Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru | ಬಸ್‌ನಿಂದ ಕೆಳಗೆ ಬಿದ್ದು...

Mangaluru | ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣ: ಬಸ್ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ17 Dec 2025 12:09 AM IST
share
Mangaluru | ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣ: ಬಸ್ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ

ಮಂಗಳೂರು: ಎಂಟು ವರ್ಷಗಳ ಹಿಂದೆ ನಗರದಲ್ಲಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ಸೈಯದ್ ಇರ್ಫಾನ್ ಅಲಿ ವಿರುದ್ಧದ ಆರೋಪ ನ್ಯಾಯಾಲಯದಲ್ಲಿ ರುಜುವಾತು ಆಗಿದ್ದು, ಆತನಿಗೆ ಮಂಗಳೂರಿನ ಜೆಎಂಎಫ್‌ಸಿ ಎಂಟನೆ ನ್ಯಾಯಾಲಯವು ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 3, 500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ಬಸ್ ಚಾಲಕನು ತನ್ನ ಬಸ್‌ನ್ನು ಅತಿ ವೇಗದಿಂದ ಚಲಾಯಿಸಿಕೊಂಡು ಬಂದು ತನ್ನ ಮುಂದೆ ನಿಂತಿದ್ದ ಬಸ್‌ನ್ನು ಓವರ್‌ಟೇಕ್ ಮಾಡಿ ನಂತರ ಜಂಕ್ಷನ್ ಬಳಿ ಪದವು ಕಡೆಯಿಂದ ಪಂಪು ವೆಲ್ ಕಡೆಗೆ ಹೋಗುತ್ತಿರುವ ಕಂಟೇನರ್ ಲಾರಿಗೆ ಬಸ್ ಢಿಕ್ಕಿ ಹೊಡೆದು ಅಪಘಾತಕ್ಕೆ ಕಾರಣವಾಗಿರುವುದಾಗಿ ಆರೋಪಿಸಲಾಗಿತ್ತು. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಲಾರಿ ಬಲಕ್ಕೆ ತಿರುಗಿ ಕಾರಿಗೆ ಗುದ್ದಿದ್ದು, ಇದೇ ಸಂದರ್ಭದಲ್ಲಿ ಬಸ್ಸಿನ ಎಡ ಬದಿ ಸೀಟಿನಲ್ಲಿ ಕುಳಿತಿದ್ದ ಕವಿತಾ ಎಂಬವರು ಬಸ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು.

ಬಸ್ಸಿನಲ್ಲಿದ್ದ ಹಲವು ಮಂದಿ ಪ್ರಯಾಣಿಕರಿಗೆ ಗಾಯವಾಗಿತ್ತು. ಪ್ರಯಾಣಿಕರಿಗೆ ಗಾಯವಾಗಲು ಬಸ್ಸಿನ ಚಾಲಕ ಕಾರಣವಾಗಿದ್ದು , ಆತನ ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿರುದಾಗಿ ಆರೋಪಿಸಲಾಗಿತ್ತು.

ಈ ಸಂಬಂಧ ಸಂಚಾರ ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾಗಿದ್ದ ಸುರೇಶ್ ಮತ್ತು ಶಿವಪ್ರಕಾಶ್ ಎಚ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪನಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರಕಾರಿ ಸಹಾಯಕ ಅಭಿಯೋಜಕರಾದ ನೇತ್ರಾವತಿ ಹಾಗೂ ಗೀತಾ ರೈ ರವರು ಸಾಕ್ಷಿ ವಿಚಾರ ನಡೆಸಿದ್ದು, ಸರಕಾರಿ ಸಹಾಯಕ ಅಭಿಯೋಜಕರಾದ ಆರೋನ್ ಡಿ ಸೋಜ ವಿಟ್ಲ ವಾದ ಮಂಡಿಸಿದ್ದರು . ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಜ್ ಪಿ ಎ ಅವರು ಪ್ರಾಸಿಕ್ಯೂಷನ್ ಪರ ವಾದವನ್ನು ಎತ್ತಿ ಹಿಡಿದು, ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Tags

Mangalurubus driver
share
ವಾರ್ತಾಭಾರತಿ
ವಾರ್ತಾಭಾರತಿ
Next Story
X