Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಗಿಲು ಬಡಾವಣೆ ತೆರವು ಪ್ರಕರಣ: ಸಮಗ್ರ...

ಕೋಗಿಲು ಬಡಾವಣೆ ತೆರವು ಪ್ರಕರಣ: ಸಮಗ್ರ ತನಿಖೆಗೆ ಎಸ್‌ಐಟಿ ರಚನೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 Dec 2025 2:58 PM IST
share
ಕೋಗಿಲು ಬಡಾವಣೆ ತೆರವು ಪ್ರಕರಣ: ಸಮಗ್ರ ತನಿಖೆಗೆ ಎಸ್‌ಐಟಿ ರಚನೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಇಲ್ಲಿ ಬಂದು ನೆಲೆಸಿದ ಕಾರಣ ಸೇರಿ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಒತ್ತಾಯಿಸಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಅಲ್ಲಿ ಒಕ್ಕಲೆಬ್ಬಿಸಿದವರಿಂದ ಯಾವುದೇ ದಾಖಲೆ ಪತ್ರವನ್ನು ಕೇಳದೆಯೇ ಅವರಿಗೆ ನಾಲ್ಕೈದು ಕಿ.ಮೀ ದೂರದಲ್ಲಿ ಪುನರ್ವಸತಿ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಬೆಳವಣಿಗೆಗಳ ಹಿಂದೆ ವಸತಿ ಸಚಿವ ಜಮೀರ್ ಅಹಮದ್ ಖಾನ್‌ ಕೈವಾಡ ಇದೆ’ ಎಂದು ಅವರು ಆರೋಪಿಸಿದರು.

‘ಅಕ್ರಮ ವಲಸಿಗರಿಗೆ ವಸತಿ ಕಲ್ಪಿಸುವುದರ ಹಿಂದೆ ಕೇರಳದ ರಾಜಕೀಯ ಒತ್ತಡ ಕೆಲಸ ಮಾಡಿದೆ. ಎರಡೂವರೆ ವರ್ಷದಲ್ಲಿ ರಾಜ್ಯದ ಬಡವರಿಗೆ ಸರ್ಕಾರ ಒಂದೇ ಒಂದು ಮನೆ ಕೊಟ್ಟಿಲ್ಲ. ನಗರದಲ್ಲಿ ವಸತಿ ಜಮೀನಿಗಾಗಿ ನಮೂನೆ 94 ಸಿ ಮತ್ತು 94ಸಿ.ಸಿ ಅಡಿ ಅರ್ಜಿ ಸಲ್ಲಿಸಲಿಕ್ಕೂ ಅವಕಾಶ ಕಲ್ಪಿಸಿಲ್ಲ. ನಮ್ಮ ರಾಜ್ಯದವರ ಪರಿಸ್ಥಿತಿ ಹೀಗಿರುವಾಗ ಹೊರರಾಜ್ಯದ ಅಕ್ರಮ ವಲಸಿಗರಿಗೆ ಮನೆ ಕಟ್ಟಿಕೊಡುವ ಔಚಿತ್ಯವಾದರೂ ಏನು’ ಎಂದು ಅವರು ಪ್ರಶ್ನಿಸಿದರು.

‘ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ಮನೆಕಟ್ಟಿಕೊಂಡ ವಲಸಿಗರಿಗೆ ಒಮ್ಮೆಗೆ ಮಾತ್ರ ಅನ್ವಯವಾಗುವಂತೆ ಉಚಿತವಾಗಿ ಮನೆ ಕಟ್ಟಿಕೊಡುವುದಾಗಿ ಸರ್ಕಾರ ಹೇಳುತ್ತಿದೆ. ಸಚಿವ ಸಂಪುಟಕ್ಕೆ ಈ ಬಗ್ಗೆ ವಿಶೇಷ ಅಧಿಕಾರ ಇರಬಹುದು. ಆದರೂ ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದೇವೆ’ ಎಂದರು.

‘ಕೋಗಿಲು ಬಡಾವಣೆಯಲ್ಲಿ 2023ರವರೆಗೆ ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ವಸತಿಗಳು ಇರಲಿಲ್ಲ. 2023ಕ್ಕೂ ಹಿಂದಿನ ಗೂಗಲ್ ನಕಾಶೆಯಲ್ಲಿ ಅಲ್ಲಿ ಬೆರಳೆಣಿಕೆಯ ಮನೆಗಳಿದ್ದುದು ಕಾಣಿಸುತ್ತದೆ. ಜಮೀರ್ ಅವರ ಗ್ಯಾಂಗ್ ಅಕ್ರಮ ವಲಸಿಗರನ್ನು ಅಲ್ಲಿ ಕರೆತಂದು ಕೂರಿಸಿದೆ. ಅಲ್ಲಿನ ಎಲ್ಲಾ ಜಾಗವನ್ನು ಒತ್ತುವರಿ ಮಾಡಲಾಗಿದೆ. ಇದರ ಹಿಂದೆ ದೊಡ್ಡ ಪಿತೂರಿ ನಡೆದಿದೆ’ ಎಂದು ಆರೋಪಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಅವರ ಜಮೀನನ್ನು ನಾವು ಹೋಗಿ ಒತ್ತುವರಿ ಮಾಡಿದರೆ, ನಮಗೆ ಅಲ್ಲಿ ಮನೆ ಕಟ್ಟಿಸಿ ಕೊಡುತ್ತಾರೆಯೇ?. ಮುಸಲ್ಮಾನರ ಮತಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ. ಎಲ್ಲೆಲ್ಲಿಂದ ಬಂದು ಅಕ್ರಮವಾಗಿ ನೆಲೆಸಿದವರಿಗೆ ಮನೆ ಕಟ್ಟಿಕೊಡುವ ಸರ್ಕಾರ ರಾಜ್ಯದಲ್ಲೇ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೇರಳದಲ್ಲಿ ಕಾಡಾನೆ ದಾಳಿಗೊಳಗಾದರೂ ನಮ್ಮ ರಾಜ್ಯದಿಂದ ಪರಿಹಾರ ನೀಡಲಾಗುತ್ತದೆ. ರಾಜ್ಯದ ಜನತೆ ಕ್ಷಮಿಸಲಾಗದ ಅನ್ಯಾಯವನ್ನು ಸರ್ಕಾರ ಮಾಡುತ್ತಿದೆ’ ಎಂದರು.

ಈಶಾನ್ಯ ಹಾಗೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ನೆಲೆಸಲು ‘ಇನ್ನರ್ ಲೈನ್ ಪರ್ಮಿಟ್‌’ ಪಡೆಯುವ ವ್ಯವಸ್ಥೆಯನ್ನು ನಮ್ಮ ರಾಜ್ಯದಲ್ಲೂ ಜಾರಿಗೆ ತರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದಕ್ಕೂ ಮೊದಲು ನಮ್ಮ ರಾಜ್ಯದಲ್ಲಿ ಎಷ್ಟು ಮಂದಿಗೆ ಸ್ವಂತ ಸೂರು ಇಲ್ಲ, ಸ್ವಂತ ಜಮೀನು ಹೊಂದಿಲ್ಲ ಎಂಬ ದತ್ತಾಂಶಗಳನ್ನು ಕಲೆ ಹಾಕಿ ಅದಕ್ಕೊಂದು ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X