Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಪರಾಧ ಎಸಗಿ, ಸಾರ್ವಜನಿಕ ಶಾಂತಿಗೆ ಭಂಗ...

ಅಪರಾಧ ಎಸಗಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿ ದೇಶಭಕ್ತಿಯ ಘೋಷಣೆ ಕೂಗಿದ ಮಾತ್ರಕ್ಕೆ ಕಾನೂನು ಕ್ರಮದಿಂದ ವಿನಾಯಿತಿ ಸಾಧ್ಯವಿಲ್ಲ: ಸುಧೀರ್ ಕುಮಾರ್ ರೆಡ್ಡಿ

"ಸಂವಿಧಾನದ ಆಶಯಗಳಿಗೆ ಅಗೌರವ ತೋರುವವರು ದೇಶಭಕ್ತಿಯನ್ನು ಕಾನೂನಿನಿಂದ ರಕ್ಷಣೆ ಪಡೆಯುವ ಗುರಾಣಿಯಾಗಿ ಬಳಸಬಾರದು"

ವಾರ್ತಾಭಾರತಿವಾರ್ತಾಭಾರತಿ15 Oct 2026 1:42 PM IST
share
ಅಪರಾಧ ಎಸಗಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿ ದೇಶಭಕ್ತಿಯ ಘೋಷಣೆ ಕೂಗಿದ ಮಾತ್ರಕ್ಕೆ ಕಾನೂನು ಕ್ರಮದಿಂದ ವಿನಾಯಿತಿ ಸಾಧ್ಯವಿಲ್ಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು : ದಸರಾ ರಜೆ ಸಂದರ್ಭ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ಎಬಿವಿಪಿ ನೇತೃತ್ವದಲ್ಲಿ ನಗರದ ಶಿಕ್ಷಣ ಸಂಸ್ಥೆಯೊಂದರ ಎದುರು ನಡೆದ ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ಕೇಳಿಲ್ಲ, ಪೊಲೀಸರಿಗೆ ಮಾಹಿತಿಯನ್ನೂ ನೀಡಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿ ಹರಿದಾಡುತ್ತಿರುವ ಸಾಮಾಜಿಕ ಜಾಲತಾಣಗಳ ತುಣುಕೊಂದನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಅವರು, "ಯಾರಾದರೂ ಅಪರಾಧ ಎಸಗಿ ಅಥವಾ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿ ದೇಶಭಕ್ತಿಯ ಘೋಷಣೆ ಕೂಗಿದ ಮಾತ್ರಕ್ಕೆ ಕಾನೂನು ಕ್ರಮದಿಂದ ವಿನಾಯಿತಿ ಸಾಧ್ಯವಿಲ್ಲ" ಎಂದು ಎಚ್ಚರಿಸಿದ್ದಾರೆ.

‘ಭಾರತ್ ಮಾತಾ ಕಿ ಜೈ’ ಎಂದರೆ ಮಂಗಳೂರು ಪೊಲೀಸ್ ಇಲಾಖೆಗೆ ಯಾಕೆ ಅಷ್ಟೊಂದು ಹೊಟ್ಟೆಯುರಿ’ ಎಂಬ ಹೇಳಿಕೆಯನ್ನು ನೀಡಿರುವ ಸಾಮಾಜಿಕ ಜಾಲತಾಣದ ಟ್ರೋಲ್ ಪೇಜೊಂದನ್ನು ಉಲ್ಲೇಖಿಸಿ ಈ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತರು, ತಮ್ಮ ಹೇಳಿಕೆಯ ಆರಂಭ ಹಾಗೂ ಅಂತ್ಯದಲ್ಲಿ ‘ಭಾರತ್ ಮಾತಾ ಕಿ ಜೈ’ ಎಂಬ ಒಕ್ಕಣೆಯೊಂದಿಗೆ ಎದಿರೇಟು ನೀಡಿದ್ದಾರೆ.

ಪೊಲೀಸರು ಭಾರತ ಮಾತೆಯ ಹೆಮ್ಮೆಯ ಪುತ್ರರು ಮತ್ತು ಪುತ್ರಿಯರಾಗಿದ್ದು, ರಾಷ್ಟ್ರದ ಸೇವೆ ಮತ್ತು ರಕ್ಷಣೆಗೆ ಬದ್ಧರಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದಾರೆ. ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಲು ಹಾಗೂ ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಲು ಪ್ರಮಾಣವಚನ ಸ್ವೀಕರಿಸಿದ್ದು, ಅದರಂತೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ದುರದೃಷ್ಟವಶಾತ್ ದೇಶದ ಗಡಿಯೊಳಗೆ ರಾಷ್ಟ್ರವನ್ನು ಸಂರಕ್ಷಿಸುವ ಸಂದರ್ಭದಲ್ಲಿ ಕೆಲವೊಮ್ಮೆ ಕಾನೂನು ಉಲ್ಲಂಘಿಸುವ ನಮ್ಮದೇ ಸಹ ನಾಗರಿಕರನ್ನು ನಿಯಂತ್ರಿಸುವ ಅನಿರ್ವಾಯತೆ ಎದುರಾಗುತ್ತದೆ ಎಂದಿದ್ದಾರೆ.

ದೇಶದ ಕಾನೂನುಗಳನ್ನು ಉಲ್ಲಂಘಿಸುವವರು ಹಾಗೂ ಸಂವಿಧಾನದ ಆಶಯಗಳಿಗೆ ಅಗೌರವ ತೋರುವವರು ದೇಶಭಕ್ತಿಯನ್ನು ಕಾನೂನಿನಿಂದ ರಕ್ಷಣೆ ಪಡೆಯುವ ಗುರಾಣಿಯಾಗಿ ಬಳಸಬಾರದು. ತಮ್ಮ ತಪ್ಪು ಕೃತ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ದೇಶಭಕ್ತಿಯ ಘೋಷಣೆ ಬಳಸುವುದು ರಾಷ್ಟ್ರದ ಸೇವೆಯಲ್ಲ. ಬದಲಾಗಿ ತಮ್ಮ ಕೃತ್ಯಗಳು ಭಾರತ ಮಾತೆಗೆ ಹೆಮ್ಮೆ ತರುವ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿ ಹಿಡಿಯುತ್ತವೆಯೋ ಎಂಬುದನ್ನು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆಯೊಂದಿಗೆ ತಮ್ಮ ಮಾತುಗಳನ್ನು ಪೂರ್ಣಗೊಳಿಸಿದ್ದಾರೆ.

Tags

MangaluruPolice CommissionerSudhir Kumar Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X