ಮಂಗಳೂರು: ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ

ಮಂಗಳೂರು: ನಗರದ ನೆಹರೂ ಮೈದಾನ ಬಳಿಯ ಸುಸಜ್ಜಿತ ಆಸ್ಟ್ರೊ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಬುಧವಾರ ಉದ್ಘಾಟನೆಗೊಂಡಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕ್ರೀಡಾಂಗಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಉತ್ತಮ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಮುಂದೆ ಈ ಕ್ರೀಡಾಂಗಣದಲ್ಲಿ ಇನ್ನಷ್ಟು ಸೌಲಭ್ಯ ಒದಗಿಸಲಾಗುವುದು ಎಂದರು.
ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಪುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.
ಇದೇವೇಳೆ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫುಟ್ಬಾಲ್ ನಲ್ಲಿ ಕಾಲ್ಚಳಕ ತೋರಿ ಗಮನಸೆಳೆದರು.
Next Story







