿಪಡಿಸಿ ವಿದ್ಯುತ್ ದರವನ್ನು ಮೆಸ್ಕಾಂ, ಕೆಪಿಟಿಸಿಎಲ್ ಮತ್ತಿತರರ ವಿದ್ಯುತ್ ಕಂಪೆನಿಗಳು ಗ್ರಾಹಕರಿಂದ ವಸೂಲಿ ಮಾಡುತ್ತದೆ. ಆದ ಕಾರಣ ಗ್ರಾಹಕರು ಪಾವತಿಸಬೇಕಾದ ವಿದ್ಯುತ್ ದರಗಳಿಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರವನ್ನು ದೂರುವುದು ಸರಿಯಲ್ಲ ಎಂದರು.

ದೇಶದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ನಡೆಯುತ್ತಿರುವ ಸುಧಾರಣೆಗಳ ಉದ್ದೇಶಕ್ಕಾಗಿ ಜುಲೈ 1999 ರಲ್ಲಿ ಕೆಇಬಿಯನ್ನು ವಿಂಗಡೆ ಮಾಡಿ ಕೆಪಿಟಿಸಿಎಲ್ ಅನ್ನು ರಚಿಸಲಾಯಿತ್ತು. 1999ರ ಜುಲೈ 31ರಂದು ಕರ್ನಾಟಕ ಸರಕಾರ , ಕೆಇಬಿ ಮತ್ತು ಯೂನಿಯನ್, ಸಂಘಗಳ ನಡುವೆ ತ್ರಿಪಕ್ಷೀಯ ಒಪ್ಪಂದ ಆಗಿತ್ತು. ಕೆಇಬಿ , ಕೆಪಿಟಿಸಿಎಲ್, ಎಸ್ಕಾಂನಲ್ಲಿ ದುಡಿಯುವ ನೌಕರರ ಮತ್ತು ಅವರ ಕುಟುಂಬದ ರಕ್ಷಣೆಗಾಗಿ ಇರುವ ಪಿಂಚಣಿ ಮತ್ತು ಗ್ರಾಚ್ಯುಟಿ ಟ್ರಸ್ಟ್‌ಗೆ ಕರ್ನಾಟಕ ಸರಕಾರವು 2021ರತನಕ 12,700 ಕೋಟಿ ರೂ.ಗಳನ್ನು ಜಮೆ ಮಾಡಿತ್ತು. ಆದರೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು 2022ರ ಮಾ.9ರಂದು ಹೊರಡಿಸಿದ ಆದೇಶದಲ್ಲಿ ಈ ಹಣವನ್ನು ಸರಕಾರಕ್ಕೆ ಕೊಡಲು ಸಾಧ್ಯವಿಲ್ಲ. ಗ್ರಾಹಕರ ಬಿಲ್‌ನ ಮೂಲಕವೇ ವಸೂಲಿ ಮಾಡಬೇಕು ಎಂದು ಹೇಳಿತ್ತು. ಅನಂತರ ಎರಡು ವರ್ಷಗಳ ಬಾಕಿ ಹಣವನ್ನು ವಸೂಲಿ ಮಾಡಲು ರಾಜ್ಯ ಸರಕಾರ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಬಳಕೆ ದಾರರು ಹೈಕೋರ್ಟ್‌ನ ಮೊರೆ ಹೋಗಿದ್ದರು. ಆಗ ಹೈಕೋರ್ಟ್ ಸರಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಿತ್ತು.

ಪಿಂಚಣಿ ಮತ್ತು ಗ್ರಾಚ್ಯುಟಿಗೆ ಗ್ರಾಹಕರ ಬಿಲ್‌ನಲ್ಲಿ ವಸೂಲಿ ಮಾಡುವ ನಿರ್ಧಾರವನ್ನು ಹಿಂದಿನ ಬಿಜೆಪಿ ಸರಕಾರದ ಆಡಳಿತದ ಅವಧಿಯಲ್ಲಿ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಸರಕಾರವಲ್ಲ. ಈ ಕಾರಣ ದಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸರಕಾರ ವಿರುದ್ಧ ಮಾಡಿರುವ ಪ್ರತಿಭಟನೆಯು ಜನರಿಗೆ ತಪ್ಪು ಮಾಹಿತಿ ನೀಡುವುದಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಪಕ್ಷದ ಧುರೀಣರಾದ ಪದ್ಮರಾಜ್ ಆರ್ ಪೂಜಾರಿ, ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ಟಿ.ಕೆ.ಸುಧೀರ್,ಪ್ರಕಾಶ್ ಸಾಲ್ಯಾನ್, ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ಪ್ರೇಮ್‌ನಾಥ್, ಉದಯ್ ಆಚಾರ್ಯ, ನೆಲ್ಸನ್ ಮೊಂತೆರೊ, ಯೋಗೇಶ್ ಕುಮಾರ್, ರೀತೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X