ಮಂಗಳೂರು | ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ನ.21: ನಗರ ಪೊಲೀಸ್ ಕಮಿಷನರೆಟ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ನಗರ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕ್ರೀಡಾಕೂಟ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕರ್ತವ್ಯದ ಒತ್ತಡದಿಂದ ಒಂದಷ್ಟು ನಿರಾಳತೆ ಅನುಭವಿಸಲು ಸಾಧ್ಯವಿದೆ ಎಂದರು.
ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಸಶಸ್ತ್ರ ಮೀಸಲು ಪಡೆ ಡಿಸಿಪಿ ಉಮೇಶ್ ಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್ ಎಸ್ಸೈ ರಾಧಾಕೃಷ್ಣ ಕ್ರೀಡಾಜ್ಯೋತಿಯ ಪಥ ಸಂಚಲನ ಮಾಡಿದರು. ವಿವಿಧ ಪೊಲೀಸ್ ತಂಡಗಳ ಆಕರ್ಷಕ ಪಥ ಸಂಚಲನ ನಡೆಯಿತು.
ಡಿಸಿಪಿ ಮಿಥುನ್ ಎಚ್.ಎನ್. ಸ್ವಾಗತಿಸಿದರು. ಎಡಿಷನಲ್ ಎಸ್ಪಿಅನಿಲ್ ಕುಮಾರ್ ಭೂಮರೆಡ್ಡಿ ವಂದಿಸಿದರು. ಬಂಟ್ವಾಳ ಠಾಣೆ ಕಾನ್ಸ್ಟೇಬಲ್ ವಿವೇಕ್ ಮತ್ತು ಡಿಎಆರ್ ಎಆರ್ ಎಸ್ಸೈ ತಿಲಕ್ ಕಾರ್ಯಕ್ರಮ ನಿರೂಪಿಸಿದರು.
ನ.23ರಂದು ಸಂಜೆ 4ಕ್ಕೆ ಸಮಾರೋಪ ನಡೆಯಲಿದೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟನೆ ತಿಳಿಸಿದೆ.







