ಮಂಗಳೂರು | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಜೈಲುಶಿಕ್ಷೆ, ದಂಡ

ಮಂಗಳೂರು, ನ.21: ಐದು ವರ್ಷದ ಹಿಂದೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ್ದಲ್ಲದೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗೆ ನ್ಯಾಯಾಲಯವು 10 ವರ್ಷದ ಜೈಲು ಶಿಕ್ಷೆ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ ಮಹಿಳೆಗೆ ನೆರೆಮನೆಯ ಅನಿಲ್ ಎಂಬಾತ 2021ರಲ್ಲಿ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವಬೆದರಿಕೆ ಒಡ್ಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಅಂದಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಪ್ರಸನ್ನ ಎಂ.ಎಸ್. ಆರೋಪಿಯನ್ನು ಬಂಧಿಸಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಜೇಶ ಮಾರುತಿ ಕಾಮಟೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 54,000 ರೂ. ದಂಡ ವಿಧಿಸಿ ಅದೇಶಿಸಿದ್ದಾರೆ. ಸರಕಾರ ಪರವಾಗಿ ಅಭಿಯೋಜಕ ಮೋತಿಲಾಲ ಚೌಧಾರಿ ವಾದಿಸಿದ್ದರು.
Next Story




