Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರೀಕ್ಷಾ ಶುಲ್ಕ ಪಾವತಿಸಿದರೂ ಮಂಗಳೂರು...

ಪರೀಕ್ಷಾ ಶುಲ್ಕ ಪಾವತಿಸಿದರೂ ಮಂಗಳೂರು ವಿವಿಯಲ್ಲಿ ಹಾಲ್ ಟಿಕೆಟ್‌ ಕೊಡುತ್ತಿಲ್ಲ: ಆರೋಪ

ವಾರ್ತಾಭಾರತಿವಾರ್ತಾಭಾರತಿ9 Dec 2024 2:47 PM IST
share
ಪರೀಕ್ಷಾ ಶುಲ್ಕ ಪಾವತಿಸಿದರೂ ಮಂಗಳೂರು ವಿವಿಯಲ್ಲಿ ಹಾಲ್ ಟಿಕೆಟ್‌ ಕೊಡುತ್ತಿಲ್ಲ: ಆರೋಪ

ಮಂಗಳೂರು, ಡಿ.9: ಪದವಿ ಶಿಕ್ಷಣದ ಪರೀಕ್ಷಾ ಶುಲ್ಕವನ್ನು ಪಾವತಿಸಿದರೂ, ಆಡಳಿತ ಮಂಡಳಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ: ಶುಲ್ಕ ಪಾವತಿ ಸ್ವೀಕೃತಿಯಾಗಿಲ್ಲ ಎನ್ನುವ ಕಾರಣ ನೀಡಿ ಮತ್ತೆ ಶುಲ್ಕ ಕಟ್ಟುವಂತೆ ಒತ್ತಡ ಹೇರಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಕಾಲೇಜು ಆಡಳಿತ ಮಂಡಳಿ ಶುಲ್ಕ ಪಾವತಿಯಾಗಿದೆ ಎಂದು ಹೇಳುತ್ತಿದ್ದು, ಹಾಲ್ ಟಿಕೆಟ್ ಬೇಕಾದರೆ ದೂರು ಹಿಂಪಡೆಯುವಂತೆ ಒತ್ತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಮತ್ತು ಹೆತ್ತವರು ಆರೋಪಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಣಾಜೆಯ ಪಿ.ಎ. ಕಾಲೇಜಿನ ವಿದ್ಯಾರ್ಥಿ ಆಯಿಷಾ ಅಫ್ನಾ, ತಾನು ದ್ವಿತೀಯ ವರ್ಷದ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ. ನ.18ರಂದು ಸಮಗ್ರ ವಿಶ್ವವಿದ್ಯಾನಿಯ ಹಾಗೂ ಕಾಲೇಜು ನಿರ್ವಹಣ ವ್ಯವಸ್ಥೆ (ಯುಯುಸಿಎಂಎಸ್) ಪೋರ್ಟಲ್‌ನಲ್ಲಿ ಪರೀಕ್ಷಾ ಶುಲ್ಕ 3,200 ರೂ. ಪಾವತಿಸಿದ್ದು, ಅದು ಯಶಸ್ವಿಯಾಗಿ ಸ್ವೀಕೃತಿಯಾಗಿದೆ. ಆದರೆ ಕಾಲೇಜು ಆಡಳಿತ ಮಂಡಳಿ ಕಾಲೇಜಿನ ಒಟ್ಟು 26 ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಯಾಗಿಲ್ಲ ಮತ್ತೊಮ್ಮೆ ಪಾವತಿಸುವಂತೆ ಒತ್ತಡ ಹೇರಿದೆ. ಈ ಬಗ್ಗೆ ಪರಿಶೀಲಿಸಿದಾಗ ವಿದ್ಯಾರ್ಥಿಗಳು ಕಟ್ಟಿದ ಹಣ ಕಂಪ್ಯೂಟರ್‌ನಲ್ಲಿ ‘ಇನಿಶಿಯೇಟೆಡ್’ ಎಂದು ತೋರಿಸುತ್ತಿತ್ತು ಎಂದು ತಿಳಿಸಿದರು.

ಈ ಬಗ್ಗೆ ಡಿ.3ರಂದು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಅದರ ಪ್ರತಿಯನ್ನು ಉನ್ನತ ಶಿಕ್ಷಣ ಸಚಿವರು, ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ಮತ್ತು ಪೊಲೀಸ್ ಆಯುಕ್ತರಿಗೆ ನೀಡಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆಡಳಿತ ಮಂಡಳಿಯಿಂದ ದೂರು ವಾಪಾಸು ಪಡೆಯುವಂತೆ ಒತ್ತಡ ಹೇರಲಾಗಿತ್ತು. ಈ ನಡುವೆ ಡಿ.7ರಂದು ಮಧ್ಯಾಹ್ನ ಬಳಿಕ ಪೋರ್ಟಲ್‌ನಲ್ಲಿ ಹಣ ಪಾವತಿ ‘ಸಕ್ಸಸ್’ ಎಂದು ತೋರಿಸಿದೆ. ಡಿ.12ರಂದು ಸೆಮಿಸ್ಟರ್ ಪರೀಕ್ಷೆಯಿದ್ದು, ಇಲ್ಲಿಯ ವರೆಗೆ ಹಾಲ್ ಟಿಕೇಟ್ ನೀಡಿಲ್ಲ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಪರ ವಕೀಲ ಸಹೀದ್ ಬಡ್ಡೂರು ಅವರು ಮಾತನಾಡಿ, ವಿದ್ಯಾರ್ಥಿಗಳಿಂದ ಮತ್ತೊಮ್ಮೆ ಹಣ ಪಡೆಯುವ ವ್ಯವಸ್ಥಿತ ಜಾಲ ಕಾರ್ಯಾಚರಿಸುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಈ ಬಗ್ಗೆ ತನಿಖೆ ನಡೆಸಿ, ಬಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ರೇಷ್ನಾ ಮಿಸ್ರಿಯಾ, ವಿದ್ಯಾರ್ಥಿನಿಯ ತಂದೆ ಅಬ್ದುಲ್ ಖಾದರ್ ಕೆ.ಎಚ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X