ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ನಗರ ಹೊರವಲಯದ ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಸಫ್ವಾನ್ (28) ಎಂಬಾತ ಜ.28ರಂದು ತನ್ನ ಮನೆಯಿಂದ ಹೊರಟು ಹೋಗಿದ್ದು, ಮರಳಿ ಬಂದಿಲ್ಲ ಎಂದು ಪಣಂಬೂರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸುಮಾರು 5.6 ಅಡಿ ಎತ್ತರದ, ಸಾಧಾರಣ ಶರೀರದ, ಎಣ್ಣೆಕಪ್ಪು ಮೈಬಣ್ಣದ ಸಫ್ವಾನ್ ಕಾಣೆಯಾದ ಬಿಳಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ತುಳು, ಬ್ಯಾರಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.
ಈತನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪಣಂಬೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story





