Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕುಡಿಯುವ ನೀರಿನ ಪೈಪ್...

ಮಂಗಳೂರು | ಕುಡಿಯುವ ನೀರಿನ ಪೈಪ್ ಲೈನ್‌ಗೆ ಹಾನಿ; ನೀರಿಗಾಗಿ ಪರದಾಟ

ವಾರ್ತಾಭಾರತಿವಾರ್ತಾಭಾರತಿ18 Nov 2025 9:56 PM IST
share
ಮಂಗಳೂರು | ಕುಡಿಯುವ ನೀರಿನ ಪೈಪ್ ಲೈನ್‌ಗೆ ಹಾನಿ; ನೀರಿಗಾಗಿ ಪರದಾಟ

ಮಂಗಳೂರು, ನ.18: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಪಡೀಲ್- ಕಣ್ಣೂರು ಬಳಿ ಕಾಮಗಾರಿ ವೇಳೆ ಹಾನಿಗೊಳಗಾದ ಪರಿಣಾಮ ಸೋಮವಾರ ಮತ್ತು ಮಂಗಳವಾರ ನೀರು ಪೂರೈಕೆ ಸ್ಥಗಿತವಾಗಿತ್ತು. ಇದರಿಂದ ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಜನರು ಪರದಾಡುವಂತಾಗಿದೆ.

ನಗರದ ವಸತಿ ಸಮುಚ್ಛಯಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಯಿತು. ಏಕಾಏಕಿ ನೀರು ಸ್ಥಗಿತಗೊಂಡ ಪರಿಣಾಮ ಹೊಟೇಲ್, ಆಸ್ಪತ್ರೆ ಮೊದಲಾದ ಸಂಸ್ಥೆಗಳಲ್ಲಿ ನೀರಿನ ಅಭಾವ ಉಂಟಾಯಿತು. ಟ್ಯಾಂಕರ್‌ ಗಳಲ್ಲಿ ಸಂಗ್ರಹಿಸಿಟ್ಟಿದ್ದ ನೀರು ಈಗಾಗಲೇ ಖಾಲಿಯಾಗಿದೆ.

ಬುಧವಾರ ಬೆಳಗ್ಗೆ ದುರಸ್ತಿ ಕಾರ್ಯ ಮುಗಿಯಲಿದೆ ಎನ್ನಲಾಗಿದೆ. ಆದರೆ ದುರಸ್ತಿ ಬಳಿಕ ನಗರದ ವಿವಿಧ ಕಡೆಗಳಿಗೆ ನೀರು ತಲುಪಲು ಕನಿಷ್ಟ 12 ಗಂಟೆ ಬೇಕಾಗಬಹುದು. ಹಾಗಾಗಿ ಬುಧವಾರವೂ ಎಲ್ಲಾ ಕಡೆಗಳಿಗೆ ನೀರು ಸರಬರಾಜು ಆಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ತುಂಬೆ ಡ್ಯಾಂನಿಂದ ಪಡೀಲ್ ಟ್ಯಾಂಕ್ ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ 18 ಅಡಿ ಕೆಳಭಾಗದಲ್ಲಿದೆ. ಬೆಂದೂರು ಪಂಪ್ಹೌಸ್ಗೆ ಸರಬರಾಜಾಗುವ ಮುಖ್ಯ ಕೊಳವೆಯ ಕೆಳಭಾಗದಲ್ಲಿ ಪಡೀಲ್ಗೆ ಹೋಗುವ ಪೈಪ್ ಲೈನ್ ಕೂಡ ಇದೆ. ಹೀಗಾಗಿ ಹಾನಿಯಾದ ಜಾಗವನ್ನು ಪತ್ತೆ ಹಚ್ಚುವುದು ಸಮಸ್ಯೆಯಾಗಿತ್ತು. ಹಾಗಾಗಿ ಪಡೀಲ್ ಪಂಪ್ಹೌಸ್ನಿಂದ ನಗರದ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು, ಪಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಉರ್ವಸ್ಟೋರ್, ಆಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕಡ ಮುಂತಾದ ಪ್ರದೇಶಗಳಿಗೆ ನೀರು ಸರಬರಾಜು ಮಂಗಳವಾರವೂ ಸ್ಥಗಿತವಾಗಿತ್ತು.

ಪೈಪ್ ಲೈನ್ ನ ಮೇಲಿದ್ದ ಮಣ್ಣನ್ನು ಮಂಗಳವಾರ ದಿನವಿಡೀ ಜೆಸಿಬಿ, ಟಿಪ್ಪರ್ ಬಳಸಿ ತೆರವುಗೊಳಿಸಲಾಗಿದೆ. ಇದೀಗ ಮಣ್ಣಿನಡಿ ಹಾನಿಗೊಳಗಾದ ಪೈಪ್ ನ ಸ್ಥಳ ಗೊತ್ತಾಗಿದೆ. ಆದರೆ ಹೊಂಡ ತೋಡಿದ ಸ್ಥಳದಲ್ಲಿ ಸಂಗ್ರಹವಾಗಿರುವ ನೀರು ಸಂಪೂರ್ಣ ಖಾಲಿ ಮಾಡುವ ಕೆಲಸ ಮುಂದುವರಿದಿದೆ. ಆ ಪೈಪ್ ತುಂಡು ಮಾಡಿ, ವೆಲ್ಡ್ ಮಾಡಬೇಕು. ಈ ಎಲ್ಲಾ ಕೆಲಸ ನಡೆಯಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದು ಮಂಗಳೂರು ಮನಪಾ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಡ್ಯಾರು-ಕಣ್ಣೂರು ಬಳಿ ಮುಖ್ಯ ಕೊಳವೆಯಲ್ಲಿ ಸೋರಿಕೆ ತಡೆಯುವ ಕಾಮಗಾರಿ ನಡೆಯುತ್ತಿದೆ. ಬುಧವಾರ ಮಧ್ಯಾಹ್ನ ನೀರು ಸರಬರಾಜು ಮಾಡಲಾಗುವುದು ಎಂದು ಮನಪಾ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X