Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru | ಸಂಡೆ ಬಜಾರ್ ವ್ಯಾಪಾರಿಗಳ...

Mangaluru | ಸಂಡೆ ಬಜಾರ್ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಮುಂದಾದ ನಗರಪಾಲಿಕೆ; ಪಾಲಿಕೆ ಲಾರಿಯ ಮುಂದೆ ಪ್ರತಿಭಟನೆ ನಡೆಸಿದ ಬೀದಿಬದಿ ವ್ಯಾಪಾರಿಗಳು

ವಾರ್ತಾಭಾರತಿವಾರ್ತಾಭಾರತಿ14 Jun 2026 3:27 PM IST
share
Mangaluru | ಸಂಡೆ ಬಜಾರ್ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಮುಂದಾದ ನಗರಪಾಲಿಕೆ; ಪಾಲಿಕೆ ಲಾರಿಯ ಮುಂದೆ ಪ್ರತಿಭಟನೆ ನಡೆಸಿದ ಬೀದಿಬದಿ ವ್ಯಾಪಾರಿಗಳು

ಮಂಗಳೂರು : ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಸಂಡೆ ಬಜಾರ್ ವ್ಯಾಪಾರಿಗಳನ್ನು ರವಿವಾರ ತೆರವುಗೊಳಿಸಲು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳು ಮುಂದಾದರೂ ಕೂಡ ಬೀದಿಬದಿ ವ್ಯಾಪಾರಿಗಳು ಪಾಲಿಕೆಯ ಲಾರಿ ಎದುರು ಕುಳಿತು ಪ್ರತಿಭಟನೆ ನಡೆಸಿದ ಘಟನೆ ರವಿವಾರ ನಡೆದಿದೆ.

ಬೀದಿ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಲು ಲಾರಿಗಳನ್ನು ತಂದು ಕಾರ್ಯಾಚರಣೆ ನಡೆಸಲು ಮುಂದಾಗುತ್ತಿದ್ದಂತೆಯೇ ಬೀದಿಬದಿ ವ್ಯಾಪಾರದ ನಿಯಮನುಸಾರ ಕಾರ್ಯಾಚರಣೆ ಮಾಡಬೇಕು ಎಂದು ವ್ಯಾಪಾರಿಗಳು ಪಟ್ಟು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬೀದಿಬದಿ ವ್ಯಾಪಾರಿಗಳ ಧಿಡೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದರು.

ನಗರದ ಪುರಭವನದ ಸುತ್ತಮುತ್ತ ಪ್ರತೀ ರವಿವಾರ ಸಂಡೆ ಬಜಾರ್ ಕಳೆದ 50 ವರ್ಷಗಳ ಹಿಂದಿನಿಂದಲೂ ನಡೆಯುತ್ತಾ ಬರುತ್ತಿದೆ. ಬೀದಿಬದಿ ವ್ಯಾಪಾರಿಗಳು ಐಕ್ಯತೆ ಮತ್ತು ಬದ್ಧತೆಯಿಂದ ಕಾರ್ಯಚರಣೆಯನ್ನು ವಿಫಲಗೊಳಿಸಿದ್ದಾರೆ. ನಗರ ಪಾಲಿಕೆ ಕಾರ್ಯಾಚರಣೆ ಮಾಡದೆ ಪರ್ಯಾಯ ವ್ಯವಸ್ಥೆ ಬಗ್ಗೆ ತೀರ್ಮಾನ ಕೈಗೊಳ್ಳಲಿ. ಏಕಪಕ್ಷೀಯ ಮತ್ತು ನಿಯಮಬಾಹಿರ ಕಾರ್ಯಾಚರಣೆ ಪರಿಹಾರ ಕ್ರಮವಲ್ಲ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು)ದ ಮುಖಂಡ ಬಿ.ಕೆ. ಇಮ್ತಿಯಾಝ್ ತಿಳಿಸಿದ್ದಾರೆ.

ಬೀದಿಬದಿ ವ್ಯಾಪಾರಸ್ಥರ ಸಂಘಟನೆಗಳ ಮುಖಂಡರಾದ ಅಬ್ದುಲ್ ರಹಿಮಾನ್, ಸಂತೋಷ್ ಆರ್.ಎಸ್, ಮುಝಫರ್ ಅಹ್ಮದ್, ಮುಹಮ್ಮದ್ ಮುಸ್ತಫಾ, ವಿಜಯ್ ಜೈನ್, ಎಂ.ಎನ್ ಶಿವಪ್ಪ, ನೌಶಾದ್ ಉಳ್ಳಾಲ, ಹಂಝ ಮುಹಮ್ಮದ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.





Tags

Mangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X