Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಪಿಸಿಸಿ ಅಧ್ಯಯನ ಸಮಿತಿ ದ.ಕ.ಜಿಲ್ಲಾ...

ಕೆಪಿಸಿಸಿ ಅಧ್ಯಯನ ಸಮಿತಿ ದ.ಕ.ಜಿಲ್ಲಾ ಭೇಟಿ ಹಿನ್ನೆಲೆ; ಮುಂದಿನ ವಾರ ಸರಕಾರಕ್ಕೆ ಮಧ್ಯಂತರ ವರದಿ: ಡಾ. ನಾಸಿರ್ ಹುಸೇನ್

ವಾರ್ತಾಭಾರತಿವಾರ್ತಾಭಾರತಿ6 Jun 2025 11:30 AM IST
share
ಕೆಪಿಸಿಸಿ ಅಧ್ಯಯನ ಸಮಿತಿ ದ.ಕ.ಜಿಲ್ಲಾ ಭೇಟಿ ಹಿನ್ನೆಲೆ; ಮುಂದಿನ ವಾರ ಸರಕಾರಕ್ಕೆ ಮಧ್ಯಂತರ ವರದಿ: ಡಾ. ನಾಸಿರ್ ಹುಸೇನ್

ಮಂಗಳೂರು, ಜೂ. 6: ಕೋಮು ಸೂಕ್ಷ್ಮ ಪ್ರದೇಶವಾದ ದ.ಕ. ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಗಳು, ಕೋಮು ಗಲಭೆಗಳಿಗೆ ಸಂಬಂಧಿಸಿ ಇಲ್ಲಿನ ಆಡಳಿತದ ವಿಫಲತೆ, ಪೂರಕವಾದ ಅಕ್ರಮ ಚಟುವಟಿಕೆಗಳ ಕುರಿತಂತೆ ಕಲೆ ಹಾಕಲಾಗಿರುವ ಮಾಹಿತಿಯ ಆಧಾರದಲ್ಲಿ ಮಧ್ಯಂತರ ವರದಿಯನ್ನು ಜೂ.9 ಅಥವಾ 10ರಂದು ಮುಖ್ಯಮಂತ್ರಿ, ಕಾನೂನು ಹಾಗೂ ಗೃಹ ಸಚಿವರು ಸೇರಿದಂತೆ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಯನ ಸಮಿತಿಯ ಅಧ್ಯಕ್ಷ ಡಾ. ನಾಸಿರ್ ಹುಸೇನ್ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಗಳ ಸತ್ಯಾಸತ್ಯತೆಯ ಅಧ್ಯನಯಕ್ಕಾಗಿ ಜಿಲ್ಲೆಗೆ ಭೇಟಿ ನಿಡಿರುವ ನಿಯೋಗದ ಪ್ರಮುಖರ ಜತೆ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ದ.ಕ. ಜಿಲ್ಲೆ ಸೇರಿದಂತೆ ಉಡುಪಿ ಹಾಗೂ ಕಾರವಾರವನ್ನು ಒಳಗೊಂಡು ಕರಾವಳಿಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು, ಪ್ರಗತಿಗಾಗಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಗಳನ್ನು ನೀಡುವಂತೆ ಸರಕಾರ ಸ್ಪಷ್ಟ ನಿರ್ದೇಶನವನ್ನು ಅಧ್ಯಯನ ಸಮಿತಿಗೆ ನೀಡಿದೆ. ಅದರಂತೆ ಜಿಲ್ಲೆಗೆ ಜೂ. 4ರಂದ ಭೇಟಿ ನೀಡಿರುವ ಸಮಿತಿಯು ಈಗಾಗಲೇ ಪಕ್ಷದ ಹಿರಿಯ ನಾಯಕರು, ವಕೀಲರು, ಚಿಂತಕರು, ಲೇಖಕರು, ಧಾರ್ಮಿಕ ಮುಖಂಡರು, ಸಮುದಾಯದ ಪ್ರಮುಖರ ಜತೆ ಚರ್ಚಿಸಿದೆ. ಮುಂದೆ ಉಡುಪಿ ಹಾಗೂ ಕಾರವಾರ ಜಿಲ್ಲೆಗಳಿಗೂ ಭೇಟಿ ನೀಡಲಿದೆ. ಅದಕ್ಕೂ ಮೊದಲು ಈವರೆಗೆ ದ.ಕ. ಜಿಲ್ಲೆಯಲ್ಲಿ ಸಮಿತಿ ಸಂಗ್ರಹಿಸಿರುವ ಅಂಶಗಳ ಆಧಾರದಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಲಿದ್ದೇವೆ ಎಂದರು.

ಸಾಕ್ಷತರೆ, ಬ್ಯಾಂಕಿಂಗ್ ಸೇರಿದಂತೆ ಆರ್ಥಿಕ ವ್ಯವಹಾರಗ ಮೂಲಕ ಸಾಕಷ್ಟು ಕೊಡುಗೆ ನೀಡಿರುವ ದ.ಕ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಅದಕ್ಕೆ ಯಾವೆಲ್ಲಾ ಆಡಳಿತಾತ್ಮಕ ಕ್ರಮಗಳ ಅಗತ್ಯವಿದೆ ಆ ಬಗ್ಗೆ ಸಲಹೆ ನೀಡಲಿದ್ದೇವೆ. ಹಿಂಸೆಗೆ ಅವಕಾಶ ಇಲ್ಲದಂತೆ ಕಾನೂನು ಅನುಷ್ಠಾನ ಸಂಸ್ಥೆಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಅದಕ್ಕೆ ಏನೆಲ್ಲಾ ಅಗತ್ಯವಿದೆಯೋ ಅಂತಹ ಕಾರ್ಯಕ್ರಮ ಆಗಲಿದೆ ಎಂದವರು ಹೇಳಿದರು.

ಕೆಪಿಸಿಸಿ ಅಧ್ಯಯನ ಸಮಿತಿಯ ಸದಸ್ಯರಾದ ಸುದರ್ಶನ್ ಮಾತನಾಡಿ, ರಾಜ್ಯದ ಪ್ರಗತಿಗೆ ದ.ಕ. ಜಿಲ್ಲೆಯ ಕೊಡುಗೆ ಅಪಾರ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಘಟನೆಗಳಿಗೆ ಕೋಮು ಬಣ್ಣ ಹಚ್ಚುವ ಕೆಲಸಾಗಿದೆ. ಯಾರೋ ಶೇ. 2ರಷ್ಟು ದುಷ್ಕರ್ಮಿಗಳು ಇಂತಹ ಕೃತ್ಯ ಎಸಗುತ್ತಾರೆ. ಉಳಿದ ಶೇ. 8ರಷ್ಟು ಜನ ರಾಜಕೀಯವಾಗಿ ಇದರ ಲಾಭ ಪಡೆಯಲು ಜಿಲ್ಲೆಯಲ್ಲಿ ಈ ರೀತಿಯ ಪ್ರಯೋಗ, ಸಂಶೋಧನೆಗಳನ್ನು ಮಾಡುವುದನ್ನು ನಾವು ಖಂಡಿಸುತ್ತೇವೆ. ಶೇ. 90ರಷ್ಟು ಜನರ ಯಾವುದೇ ಪಾತ್ರ ಇರುವುದಿಲ್ಲ ಎಂದು ಹೇಳಿದರು.

ಮಧ್ಯಂತರ ವರದಿ ಸಲ್ಲಿಕೆ ಬಳಿಕ ಮತ್ತೆ ಉಡುಪಿ ಹಾಗೂ ಕಾರವಾರ ಹಾಗೂ ಇನ್ನೊಂದು ಸುತ್ತು ದ.ಕ. ಜಿಲ್ಲೆಯಲ್ಲಿಯೂ ಭೇಟಿ ಮಾಡಿ ಮತ್ತಷ್ಟು ಮಾಹಿತಿ ಸಂಗ್ರಹಿಸಿ, ಪೂರ್ಣ ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಸಮಿತಿ ಸದಸ್ಯರಾದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, 1994-97ರವರೆಗೆ ನಾನು ಸಚಿವನಾಗಿದ್ದೆ. ಆದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಜನಪ್ರತಿನಿಧಿಗಳು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕು. ಅದು ಬಿಟ್ಟು ಗೊಂದಲ ಮೂಡಿಸಲಾಗುತ್ತಿದೆ. ಮಂಗಳೂರು ಏಳು ಗಂಟೆಗೆ ಬಂದ್ ಮಾಡಿಸಲಾಗುತ್ತಿದೆ ಎಂಬ ದೂರುಗಳು ಸಮಿತಿಗೆ ಬಂದಿದೆ. ಇದರಿಂದಾಗಿ ಹೊರಗಿನ ವಿದ್ಯಾರ್ಥಿಗಳು ಬರಲು ಭಯ ಪಡುತ್ತಿದ್ದಾರೆ. ಬಂಡವಾಳ ಹೂಡಿಕೆಗೆ ಹಿಂದೇಟು ಆಗುತ್ತಿದೆ. ಇಂತಹ ವಿಚಾರಗಳನ್ನು ಜನಪ್ರತಿನಿಧಿಗಳು ಅರ್ಥ ಮಾಡಿಕೊಂಡು ಸಮಾಜವನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದರೆ ಬದಲಾವಣೆ ಸಾಧ್ಯ ಎಂದರು.

ಇನ್ನೋರ್ವ ಸದಸ್ಯ ಕಿಮ್ಮನೆ ರತ್ನಾಕರ್ ಮಾತನಾಡಿ, ದ.ಕ. ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂಬ ಅಭಿಪ್ರಾಯ ರಾಜ್ಯದಲ್ಲಿದ್ದು, ಅದು ಎಲ್ಲಿ ಹೋಗಿದೆ. ಸಾಕ್ಷರತೆ ಹೆಚ್ಚಿರುವಲ್ಲಿ ತಾಳ್ಮೆ, ಸಂಯಮವೂ ಹೆಚ್ಚಿರಬೇಕು. ಎಲ್ಲರನ್ನೂ ಒಟ್ಟಿಗೆ ಒಯ್ಯುವ ಮನಸ್ಸಿತಿ ನಮಲ್ಲಿ ಇರಬೇಕು. ಅದಕ್ಕೆ ಪೂರಕವಾಗಿ ಮಾಧ್ಯಮಗಳ ಜವಾಬ್ಧಾರಿಯೂ ಇದೆ. ಆದರೆ ಜನಪ್ರತಿನಿಧಿಗಳು ಮಾತ್ರವಲ್ಲದೆ, ಮಾದ್ಯಮಗಳು ಕೂಡಾ ಜಿಲ್ಲೆಯಲ್ಲಿ ನಡೆಯುವ ಗಲಭೆಗೆ ಪೂರಕವಾಗಿ ಮಾತನಾಡುವಾಗ ನೋವಾಗುತ್ತದೆ ಎಂದವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಮಿತಿಯ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ಮುಖಂಡರಾದ ಐವನ್ ಡಿಸೋಜಾ, ಪದ್ಮರಾಜ್, ಶಶಿಧರ ಹೆಗ್ಡೆ, ಸತ್ಯಪ್ರಕಾಶ್, ಗಫೂರ್, ರಕ್ಷಿತ್ ಶಿವರಾಂ, ಮಿಥುನ್ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X