Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಪೆನ್ನುಗಳ ಪ್ರತಿರೋಧಕ್ಕೆ...

ಮಂಗಳೂರು| ಪೆನ್ನುಗಳ ಪ್ರತಿರೋಧಕ್ಕೆ ಗನ್ನುಗಳ ಉತ್ತರ ಖೇದಕರ: ಡಾ. ಮೀನಾ ಕಂದಸಾಮಿ

ಪಿಪಿ ಗೋಮತಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Dec 2024 7:30 PM IST
share
ಮಂಗಳೂರು| ಪೆನ್ನುಗಳ ಪ್ರತಿರೋಧಕ್ಕೆ ಗನ್ನುಗಳ ಉತ್ತರ ಖೇದಕರ: ಡಾ. ಮೀನಾ ಕಂದಸಾಮಿ

ಮಂಗಳೂರು: ಸಮಾಜದಲ್ಲಿ ತಮ್ಮ ಬರವಣಿಗೆ, ಚಿಂತನೆಯ ಮೂಲಕ ಪ್ರತಿರೋಧ ತೋರುವ ಬರಹಗಾರರನ್ನು, ಪ್ರಗತಿಪರರನ್ನು ಗುಂಡಿಕ್ಕಿ ಕೊಲ್ಲುವುದು ಮಾಮೂಲಿನ ಸಂಗತಿಯಾಗಿರುವುದು ಖೇದಕರ ಎಂದು ಕವಯಿತ್ರಿ, ಬರಹಗಾರ್ತಿ ಡಾ. ಮೀನಾ ಕಂದಸಾಮಿ ಅಭಿಪ್ರಾಯಿಸಿದ್ದಾರೆ.

ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಪಿ.ಪಿ. ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಕರ್ನಾಟಕ ತಿಯಲಾಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಭಾಗಿತ್ವದಲ್ಲಿ ಆಯೋಜಿಸಲಾದ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಸಾಹಿತಿ ಎಂ.ಎಂ. ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ತಮ್ಮ ಬರಹಗಳು, ಮಾತಿನ ಮೂಲಕ ವೈಚಾರಿಕ ಪ್ರತಿರೋಧಗಳನ್ನು ಒಡ್ಡುವವರನ್ನು ಈ ರೀತಿಯಾಗಿ ಹತ್ಯೆ ಮಾಡುವಂತಹ ಕ್ರಿಯೆಗಳು ಯಾವುದೇ ಭಕ್ತಿ ಪಂಥದ ಕಾಲದಲ್ಲಿ ನಡೆಯುತ್ತಿರುವುದಲ್ಲ. ಇದು ನಮ್ಮ ಅವಧಿಯಲ್ಲಿ ನಡೆಯುತ್ತಿದೆ. ಅದರಲ್ಲಿಯೂ ಪ್ರಗತಿಪರ ರಾಜ್ಯಗಳಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದಂತಹ ರಾಜ್ಯಗಳಲ್ಲಿ ಈ ರೀತಿಯ ಮನಸ್ಥಿತಿಯನ್ನು ನೋಡುವಾಗ ಜನ ತಮಗಿಷ್ಟವಿಲ್ಲದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂಬುದು ಸ್ಪಷ್ಟಪಡಿಸುತ್ತದೆ ಎಂದವರು ಹೇಳಿದರು.


ದೇಶದಲ್ಲಿ ವಿಪಕ್ಷಗಳನ್ನು ಮಣಿಸುವ ನಿಟ್ಟಿನಲ್ಲಿ ಇಡಿ, ಸಿಬಿಐ ಮೂಲಕ ಕೇಂದ್ರ ಸರಕಾರ ಮಾಡುತ್ತಿದ್ದರೆ, ಇಂತಹ ಸಾಮಾಜಿಕವಾಗಿ ಪ್ರತಿರೋಧ ಒಡ್ಡುವವರನ್ನು ನಗರ ನಕ್ಸಲರೆಂಬ ಹಣೆಪಟ್ಟಿಯ ಮೂಲಕವೂ ಹಣಿಯಲಾಗುತ್ತದೆ. ಬರಹಗಾರರನ್ನು, ಪತ್ರಕರ್ತರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟುವ ಕಾರ್ಯ ಮಾಡಲಾಗುತ್ತಿದೆ. ಕಳೆದ ಕೆಲ ವರ್ಷಗಳಿಂದೀಚೆಗೆ ಇಂತಹ ಪ್ರಕ್ರಿಯೆಗಳು ಸಾಮಾನ್ಯವಾಗಿ ಬಿಟ್ಟಿವೆ ಎಂದವರು ವಿಶ್ಲೇಷಿಸಿದರು.

ಪ್ರೊ. ಸಾಯಿಬಾಬಾ, ಲೇಖಕ ವರವರ ರಾವ್, ಸ್ಟಾನ್ ಸ್ವಾಮಿ ಮುಂತಾದ ಲೇಖಕರು, ಚಿಂತಕರು, ಬುದ್ಧಿಜೀವಿಗಳನ್ನು ಅವರ ಚಿಂತನೆಗಾಗಿ ಭಯೋತ್ಪಾದಕರಂತೆ ಇಲ್ಲಿ ನಡೆಸಿಕೊಳ್ಳಲಾಯಿತು. ಅವರನ್ನು ವರ್ಷಗಟ್ಟಲೆ ಜೈಲಿನಲ್ಲಿ ಕೊಳೆಯುವಂತೆ ಮಾಡಲಾಯಿತು. ಸುಳ್ಳಿನ ಬಂಡವಾಳ ಬಯಲು ಮಾಡಿ ಸತ್ಯವನ್ನು ಜನರಿಗೆ ತಲುಪಿಸುವ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಝುಬೇರ್ ರಂತಹವರ ಮೇಲೆ ದೇಶದ್ರೋಹದಂತಹ ಅತ್ಯಂತ ಕಠಿಣ ಪ್ರಕರಣಗಳನ್ನು ದಾಖಲಿಸಿ ದಮನಿಸಲಾಗುತ್ತಿದೆ. ಮೊದಲು ಉಗ್ರ ಕಾನೂನುಗಳನ್ನು ರಾಜಕಾರಣಿಗಳಿಗಾಗಿ ಹೆಚ್ಚು ಬಳಸಲಾಗುತ್ತಿತ್ತು. ಈಗ ಅದನ್ನು ಬುದ್ಧಿಜೀವಿಗಳು ಹಾಗು ಲೇಖಕರ ವಿರುದ್ಧ ಹೆಚ್ಚು ಬಳಸಲಾಗುತ್ತಿದೆ. ಬುದ್ಧಿಜೀವಿಗಳು ಮಾನವ ಹಕ್ಕುಗಳಿಗಾಗಿ ಹೊರಡುವ ಬದಲು ಸರಕಾರದ ದಬ್ಬಾಳಿಕೆಯಿಂದ ತಾವು ಸ್ವತಃ ಬಚಾವಾಗಲು ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಬ್ಬರಲ್ಲೂ ಅತೀ ಎಚ್ಚರಿಕೆಯ ಭಾವನೆ ಮೂಡಿದೆ ಎಂದು ಮೀನಾ ಕಂದಸಾಮಿ ಕಳವಳ ವ್ಯಕ್ತಪಡಿಸಿದರು.


ಸಂತ್ರಸ್ತರ ಕತೆಯನ್ನು ಜಗತ್ತಿಗೆ ತಿಳಿಸುವುದು ಲೇಖಕರ ಕರ್ತವ್ಯ. ಈಗಾಗಲೇ ಅನ್ಯಾಯಕ್ಕೆ ಒಳಗಾಗಿ ಕಂಗಾಲಾಗಿ ಅದನ್ನು ಪ್ರತಿಭಟಿಸುತ್ತಿರುವವರೇ ಅವರ ಕತೆಯನ್ನು ಎಲ್ಲರಿಗೂ ಹೇಳಬೇಕು ಎಂದು ನಿರೀಕ್ಷಿಸುವುದು ತಪ್ಪಾಗುತ್ತದೆ. ಆಗ ಅವರಿಗೆ ಲೇಖಕರು, ಪತ್ರಕರ್ತರು ಧ್ವನಿಯಾಗಬೇಕು. ಕೇವಲ ಬರೆಯುವುದು ಮಾತ್ರವಲ್ಲ ಇವತ್ತಿನ ದಬ್ಬಾಳಿಕೆಯ ಕಾಲಘಟ್ಟದಲ್ಲಿ ಒಳ್ಳೆಯ ಸಾಹಿತ್ಯ, ಲೇಖನ, ಅನುಭವಗಳನ್ನು ಓದುವುದೂ ಒಂದು ಪ್ರತಿರೋಧ ಎಂದು ಮೀನಾ ಕಂದಸಾಮಿ ಹೇಳಿದರು.

ಸಭಿಕರ ಜತೆಗಿನ ಸಂವಾದದ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಾ. ಮೀನಾ ಕಂದಸಾಮಿ, ನನ್ನ ಅಮ್ಮ ಐಐಟಿಯಲ್ಲಿ ಪ್ರೊಫೆಸರ್ ಆಗಿದ್ದವರು. ಆ ಸಮಯದಲ್ಲೇ ಸುಮಾರು 20 ವರ್ಷಗಳ ಕಾಲ ಮಂಡಲ ಕಮಿಷನ್‌ನಲ್ಲಿ ಮೀಸಲಾತಿಗಾಗಿ ಹೋರಾಟ ನಡೆಸಿದವರು. ಇತ್ತೀಚೆಗೆ ಕಾಂಗ್ರೆಸ್ ನಾಯಕರೊಬ್ಬರು ಐಐಟಿಗಳಲ್ಲಿ ಶೇ. 85ರಷ್ಟು ಭಾಗ ಮೇಲ್ವರ್ಗದ ಪ್ರಾಬಲ್ಯದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಕಳೆದ 20 ವರ್ಷಗಳಿಂದಲೂ ಈ ಸಮಸ್ಯೆ ಕಾಡುತ್ತಿದೆಯಾದರೂ ಇದೀಗ ಈ ಬಗ್ಗೆ ರಾಜಕೀಯವಾಗಿ ಪ್ರತಿರೋಧ ವ್ಯಕ್ತವಾಗಿರುವುದು ಆಶಾದಾಯಕ ಎಂದವರು ಹೇಳಿದರು.



ಅಲೋಶಿಯಸ್ ಪದವಿ ಪಠ್ಯದಲ್ಲಿ ಡಾ. ಮೀನಾ ಕಂದಸಾಮಿ ಕವನ

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಪದವಿ ಪಠ್ಯದಲ್ಲಿ ಡಾ. ಮೀನಾ ಕಂದಸಾಮಿ ಅವರ ಕವನವನ್ನು ಸೇರ್ಪಡೆಗೊಳಿಸಿರುವ ಬಗ್ಗೆ ಕಾಲೇಜಿನ ಪ್ರಾಧ್ಯಾಪಕ ಡಾ. ರತನ್ ಮಾಹಿತಿ ನೀಡಿದರು.

ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ಪತ್ರಕರ್ತೆ ಡಾ. ಸಿಂಧು ಮಂಜೇಶ್ ಉಪಸ್ಥಿತರಿದ್ದರು.

ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ತಿಯಲಾಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಕ್ರಿಸ್ಟೋಫರ್ ಜಾರ್ಜ್ ವಂದಿಸಿದರು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X