Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಬಸ್ ಪ್ರಯಾಣಿಕೆಗೆ ಆದ...

ಮಂಗಳೂರು| ಬಸ್ ಪ್ರಯಾಣಿಕೆಗೆ ಆದ ನಷ್ಟಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ಆದೇಶ

ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ ತೀರ್ಪು

ವಾರ್ತಾಭಾರತಿವಾರ್ತಾಭಾರತಿ30 Dec 2024 11:32 PM IST
share
ಮಂಗಳೂರು| ಬಸ್ ಪ್ರಯಾಣಿಕೆಗೆ ಆದ ನಷ್ಟಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ಆದೇಶ

ಮಂಗಳೂರು, ಡಿ.30: ಬಸ್‌ನಲ್ಲಿ ತಿಗಣಿ ಕಾಟದಿಂದ ತೊಂದರೆಗೊಳಗಾದ ಬಸ್ ಪ್ರಯಾಣಿಕೆಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಸೀ ಬರ್ಡ್ ಟೂರಿಸ್ಟ್ ಸಂಸ್ಥೆಗೆ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗವು ಆದೇಶ ನೀಡಿದೆ.

ಬಸ್‌ನಲ್ಲಿ ಪ್ರಯಾಣದ ವೇಳೆ ತೊಂದರೆಗೊಳಗಾಗಿದ್ದ ಪಾವೂರಿನ ದೀಪಿಕಾ ಸುವರ್ಣರಿಗೆ ಪರಿಹಾರ ಧನ ನೀಡುವಂತೆ ಆಯೋಗವು ತೀರ್ಪು ನೀಡಿದೆ.

*ಘಟನೆಯ ವಿವರ: ಕಲರ್ಸ್ ಕನ್ನಡದ ‘ರಾಜಾರಾಣಿ’ ರಿಯಾಲಿಟಿ ಶೋದಲ್ಲಿ ತನ್ನ ಪತಿ ಶೋಭರಾಜ್ ಪಾವೂರು ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದ ದೀಪಿಕಾ ಸುವರ್ಣ ಅವರು 2022ರ ಆ.16ರಂದು ರಾತ್ರಿ 10:37ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸಲು ಬೆಂಗಳೂರಿನ ರೆಡ್ ಬಸ್ ಆನ್‌ಲೈನ್ ಎಪಿಪಿ, ಇಬಿಬೋ ಗ್ರೂಪ್ ಪ್ರೈವೆಟ್ ಲಿಮಿಟೆಡ್ ಮೂಲಕ ಟಿಕೆಟ್ ಕಾಯ್ದಿರಿಸಿದ್ದರು. ಮರುದಿನ ಅವರಿಗೆ ಅಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕಿತ್ತು. ಅವರು ಟಿಕೆಟ್ ಕಾಯ್ದಿರಿಸುವಾಗ ಉತ್ತಮ ಸೇವೆಯನ್ನು ಒದಗಿಸುವ ಭರವಸೆಯನ್ನು ಸಂಬಂಧಪಟ್ಟ ಬಸ್‌ನವರು ನೀಡಿದ್ದರು.

ಅದರಂತೆ ರಾತ್ರಿ ಬಸ್ ಹತ್ತಿದ ಅವರಿಗೆ ಬಸ್‌ನ ಸ್ಲೀಪರ್ ಕೋಚ್‌ನಲ್ಲಿ ವಿಪರೀತ ತಿಗಣಿ ಕಡಿತದ ಅನುಭವ ಉಂಟಾ ಯಿತು. ಇದನ್ನು ಬಸ್‌ನ ನಿರ್ವಾಹಕರ ಗಮನಕ್ಕೆ ತಂದರೂ ಫಲಕಾರಿಯಾಗಲಿಲ್ಲ. ತಿಗಣಿ ಕಡಿತದಿಂದಾಗಿ ಮೈ ಮೇಲೆ ವಿಪರೀತ ತುರಿಕೆ ಕಾಣಿಸಿಕೊಂಡಿತು. ತೊಂದರೆಗೊಳಗಾದ ಅವರು ಬಸ್ ಚಾಲಕನ ಗಮನಕ್ಕೆ ತಂದರೂ ಅವರ ಮಾತನ್ನು ಚಾಲಕ ಗಣನೆಗೆ ತೆಗದುಕೊಳ್ಳಲಿಲ್ಲ ಎನ್ನಲಾಗಿದೆ.

ಬಸ್‌ನಲ್ಲಿ ತಿಗಣಿ ಕಾಟದಿಂದ ಆಗಿರುವ ತೊಂದರೆಯಿಂದಾಗಿ ದೀಪಿಕಾ ಸುವರ್ಣ ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರು. ಈ ವಿಚಾರವನ್ನು ಸೀಬರ್ಡ್ ಟೂರಿಸ್ಟ್ ಸಂಸ್ಥೆಯ ಗಮನಕ್ಕೆ ತಂದರೂ ನ್ಯಾಯ ಸಿಗಲಿಲ್ಲ. ಬಸ್ ಸಂಸ್ಥೆಯ ಈ ಧೋರಣೆಯನ್ನು ಪ್ರಶ್ನಿಸಿ ನ್ಯಾಯಕ್ಕಾಗಿ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಮೊರೆ ಹೋಗಿದ್ದರು. ದೀಪಿಕಾರ ದೂರನ್ನು ಆಲಿಸಿದ ಸೋಮಶೇಖರಪ್ಪ ಕೆ. ಹಂದೀಗೋಳ್ (ಪ್ರಭಾರ ಅಧ್ಯಕ್ಷರು) ಮತ್ತು ಶಾರದಮ್ಮ ಎಚ್.ಜಿ (ಸದಸ್ಯೆ) ನೇತೃತ್ವದ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗವು ಸಂತ್ರಸ್ತೆ ದೀಪಿಕಾ ಸುವರ್ಣ ಅವರಿಗೆ 1 ಲಕ್ಷ ಪರಿಹಾರ, 18650 ದಂಡ, 850 ಟಿಕೆಟ್ ಹಣ ಹಾಗೂ ಕಾನೂನು ಸಮರದ 10 ಸಾವಿರ ನೀಡಲು ಆದೇಶ ನೀಡಿದೆ. ಅರ್ಜಿದಾರರ ಪರವಾಗಿ ವಕೀಲರಾದ ಎಂಸಿ ಕೆದಿಲಾಯ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X