Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| 'ಪ್ರಜಾ ಸೌಧ'ದ ಉದ್ಘಾಟನಾ...

ಮಂಗಳೂರು| 'ಪ್ರಜಾ ಸೌಧ'ದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಗೆ ಸಿಎಂ ಇತಿಹಾಸ ಪಾಠ

►ಅಭಿವೃದ್ಧಿಯಲ್ಲಿ ರಾಜಕೀಯ ಬೇಡ ಎಂದ ಸಿಎಂ ಸಿದ್ದರಾಮಯ್ಯ ►'ಇದು ರಮಾನಾಥ ರೈ ಅವರ ಕನಸು' ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ16 May 2025 7:42 PM IST
share
ಮಂಗಳೂರು| ಪ್ರಜಾ ಸೌಧದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಗೆ ಸಿಎಂ ಇತಿಹಾಸ ಪಾಠ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಡಳಿತ ಕೇಂದ್ರ ಮಂಗಳೂರಿನ ಪಡೀಲ್‌ನಲ್ಲಿರುವ 'ಪ್ರಜಾ ಸೌಧ'ದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ಅವರಿಗೆ ʼಅಭಿವೃದ್ಧಿ ರಾಜಕೀಯʼದ ಪಾಠ ಮಾಡಿದ ಸ್ವಾರಸ್ಯಕರ ಘಟನೆ ಶುಕ್ರವಾರ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ಸಿಎಂ ಸಿದ್ದರಾಮಯ್ಯ ಮಾತನಾಡುವುದಕ್ಕೆ ಮುನ್ನ ತಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಪ್ರಧಾನಿ ಮೋದಿಯವರ ಕನಸಿನ ಕೂಸು. ಪ್ರಧಾನಿ ಸ್ಮಾರ್ಟ್‌ ಸಿಟಿ ಯೋಜನೆ ಕೊಡದಿದ್ದರೆ ಈ ಯೋಜನೆಯೇ ಇರುತ್ತಿರಲಿಲ್ಲ, ಎಂದು ಹೇಳಿದ್ದರು.


ವೇದವ್ಯಾಸ್ ಕಾಮತ್‌ ಮಾತು ಮುಗಿಸಿದ ನಂತರ ಮಾತು ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಶಾಸಕ ಕಾಮತ್‌ ಉದ್ದೇಶಿಸಿ ಇತಿಹಾಸ ತಿರುಚಬೇಡಿ, ಅಭಿವೃದ್ದಿಯಲ್ಲಿ ರಾಜಕೀಯ ಬೇಡ ಎಂದು ಹೇಳಿದರು.

"ಮಿಸ್ಟರ್ ಕಾಮತ್. ನನ್ನ ಸೌಭಾಗ್ಯ ಏನೆಂದರೆ ಈ ಕಟ್ಟಡಕ್ಕೆ ಗುದ್ದಲಿ ಪೂಜೆ ಮಾಡಿದ್ದೂ ನಾನೇ, ಇವತ್ತು ಉದ್ಘಾಟನೆ ಮಾಡಿದ್ದು ನಾನೇ. ನಿಮ್ಮ ಭಾಷಣದಲ್ಲಿ ಸ್ಮಾರ್ಟ್ ಸಿಟಿ ಪ್ರಧಾನಿ ಮೋದಿಯವರ ಕನಸು ಎಂದು ನೀವು ಹೇಳಿದ್ರಿ. ಅದು ನಿಜ. ಆದರೆ, ನಾವೂ ರಾಜ್ಯ ಸರ್ಕಾರವೂ ಕೂಡ ಸ್ಮಾರ್ಟ್ ಸಿಟಿಯ ಯೋಜನೆಗಳಿಗೆ ಶೇ.50ರಷ್ಟು ಅನುದಾನ ಕೊಡ್ತಿದ್ದೇವೆ ಎನ್ನುವುದು ಗೊತ್ತಿದೆಯಲ್ವಾ? ನಾಲಕ್ಕು ವರ್ಷ ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ರಲ್ವಾ. ಆಗ ಯಾಕೆ ಇದನ್ನು ಮಾಡ್ಲಿಲ್ಲ? ಆಗಲೂ ಸ್ಮಾರ್ಟ್‌ ಸಿಟಿ ಯೋಜನೆ ಇತ್ತು. ಆಗ ಯಾಕೆ ಖರ್ಚು ಮಾಡಲಿಲ್ಲ? ಆಗ ಖರ್ಚು ಮಾಡಿದ್ದಿದ್ದರೆ ಇಷ್ಟು ದಿನ ಬೇಕಿತ್ತಾ? 2015ರಲ್ಲಿ ಇದಕ್ಕೆ ಶಂಕು ಸ್ಥಾಪನೆ ಆಗಿದ್ದು".


"ಈ 'ಪ್ರಜಾ ಸೌಧ' ನಿರ್ಮಾಣಕ್ಕೆ ಕಾರಣ ರಮಾನಾಥ ರೈ. ಜಿಲ್ಲಾಡಳಿತಕ್ಕೆ ಹೊಸ ಕಚೇರಿ ಬೇಕೂಂತ ನನ್ನ ಮೇಲೆ ಒತ್ತಡ ತಂದದ್ದು ರಮಾನಾಥ ರೈ. ಇತಿಹಾಸ ತಿಳಿದುಕೊಳ್ಳಿ. ಇತಿಹಾಸವನ್ನು ತಿರುಚಿ ಹೇಳ್ಬೇಡಿ. ಯಾವತ್ತೂ ಸುಳ್ಳು ಹೇಳಬಾರದು. ಜನ ನಂಬಬೇಕಲ್ಲಾ. ರಾಜಕೀಯ ಮಾಡೋಣ. ಆದರೆ, ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಬೇಡ...." ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ. ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು ಎಂದು ಕರೆ ನೀಡಿದರು.

ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡ್ತೀವಿ. ಆಮೇಲೆ ಮತ್ತೆ 250 ಬೆಡ್ ಗಳನ್ನು ವಿಸ್ತರಿಸುತ್ತೇವೆ ಎಂದರು.


ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ.‌ ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.‌

ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ 15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು , ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಅವರಿಗೆ ಕಿವಿ ಮಾತು ಹೇಳಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X