ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ
5ಲಕ್ಷ ರೂ. ಪರಿಹಾರ ಧನ ಹಸ್ತಾಂತರ, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ವಹಿಸುವ ಭರವಸೆ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಇನಾಯತ್ ಅಲಿ ಅವರು ವೈಯ್ಯಕ್ತಿಕ ನೆಲೆಯಲ್ಲಿ 5ಲಕ್ಷ ರೂ. ಪರಿಹಾರ ಧನದ ಚೆಕನ್ನು ಅಬ್ದುಲ್ ರಹಿಮಾನ್ ಅವರ ತಂದೆಗೆ ಹಸ್ತಾಂತರಿಸಿದರು. ಜೊತೆಗೆ ಅವರ ಇಬ್ಬರೂ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳುವುದಾಗಿ ನುಡಿದರು.
Next Story