ಅವಹೇಳನಕಾರಿ ಹೇಳಿಕೆ ಆರೋಪ; ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಕೀಲರಾದ ಜಗದೀಶ್ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ತಮ್ಮ ವಕೀಲರುಗಳೊಂದಿಗೆ ಜಗದೀಶ್ ಅವರು ಠಾಣೆಗೆ ಆಗಮಿಸಿದ್ದಾರೆ.
Next Story





