Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru International Airport |...

Mangaluru International Airport | ಹವಾಮಾನ ವೈಪರಿತ್ಯ: ಆಗಸದಲ್ಲೇ ಸುತ್ತುಹಾಕಿದ ವಿಮಾನಗಳು

ವಾರ್ತಾಭಾರತಿವಾರ್ತಾಭಾರತಿ14 May 2026 9:05 PM IST
share
Mangaluru International Airport | ಹವಾಮಾನ ವೈಪರಿತ್ಯ: ಆಗಸದಲ್ಲೇ ಸುತ್ತುಹಾಕಿದ ವಿಮಾನಗಳು
► ಮೂಡಬಿದಿರೆ, ಬೆಳ್ತಂಗಡಿ, ಬಂಟ್ವಾಳ ಮತ್ತು ವಿಟ್ಲ ಭಾಗಗಳಲ್ಲಿ ಕಡಿಮೆ ಎತ್ತರದಲ್ಲಿ ಹಾರಾಡಿ ಆತಂಕ ಸೃಷ್ಟಿ

ಮಂಗಳೂರು, ಮೇ 14: ಹವಾಮಾನ ವೈಪರಿತ್ಯ ಹಾಗೂ ಗುಡುಗು ಸಹಿತ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿತು. ಕೆಳಗಿಳಿಯಲು ಸಾಧ್ಯವಾಗದೆ ಕೆಲವು ಸಮಯ ವಿಮಾನಗಳು ಆಗಸದಲ್ಲೇ ಸುತ್ತಾಡಿದ ಪರಿಣಾಮ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಐಎಕ್ಸ್ 2924 (ಬೋಯಿಂಗ್ 737 ಮ್ಯಾಕ್ಸ್ 8) ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಗೆ ಪ್ರಯತ್ನಿಸಿದರೂ ಪ್ರತಿಕೂಲ ಹವಾಮಾನದಿಂದಾಗಿ ತಕ್ಷಣ ಇಳಿಯಲು ಸಾಧ್ಯವಾಗಲಿಲ್ಲ. ಪರಿಣಾಮ ವಿಮಾನವು ‘ಹೋಲ್ಡಿಂಗ್ ಪ್ಯಾಟರ್ನ್‌’ನಲ್ಲಿ ಹಲವು ಸುತ್ತುಗಳನ್ನು ಆಗಸದಲ್ಲೇ ಹೊಡೆಯಿತು.

ಗುರುವಾರ ಸಂಜೆ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿತ್ತು. ದಟ್ಟ ಮೋಡ ಹಾಗೂ ಮಳೆಯ ಕಾರಣದಿಂದ ವಿಮಾನಗಳ ಇಳಿಯುವಿಕೆಗೆ ಅಡಚಣೆ ಉಂಟಾಯಿತು ಎಂದು ಮೂಲಗಳು ತಿಳಿಸಿವೆ.

ಮೂಡಬಿದಿರೆ, ಬೆಳ್ತಂಗಡಿ, ಬಂಟ್ವಾಳ ಮತ್ತು ವಿಟ್ಲ ಭಾಗಗಳಲ್ಲಿ ಕಡಿಮೆ ಎತ್ತರದಲ್ಲಿ ವಿಮಾನ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಆತಂಕಗೊಂಡರು. ಒಂದೇ ಪ್ರದೇಶದಲ್ಲಿ ವಿಮಾನ ಮತ್ತೆ ಮತ್ತೆ ಸುತ್ತುತ್ತಿರುವುದನ್ನು ಕಂಡು ಕೆಲವರು ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿರಬಹುದೆಂದು ಶಂಕಿಸಿದರು.

ವಿಟ್ಲ ಸಮೀಪ ವಿಮಾನವು ಆಗಸದಲ್ಲಿ ಸುತ್ತಾಡುತ್ತಿರುವ ದೃಶ್ಯ ‘ಫ್ಲೈಟ್ ರಾಡಾರ್’ ಆ್ಯಪ್‌ನಲ್ಲೂ ದಾಖಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಇದರ ವಿಡಿಯೊ ಹಾಗೂ ಮಾಹಿತಿ ವ್ಯಾಪಕವಾಗಿ ವೈರಲ್‌ ಆಯಿತು.

ಕೆಲವು ಸಮಯ ‘ಹೋಲ್ಡಿಂಗ್ ಪ್ಯಾಟರ್ನ್‌’ನಲ್ಲಿ ಸುತ್ತಾಡಿದ ಬಳಿಕ ಹವಾಮಾನದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ಸುರಕ್ಷಿತವಾಗಿ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು.

ಮಳೆ ಹಾಗೂ ದಟ್ಟ ಮೋಡದ ಪರಿಣಾಮ ಎರಡು ವಿಮಾನಗಳು ಲ್ಯಾಂಡಿಂಗ್‌ಗೆ ತೊಂದರೆ ಅನುಭವಿಸಿವೆ. ಬಳಿಕ ಎರಡೂ ವಿಮಾನಗಳು ‘ಹೋಲ್ಡಿಂಗ್ ಪ್ಯಾಟರ್ನ್‌’ ಪೂರ್ಣಗೊಳಿಸಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿವೆ ಎಂದು ಮಂಗಳೂರು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.



Tags

MangaluruInternationalAirport| WeatherconditionsPlanesgroundedsky
share
ವಾರ್ತಾಭಾರತಿ
ವಾರ್ತಾಭಾರತಿ
Next Story
X