Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯೆ ನೀಡಿದ ಶಿಕ್ಷಣ ಸಂಸ್ಥೆಯ...

ವಿದ್ಯೆ ನೀಡಿದ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಮನಸ್ಸು ಮಾಡಿ: ಡಾ. ಇಸ್ಮಾಯೀಲ್

ವಾರ್ತಾಭಾರತಿವಾರ್ತಾಭಾರತಿ19 Sept 2025 8:54 PM IST
share
ವಿದ್ಯೆ ನೀಡಿದ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಮನಸ್ಸು ಮಾಡಿ: ಡಾ. ಇಸ್ಮಾಯೀಲ್
ಮಂಗಳೂರು| ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಮಾವೇಶ

ಮಂಗಳೂರು, ಸೆ.19: ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ನಮ್ಮ ಹಿರಿಯರು ಕಟ್ಟಿ ಬೆಳೆಸಿದ ಈ ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಆದರೆ ಕಾಲಕ್ಕೆ ಅನುಗುಣವಾಗಿ ಬೆಳೆದಿಲ್ಲ ಎಂಬ ಬೇಸರವೂ ಇದೆ. ಹಾಗಂತ ಸುಮ್ಮನಿರದೆ ಇದರ ಅಭಿವೃದ್ಧಿಗೆ ಇಲ್ಲಿನ ಪ್ರತಿಯೊಬ್ಬ ಹಳೆಯ ವಿದ್ಯಾರ್ಥಿಯು ಶ್ರಮಿಸಬೇಕು. ಅದಕ್ಕಾಗಿ ನೀವು ನಿಮ್ಮ ಬುದ್ಧಿ ಉಪಯೋಗಿಸಿ, ಹೃದಯ ವಿಶಾಲಗೊಳಿಸಿ, ಮನಸ್ಸು ಮಾಡಿ ಎಂದು ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎನ್. ಇಸ್ಮಾಯೀಲ್ ಕರೆ ನೀಡಿದರು.

ನಗರದ ಬಂದರ್ ಕಂದಕ್‌ನಲ್ಲಿರುವ ಅಲ್ ಬದ್ರಿಯಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘ ರೂಪಿಸುವ ಸಲು ವಾಗಿ ಶುಕ್ರವಾರ ಬದ್ರಿಯಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಬದ್ರಿಯಾ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬದ್ರಿಯಾ ಶಿಕ್ಷಣ ಸಂಸ್ಥೆಯು ನಿಮಗೆ ಎಲ್ಲವನ್ನೂ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ನೀವು ಏನು ಕೊಡಬೇಕು ಎಂಬು ದನ್ನು ನಿರ್ಧರಿಸಿ. ಉಚಿತ ಶಿಕ್ಷಣ ನೀಡುವುದೇ ಈ ಸಂಸ್ಥೆಯ ರೂವಾರಿಗಳ ಕನಸಾಗಿತ್ತು. ಲಾಭದ ಉದ್ದೇಶ ಅವರಿಗೆ ಮುಖ್ಯವಾಗಿರಲಿಲ್ಲ. ಆರ್ಥಿಕವಾಗಿ ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಹಿರಿಯರ ಕನಸನ್ನು ನಾವೆಲ್ಲಾ ಮುಂದುವರಿಸಬೇಕಿದೆ. ಆರಂಭದಲ್ಲಿ 2,500ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಈಗ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಿದೆ. ಹಾಗಂತ ನಿರಾಶರಾಗದೆ ಮಂಗಳೂರಿನ ಇತರ ಶಿಕ್ಷಣ ಸಂಸ್ಥೆಗಳಿಗೆ ಸರಿಸಾಟಿಯಾಗಿ ಈ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಬೇಕಿದೆ ಎಂದು ಡಾ. ಎನ್. ಇಸ್ಮಾಯೀಲ್ ಹೇಳಿದರು.

ಕಾಲೇಜಿನ ನಿವೃತ್ತ ಉಪನ್ಯಾಸಕ ಸೈಯದ್ ಅಥಾವುಲ್ಲಾ ತಂಙಳ್ ನೂತನ ವೆಬ್‌ಸೈಟ್ ಅನಾವರಣಗೊಳಿಸಿದರು. ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ರಹ್ಮತ್ ಅಲಿ, ಪಿಯು ಕಾಲೇಜಿನ ಪ್ರಾಂಶುಪಾಲೆ ಸೀಮಾ ಎ.ಕೆ., ಪ್ರೌಢಶಾಲೆಯ ಆಂಗ್ಲಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಸರಳಾ ವರ್ಗಿಸ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಶಾಲಿನಿ ಕೆ., ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನುಝ್ರತುನ್ನಿಸಾ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಮತ್ತು ಉದ್ಯಮಿಗಳಾದ ಆಸಿಫ್ ಅಮ್ಯಾಕೊ, ಖಲೀಲ್, ಎಸ್.ಎಂ. ಫಾರೂಕ್ ಮತ್ತಿತರರು ಬದ್ರಿಯಾ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾತನಾಡಿದರಲ್ಲದೆ ಯೋಜನೆಗಳನ್ನು ಜಾರಿಗೊಳಿಸಲು ಸರ್ವರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಉದ್ಯಮಿ ಹಸನ್ ಶಹೀದ್ ಸ್ವಾಗತಿಸಿದರು. ಸುಹೈಲ್ ಸಹಾಲ್ ಕಿರಾಅತ್ ಪಠಿಸಿದರು. ಹಳೆ ವಿದ್ಯಾರ್ಥಿಗಳಾದ ಮುಹಮ್ಮದ್ ಮುಸ್ತಫಾ ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.

"ಶತಮಾನೋತ್ಸವದ ಹೊಸ್ತಿಲಲ್ಲಿರುವ ಬದ್ರಿಯಾ ಶಿಕ್ಷಣ ಸಂಸ್ಥೆಗೆ ಆಧುನಿಕ ಸ್ಪರ್ಶ ನೀಡಬೇಕಿದೆ. ಅದಕ್ಕೆ ಹಳೆ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ. ಈ ಸಂಸ್ಥೆಗಾಗಿ ಹಿರಿಯರು ವ್ಯಯಿಸಿದ ಶ್ರಮವನ್ನು ಯಾವ ಕಾರಣಕ್ಕೂ ವ್ಯರ್ಥಗೊಳಿಸಲು ಬಿಡಬಾರದು. ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ನಾವೆಲ್ಲಾ ಕಟಿಬದ್ಧರಾಗಿರಬೇಕು".

-ಮುಹಮ್ಮದ್ ಕುಂಞಿ, ಹಳೆ ವಿದ್ಯಾರ್ಥಿ ಹಾಗೂ ಶಾಂತಿ ಪ್ರಕಾಶನದ ವ್ಯವಸ್ಥಾಪಕ

"ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಈ ಸಂಸ್ಥೆಯನ್ನು ಅಭಿವೃದ್ಧಿಪಡಿಸುವುದಲ್ಲದೆ ನಗರದಿಂದ ಹೊರ ಭಾಗದಲ್ಲಿ 10 ಎಕರೆ ಜಮೀನು ಖರೀದಿಸಿ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಗುರಿ ಹಾಕಬೇಕಿದೆ".

-ಹಂಝ ಯು.ಎನ್., ನಿವೃತ್ತ ಪ್ರಾಂಶುಪಾಲರು, ಬದ್ರಿಯಾ ಕಾಲೇಜು

"ನಗರದ ಇತರ ಕಾಲೇಜಿನಿಂದ ತಿರಸ್ಕರಿಸಲ್ಪಟ್ಟ ವಿದ್ಯಾರ್ಥಿಗಳನ್ನು ಬದ್ರಿಯಾ ಶಿಕ್ಷಣ ಸಂಸ್ಥೆಯು ಬರಮಾಡಿ ಕೊಂಡಿದೆ. ನಾವಿಂದು ಸಮಾಜದಲ್ಲಿ ಗುರುತಿಸಿಕೊಳ್ಳಲು, ನಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ಈ ಶಿಕ್ಷಣ ಸಂಸ್ಥೆಯ ಪಾತ್ರ ಅಪಾರವಿದೆ. ನಾವು ಇಲ್ಲಿಂದ ತುಂಬಾ ಪಡೆದಿದ್ದೇವೆ ಮತ್ತು ಅದನ್ನು ಮರಳಿಸಲೇಬೇಕಾಗಿದೆ. ಅದಕ್ಕಾಗಿ 2020-28ರ ಹಲವು ಯೋಜನೆಯೊಂದಿಗೆ ಶತಮಾನೋತ್ಸವ ಕಾರ್ಯಕ್ರಮ ಆಚರಿಸಲು ಸನ್ನದ್ಧರಾಗಬೇಕಿದೆ".

-ಸಾಜಿದ್ ಎ.ಕೆ., ಹಳೆ ವಿದ್ಯಾರ್ಥಿ ಮತ್ತು ಉದ್ಯಮಿ

"ಈವತ್ತಿನ ಈ ಸಮಾಗಮವು ನಮ್ಮ ಪಾಲಿಗೆ ಹೊಸ ತಿರುವು ಆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ನಾಡಿನಾದ್ಯಂತ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಪೈಕಿ ಸಾವಿರಾರು ಮಂದಿಯನ್ನು ಸೀಮಿತ ಅವಧಿಯಲ್ಲಿ ಸಂಪರ್ಕಿ ಸಿದ್ದೇವೆ. ಮುಂದಿನ ದಿನಗಳಲ್ಲಿ ಬದ್ರಿಯಾ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ನಾವೆಲ್ಲಾ ಶಕ್ತಿಮೀರಿ ಪ್ರಯತ್ನಿಸಲಿದ್ದೇವೆ".

-ಸಂಶುದ್ದೀನ್, ಹಳೆ ವಿದ್ಯಾರ್ಥಿ ಮತ್ತು ಉದ್ಯಮಿ






















share
ವಾರ್ತಾಭಾರತಿ
ವಾರ್ತಾಭಾರತಿ
Next Story
X