Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ...

ದ.ಕ.ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಮಹಿಳೆಯ ಕೊಲೆ ಪ್ರಕರಣ: ಆರೋಪಿ ದಂಪತಿಗೆ ಜೀವಾವಧಿ ಶಿಕ್ಷೆ

ಸಹಕರಿಸಿದ ಆರೋಪಿಗೂ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ24 Sept 2024 7:02 PM IST
share
ದ.ಕ.ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಮಹಿಳೆಯ ಕೊಲೆ ಪ್ರಕರಣ: ಆರೋಪಿ ದಂಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಐದು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಗೆ ಜೀವಾವಧಿ ಮತ್ತು ಈ ದಂಪತಿಗೆ ಸಹಕರಿಸಿದ ಇನ್ನೋರ್ವ ಆರೋಪಿಗೆ ಆರುವರೆ ತಿಂಗಳು ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಮಂಗಳವಾರ ತೀರ್ಪು ನೀಡಿದ್ದಾರೆ.

ನಗರದ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ನಿವಾಸಿಗಳಾಗಿದ್ದ ಜೋನಸ್ ಸ್ಯಾಮ್ಸನ್ ಆಲಿಯಾಸ್ ಜಾನ್ಸ್ ಜೌಲಿನ್ ಸ್ಯಾಮ್ಸನ್ (40) ಆತನ ಪತ್ನಿ ವಿಕ್ಟೋರಿಯಾ ಮಥಾಯಿಸ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ಈ ದಂಪತಿಗೆ ಸಹಕರಿಸಿದ್ದ ಮರಕಡದ ತಾರಿಪಾಡಿ ಗುಡ್ಡೆಯ ರಾಜು (34) ಎಂಬಾತನಿಗೆ ಆರುವರೆ ತಿಂಗಳ ಶಿಕ್ಷೆ ವಿಧಿಸಲಾಗಿದೆ.

*ಘಟನೆಯ ವಿವರ: 2019ರ ಮೇ 11ರಂದು ಫಂಡ್‌ನ (ಕುರಿಫಂಡ್) ಹಣದ ವಿಚಾರವಾಗಿ ಈ ಕೊಲೆ ನಡೆದಿತ್ತು. ಇದು ನಗರವನ್ನು ಭಾರೀ ತಲ್ಲಣಗೊಳಿಸಿತ್ತು. ಆರೋಪಿ ದಂಪತಿಯು ತನ್ನ ಮನೆಯಲ್ಲಿಯೇ ಅತ್ತಾವರದ ಶ್ರೀಮತಿ ಶೆಟ್ಟಿ ಅವ ರನ್ನು ಕೊಂದು ಮೃತದೇಹವನ್ನು 29 ತಂಡುಗಳನ್ನಾಗಿ ಮಾಡಿ ನಗರದ ಹಲವು ಕಡೆಗಳಲ್ಲಿ ಎಸೆದಿದ್ದ ಬಗ್ಗೆ ಕದ್ರಿ ಠಾಣೆ ಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಶ್ರೀಮತಿ ಶೆಟ್ಟಿ (42) ಅವರು ಅತ್ತಾವರದಲ್ಲೇ ಶ್ರೀ ಪೊಳಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅಲ್ಲದೆ ಕುರಿ ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರು. ಈ ಕುರಿಫಂಡ್‌ನಲ್ಲಿ ಜೋನಸ್ 2 ಸದಸ್ಯತ್ವವನ್ನು ಹೊಂದಿದ್ದು,ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.

2019ರ ಮೇ 11ರಂದು ಬೆಳಗ್ಗೆ 9:15ಕ್ಕೆ ಹಣ ಕೇಳುವುದಕ್ಕಾಗಿ ಆರೋಪಿ ಜೋನಸ್‌ನ ಮನೆಗೆ ಶ್ರೀಮತಿ ಶೆಟ್ಟಿ ತೆರಳಿದ್ದರು. ಅಲ್ಲಿ ಮಾತಿಗೆ ಮಾತು ಬೆಳೆದು ಜೋನಸ್ ಮರದ ತುಂಡಿನಿಂದ ಶ್ರೀಮತಿ ಶೆಟ್ಟಿಯ ತಲೆಗೆ ಹೊಡೆದಿದ್ದ. ಪ್ರಜ್ಞಾಹೀನರಾಗಿದ್ದ ಶ್ರೀಮತಿ ಶೆಟ್ಟಿಯನ್ನು ಜೋನಸ್ ಮತ್ತಾತನ ಪತ್ನಿ ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ದು ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ರುಂಡ, ಕೈ, ಕಾಲು ಹಾಗೂ ಇತರ ಭಾಗಗಳನ್ನು 29 ತುಂಡುಗಳನ್ನು ಮಾಡಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಇಟ್ಟಿದ್ದರು. ಶ್ರೀಮತಿ ಶೆಟ್ಟಿಯ ವ್ಯಾನಿಟಿ ಬ್ಯಾಂಗ್ ಮತ್ತು ಚಪ್ಪಲಿಯನ್ನು ಆರೋಪಿಗಳು ಮನೆಯ ಒಲೆಯಲ್ಲಿ ಸುಟ್ಟು ಹಾಕಿದ್ದರು.

ಕೃತ್ಯ ನಡೆದ ಮೂರು ದಿನದ ಬಳಿಕ ನಗರದ ಕದ್ರಿ ಬಳಿಯ ಅಂಗಡಿಯೊಂದರ ಬಳಿ ರುಂಡ ಪತ್ತೆಯಾದ ನಂತರ ಈ ಕೊಲೆ ಪ್ರಕರಣವು ಬೆಳಕಿಗೆ ಬಂದಿತ್ತು. ನಂತರ ನಂದಿಗುಡ್ಡೆಯಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದವು.

ಈ ಪ್ರಕರಣದಲ್ಲಿ ಮರಕಡದ ತಾರಿಪಾಡಿ ಗುಡ್ಡೆಯ ರಾಜು ಎಂಬಾತನೂ ಸಹಕರಿಸಿದ್ದ. ಮೂವರನ್ನೂ ಬಂಧಿಸಿದ್ದ ಕದ್ರಿ ಠಾಣೆಯ ನಿರೀಕ್ಷಕ ಮಹೇಶ್ ಎಂ. ತನಿಖೆ ಕೈಗೊಂಡಿದ್ದರು. ಇನ್ಸ್‌ಪೆಕ್ಟರ್ ಶಾಂತಾರಾಂ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್ ರಾವ್ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. 48 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿ ದ್ದರು. 141 ದಾಖಲೆಗಳನ್ನು ಗುರುತಿಸಲಾಗಿತ್ತು.

ಜೋನಸ್ ಮತ್ತು ವಿಕ್ಟೋರಿಯಾ ವಿರುದ್ಧ ಕೊಲೆ, ಸುಲಿಗೆ ಮತ್ತು ಸಾಕ್ಷ್ಯನಾಶ ಹಾಗೂ ರಾಜು ವಿರುದ್ಧ ಕೊಲೆಗೆ ಸಹಾಯ, ಕಳವು ಮಾಡಿರುವ ಸೊತ್ತುಗಳನ್ನು ಇಟ್ಟುಕೊಂಡಿರುವ ಆರೋಪಗಳು ಸಾಬೀತಾಗಿದೆ ಎಂದು ನ್ಯಾಯಾಧೀಶರು ಸೆ.13ರಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಸೆ.23ರಂದು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

ದಂಪತಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಐಪಿಸಿ 201ರಡಿ (ಸಾಕ್ಷ್ಯ ನಾಶ) 7 ವರ್ಷಗಳ ಸಾದಾ ಸಜೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಿ ದ್ದಾರೆ. ಈ ದಂಡ ತೆರಲು ವಿಫಲವಾದಲ್ಲಿ ಮತ್ತೆ 3 ತಿಂಗಳ ಸಾದಾ ಸಜೆ, ಐಪಿಸಿ 392 ಜತೆಗೆ 34ರಡಿ (ಸುಲಿಗೆ)ಯಲ್ಲಿ 5 ವರ್ಷ ಸಾದಾ ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ, ದಂಡ ಪಾವತಿಸುವಲ್ಲಿ ವಿಫಲನಾದರೆ 6 ತಿಂಗಳ ಸಾದಾ ಸಜೆ ವಿಧಿಸಿದ್ದಾರೆ.

3ನೇ ಆರೋಪಿಗೆ ಐಪಿಸಿ 414ರಡಿ (ಆಶ್ರಯ)ಯಲ್ಲಿ ಆರೂವರೆ ತಿಂಗಳು ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿ ಸಿದೆ. ದಂಡದ ಮೊತ್ತದಲ್ಲಿ ಶ್ರೀಮತಿ ಶೆಟ್ಟಿಯ ತಾಯಿಗೆ 75 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರ ವತಿುಂದ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ನೀಡಬೇಕೆಂದು ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ.

ಜೀವಾವಧಿ ಶಿಕ್ಷೆಗೊಳಗಾಗಿದ್ದ ಆರೋಪಿ ಜೋನಸ್ ಹಂದಿ ಮಾಂಸದ ಕೆಲಸ ಮಾಡುತ್ತಿದ್ದ. ಅಲ್ಲದೆ ಸಂಬಂಧಿಕರ ಹತ್ಯೆಯ ಪ್ರಕರಣದ ಆರೋಪಿಯೂ ಆಗಿದ್ದ. ಫಾಸ್ಟ್‌ಫುಡ್ ಅಂಗಡಿಯೊಂದನ್ನು ಕೂಡ ನಡೆಸುತ್ತಿದ್ದ. ಮನೆಯಲ್ಲಿ ಜೋನಸ್ ಮತ್ತು ವಿಕ್ಟೋರಿಯಾ ಮಾತ್ರ ನೆಲೆಸುತ್ತಿದ್ದರು. ಇನ್ನೋರ್ವ ಆರೋಪಿ ರಾಜು ಎಂಬಾತ ಜೋನಸ್‌ನ ಗೆಳೆಯನಾಗಿದ್ದು, ಆತನಿಗೆ ಕೊಲೆಯ ವಿಚಾರ ತಿಳಿಸಿ ಶ್ರೀಮತಿ ಶೆಟ್ಟಿಯ ಕೆಲವು ಆಭರಣಗಳನ್ನು ಕೂಡಾ ಆತನಿಗೂ ನೀಡಿದ್ದ. ಇದಕ್ಕೆ ಪ್ರತಿಯಾಗಿ ರಾಜು ಇಬ್ಬರು ಆರೋಪಿಗಳು ಒಂದು ದಿನ ತನ್ನ ಮನೆಯಲ್ಲಿ ಉಳಿದುಕೊಳ್ಳಲು ಆಶ್ರಯ ನೀಡಿದ್ದ.

*ಆತ್ಮಹತ್ಯೆಗೆ ಯತ್ನಿಸಿದ್ದ: ಹೆಲ್ಮೆಟ್‌ನೊಳಗೆ ರುಂಡವನ್ನಿಟ್ಟು ಕೆಪಿಟಿ ಬಳಿಯ ಅಂಗಡಿಯಲ್ಲಿ ಹೋಗುವ ದೃಶ್ಯವನ್ನು ಸಿಸಿ ಕ್ಯಾಮರಾದಲ್ಲಿ ಸೆರೆಯಾದುದರ ಆಧಾರದ ಮೇಲೆ ತನಿಖೆ ನಡೆಸಿದ್ದ ಕದ್ರಿ ಪೊಲೀಸರು ಶ್ರೀಮತಿ ಶೆಟ್ಟಿಯೊಂದಿಗೆ ಹಣಕಾಸು ವ್ಯವಹಾರ ನಡೆಸುತ್ತಿದ್ದವರ ವಿಚಾರಣೆಗೊಳಪಡಿಸಿದರು. ಆವಾಗ ಜೋನಸ್ ಕೂಡ ಈಕೆಯೊಂದಿಗೆ ಹಣಕಾಸು ವ್ಯವಹಾರ ನಡೆಸುತ್ತಿದ್ದುದು ಬೆಳಕಿಗೆ ಬಂದಿತ್ತು. ಅದರಂತೆ ವೆಲೆನ್ಸಿಯಾ-ಸೂಟರ್‌ಪೇಟೆಯಲ್ಲಿರುವ ಆತನ ಮನೆಗೆ ಪೊಲೀಸರು ದಾಳಿ ಮಾಡಿದಾಗ ಜೋನಸ್ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಪೊಲೀಸರು ಆರೋಪಿಯನ್ನು ಅಪಾಯದಿಂದ ಪಾರು ಮಾಡಿ ಆಸ್ಪತ್ರೆಯಲ್ಲಿ ಪೊಲೀಸ್ ಬೆಂಗಾವಲಿನಲ್ಲಿ ಚಿಕಿತ್ಸೆ ಕೊಡಿಸಿದ್ದರು.

*ಮರಣದಂಡನೆಗೆ ಹೈಕೋರ್ಟ್‌ಗೆ ಮೇಲ್ಮನವಿ: ಆರೋಪಿಗಳಾದ ಜೋಸನ್ ಸ್ಯಾಮ್ಸನ್ ಮತ್ತು ವಿಕ್ಟೋರಿಯಾ ಮಥಾಯಿಸ್ ಅತ್ತಾವರದ ಶ್ರೀಮತಿ ಶೆಟ್ಟಿ ಅವರನ್ನು ಕೊಲೆ ಮಾಡಿ ಸುಮಾರು 29 ತುಂಡುಗಳನ್ನಾಡಿ ಮಾಡಿ ನಗರದ ನಾನಾ ಕಡೆ ಬಿಸಾಡಿದ್ದರು. ಇದು ಭೀಭತ್ಸ, ತೀರಾ ಅಪರೂಪದ ಪ್ರಕರಣವಾಗಿದೆ. 1ನೇ ಆರೋಪಿಗೆ ಮರಣದಂಡನೆ ಶಿಕ್ಷೆ ನೀಡುವ ನಿರೀಕ್ಷೆಯಿತ್ತು. ಆದರೆ ಜೀವಾವಧಿ ಶಿಕ್ಷೆ ವಿಧಿಸಿದ ಕಾರಣ 1ನೇ ಆರೋಪಿಗೆ ಮರಣ ದಂಡನೆ ಹಾಗೂ 3ನೇ ಆರೋಪಿ ವಿಷಯ ಗೊತ್ತಿದ್ದರೂ ಮುಚ್ಚಿಟ್ಟ ಕಾರಣ ತೀರ್ಪು ಪ್ರತಿ ಸಿಕ್ಕ ಬಳಿಕ ಹೆಚ್ಚುವರಿ ಶಿಕ್ಷೆ ನೀಡುವಂತೆ ಸರಕಾರದ ಮೂಲಕ ಹೈಕೋರ್ಟ್ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X