ಮಂಗಳೂರು| ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದಲ್ಲಿ ಆಟೋಟ ಸ್ಪರ್ಧೆಗಳನ್ನು ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.
ಜಿಲ್ಲಾಮಟ್ಟದ ಈ ಕ್ರೀಡಾಕೂಟದಲ್ಲಿ ಅಂಡರ್ -14 ಬಾಲಕರಿಗಾಗಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣದಲ್ಲಿರುವ ದೇವಮಾತ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಎಂ.ಎಚ್. ಮೊಹಮ್ಮದ್ ಮಿಕ್ದಾದ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೂ ಮೊಹಮ್ಮದ್ ಮಿಕ್ದಾದ್ ಆಯ್ಕೆಯಾಗಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದಿದ್ದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು.
ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಮಿಕ್ದಾದ್, ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ಮುಸ್ತಫಾ ಎಂ ಎಚ್ ಹಾಗೂ ಫಾಮಿದಾ ದಂಪತಿಯ ಪುತ್ರ.







