Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು ಗುಂಪು ಹತ್ಯೆ ಪ್ರಕರಣ; ಎಸ್ಐಟಿ...

ಕುಡುಪು ಗುಂಪು ಹತ್ಯೆ ಪ್ರಕರಣ; ಎಸ್ಐಟಿ ತನಿಖೆ ಸೂಕ್ತ: ಬಿ. ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ1 May 2025 12:45 PM IST
share
ಕುಡುಪು ಗುಂಪು ಹತ್ಯೆ ಪ್ರಕರಣ; ಎಸ್ಐಟಿ ತನಿಖೆ ಸೂಕ್ತ: ಬಿ. ರಮಾನಾಥ ರೈ

ಮಂಗಳೂರು,ಮೇ.1; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ವಲಸೆ ಕಾರ್ಮಿಕನ ಗುಂಪು ಥಳಿತ, ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ ಐಟಿ)ರಚನೆ ಸೂಕ್ತ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲು ಜಿಲ್ಲೆಯ ಕಾಂಗ್ರೆಸ್ ಮುಖಂಡರ ನಿಯೋಗ ಶೀಘ್ರದಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರನ್ನು ಭೇಟಿ ಮಾಡಲಿದೆ ಎಂದು ಮಾಜಿ ಸಚಿವ,ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಗುಂಪು ಥಳಿತ ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿರುವ ಅಮಾನವೀಯ ಘಟನೆ. ಇಲ್ಲಿ ಹತ್ಯೆಯಾದ ವ್ಯಕ್ತಿಯ ಜಾತಿ, ಧರ್ಮ, ಮತವನ್ನು ಪರಿಗಣಿಸದೆ ಜಿಲ್ಲೆಯ ಜನತೆ ಖಂಡಿಸಬೇಕಾದ ಹೇಯ ಕೃತ್ಯ. ಇಂತಹ ದುಷ್ಕೃತ್ಯದಲ್ಲಿ ನೇರವಾಗಿ ಭಾಗಿಯಾದವರು, ಅದರ ಹಿಂದೆ ಇರುವವರು ಯಾರು ಎಂದು ತನಿಖೆ ನಡೆದು ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕಾದರೆ ಎಸ್ಐಟಿ ರಚನೆ ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ಈ ಹಿಂದೆಯೂ ಮತೀಯ ದ್ವೇಷದ ಕೊಲೆಗಳಾದ ಸಂದರ್ಭದಲ್ಲಿ ನಾನು ಎಸ್ಐಟಿ ತನಿಖೆಗೆ ಆಗ್ರಹಿಸಿದ್ದೇನೆ. ಈ ಜಿಲ್ಲೆಯಲ್ಲಿ ಕೋಮು ಸೌಹಾರ್ದವನ್ನು ಕದಡಲು ಮತೀಯ ಶಕ್ತಿಗಳು ಪಬ್ ದಾಳಿ, ಚರ್ಚ್ ದಾಳಿಯಂತಹ ಘಟನೆಗಳನ್ನು ಮಾಡಿವೆ. ಇದರಲ್ಲಿ ಕೆಲವು ಆರೋಪಿಗಳ ಬಂಧನವಾದರೂ ಈ ಶಕ್ತಿಗಳಿಗೆ ಹಿಂದಿನಿಂದ ಪ್ರಚೋದನೆ ನೀಡುವರು ಶಿಕ್ಷೆಯಿಂದ ಪಾರಾಗಿರುವುದೇ ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿದೆ. ಜಿಲ್ಲೆಯಲ್ಲಿ ಗುಂಪು ಥಳಿತ,ಹತ್ಯೆ ಪ್ರಕರಣ ಪ್ರಥಮ ಇದನ್ನು ಮೊಳಕೆಯಲ್ಲಿಯೇ ಚಿವುಟಿ ತೆಗೆಯಬೇಕಾಗಿದೆ. ಮುಂದೆ ಇಂತಹ ಘಟನೆ ನಡೆಯಬಾರದು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಮೂಲಕವೇ ತನಿಖೆ ನಡೆಸುವುದು ಸೂಕ್ತ ಎಂದರು.

ಪಾಕಿಸ್ತಾನ ಝಿಂದಾಬಾದ್ ಎಂದವರು ಯಾರು ಎನ್ನುವ ಪ್ರಶ್ನೆಗೆ ಅಲ್ಲಿದ್ದ ಪ್ರತ್ಯಕ್ಷ ಸಾಕ್ಷಿಗಳು ಮಾತ್ರ ಉತ್ತರ ನೀಡಲು ಸಾಧ್ಯ .ಈ ಪ್ರಕರಣದ ತನಿಖೆ ಪೊಲೀಸರಿಂದ ಸ್ವಲ್ಪ ವಿಳಂಬವಾಗಿದೆ. ಗೃಹ ಸಚಿವರು ಪೊಲೀಸರು ನೀಡಿದ ಆರಂಭಿಕ ಮಾಹಿತಿಯ ಆಧಾರದಲ್ಲಿ ಹೇಳಿಕೆ ನೀಡಿರುವ ಸಾಧ್ಯತೆ ಇದೆ. ಪೊಲೀಸ್ ಗುಪ್ತಚರ ವಿಭಾಗದ ಮೂಲಕ ಗುಂಪು ಹತ್ಯೆಯ ವಿವರ ಸಾರ್ವಜನಿಕರಿಗೆ ತಿಳಿಯುವ ಮೊದಲು ತಿಳಿದುಕೊಳ್ಳಬೇಕಾಗಿತ್ತು. ಈ ನಿಟ್ಟಿನಲ್ಲಿ ವಿಳಂಬವಾಗಿದೆ. ಸರಕಾರ ತನಿಖೆ ನಡೆಸುತ್ತಿದೆ. ಅದರ ಮೇಲೆ ನಮಗೆ ವಿಶ್ವಾಸವಿದೆ. ಈ ಗುಂಪು ಥಳಿತ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಾದರೆ ಸಮರ್ಥ ಅಧಿಕಾರಿಗಳ ಮೂಲಕ ತನಿಖೆ ನಡೆದರೆ ಮಾತ್ರ ಸಾಧ್ಯ. ಈ ಹಿಂದೆ ಬಂಟ್ವಾಳದಲ್ಲಿ ಹರೀಶ್ ಪೂಜಾರಿ ಎಂಬ ದಾರಿಹೋಕನನ್ನು ಗಡ್ಡ ಬಿಟ್ಟಿದ್ದ ಆತ ಮುಸ್ಲಿಂ ಎಂದು ಭಾವಿಸಿ ಕೊಲೆ ಮಾಡಿರುವುದು ತನಿಖೆಯ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಇದು ಅಪಾಯಕಾರಿ ಬೆಳವಣಿಗೆ. ಈ ರೀತಿ ಧರ್ಮ, ಮತಗಳ ಆಧಾರದಲ್ಲಿ ಗುರಿ ಮಾಡಿ ನಡೆದ ದುಷ್ಕೃತ್ಯಗಳಿಂದ ದೇಶಕ್ಕೆ ಸಾಕಷ್ಟು ರಾಜಕೀಯ ಸಾಮಾಜಿಕ ಮುಖಂಡರನ್ನು ನೀಡಿದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ಬಂದಿದೆ. ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳ ಬೇಕಾಗಿದೆ. ಕುಡುಪು ವಾಮಂಜೂರು ಪ್ರದೇಶದಲ್ಲಿ ನಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಮುಖ್ಯ ಮಂತ್ರಿಬಳಿ ನಿಯೋಗ ತೆರಳಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ಶಶಿಧರ ಹೆಗ್ಡೆ,ಕೆ.ಅಶ್ರಫ್, ಕಾಂಗ್ರೆಸ್ ವಿವಿಧ ಘಟಕಗಳ ಪದಾಧಿಕಾರಿಗಳಾದ ಶಾಹುಲ್ ಹಮೀದ್,ಬೇಬಿ ಕುಂದರ್,ಅಬ್ಬಾಸ್ ಅಲಿ,ಯೋಗೀಶ್ ಕುಮಾರ್, ಶಬ್ಬೀರ್ ಸಿದ್ದಕಟ್ಟೆ,ಫಾರೂಕ್, ನಿತ್ಯಾನಂದ ಶೆಟ್ಟಿ,ಪಿಯೂಸ್ ರೋಡ್ರಿಗಸ್, ಇಬ್ರಾಹಿಂ ನವಾಜ್, ಮಂಜುಳಾ ನಾಯಕ್ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X