Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು...

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ7 April 2026 9:21 PM IST
share
ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗೆ ಲೋಕಾಯುಕ್ತ ದಾಳಿ
ಚಿಕ್ಕಬಳ್ಳಾಪುರ, ಬೆಂಗಳೂರು, ಮಂಗಳೂರಿನ ಮನೆ, ಕಚೇರಿಯಲ್ಲಿ ನಗದು, ಚಿನ್ನ-ಬೆಳ್ಳಿ ಪತ್ತೆ

ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿಯನ್ನು ಹೊಂದಿದ್ದ ಆರೋಪದ ಮೇರೆಗೆ ಮಂಗಳೂರು ವ್ಯಾಪ್ತಿಯ ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಎಂಬವರ ಮನೆಗೆ ಮಂಗಳೂರು ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿ ನಗದು ಮತ್ತು ಚಿರಾಸ್ತಿಯನ್ನು ಪತ್ತೆ ಹಚ್ಚಿದ್ದಾರೆ.

ಬಾಬು ತನ್ನ ಸೇವಾವಧಿಯಲ್ಲಿ ನ್ಯಾಯಬದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಪಾದಿಸಿರುವ ಬಗ್ಗೆ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಕೆ.ಎನ್. ನೀಡಿದ ವರದಿಯ ಆಧಾರದ ಮೇಲೆ ಸೋಮವಾರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಅದರಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್‌ರ ಮಾರ್ಗದರ್ಶನದಲ್ಲಿ 6 ಮಂದಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡವು ಮಂಗಳವಾರ ಬಾಬು ಬಿ.ಎನ್.ಗೆ ಸೇರಿದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಟೌನ್‌ನಲ್ಲಿರುವ ವಾಸದ ಮನೆಗಳು ಮತ್ತು ವಾಣಿಜ್ಯ ಮಳಿಗೆಗಳು, ಬೆಂಗಳೂರಿನಲ್ಲಿರುವ ಫ್ಲಾಟ್ ಮತ್ತು ವಾಸದ ಮನೆಗಳು, ಮಂಗಳೂರಿನಲ್ಲಿರುವ ವಾಸ್ತವ್ಯದ ಮನೆ ಹಾಗೂ ಕರ್ತವ್ಯ ನಿರ್ವಹಿಸುವ ಕಚೇರಿಯ ಮೇಲೆ ದಾಳಿ ನಡೆಸಿತು.

ಈ ವೇಳೆ ಬಾಬುಗೆ ಸಂಬಂಧಿಸಿದ 3,37,04,000 ರೂ. ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳಲ್ಲದೆ ಬೆಂಗಳೂರಿನ ವಾಸದ ಮನೆಯಲ್ಲಿ 23,64,000 ರೂ. ನಗದು ಹಾಗೂ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ದೊರೆತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್ ಮತ್ತು ಸುರೇಶ್ ಕುಮಾರ್, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ, ಭಾರತಿ ಜಿ., ಶಿವರಾಜ್‌ ಕುಮಾರ್, ರಾಜೇಂದ್ರ ನಾಯ್ಕ್ ಹಾಗೂ ದ.ಕ., ಉಡುಪಿ, ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಘಟಕಗಳ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದಾರೆ.





Tags

MangaluruLokayuktaraidsAssistantDrugControllerBabu B.N.houseoffice
share
ವಾರ್ತಾಭಾರತಿ
ವಾರ್ತಾಭಾರತಿ
Next Story
X