Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನ ಪ್ರಜ್ವಲ್ ಶೆಟ್ಟಿ ಈಗ ರಫೇಲ್...

ಮಂಗಳೂರಿನ ಪ್ರಜ್ವಲ್ ಶೆಟ್ಟಿ ಈಗ ರಫೇಲ್ ಪೈಲಟ್: UPSC ಪರೀಕ್ಷೆಯಲ್ಲಿ 42ನೇ ರ‍್ಯಾಂಕ್‌; ‘ನೀಲಕಂಠ’ ರಚನೆಯಲ್ಲಿ ಹಾರಾಟ

ವಾರ್ತಾಭಾರತಿವಾರ್ತಾಭಾರತಿ29 Oct 2026 11:22 PM IST
share
ಮಂಗಳೂರಿನ ಪ್ರಜ್ವಲ್ ಶೆಟ್ಟಿ ಈಗ ರಫೇಲ್ ಪೈಲಟ್: UPSC ಪರೀಕ್ಷೆಯಲ್ಲಿ 42ನೇ ರ‍್ಯಾಂಕ್‌; ‘ನೀಲಕಂಠ’ ರಚನೆಯಲ್ಲಿ ಹಾರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಪೈಲಟ್ ಆಗಿ ಸಾಧನೆ ಮಾಡಿದ್ದಾರೆ.

ಅ. 25ರಂದು ವಾರಣಾಸಿಯ ನಮೋ ಘಾಟ್ ನಲ್ಲಿ ಗಂಗಾ ನದಿಯ ಮೇಲೆ ನಡೆದ ಭಾರತೀಯ ವಾಯುಪಡೆಯ 94ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ‘ವಿಂಗ್ಸ್ ಓವರ್ ಗಂಗಾಸ್’ ವೈಮಾನಿಕ ಪ್ರದರ್ಶನದಲ್ಲಿ ಅವರು ಭಾಗವಹಿಸಿದ್ದರು.

ಈ ವೇಳೆ ಮೂರು ರಫೇಲ್ ಯುದ್ಧವಿಮಾನಗಳನ್ನೊಳಗೊಂಡ ‘ನೀಲಕಂಠ’ ರಚನೆಯ ಮಧ್ಯಭಾಗದಲ್ಲಿ ಹಾರಾಟ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಈ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದರು.

►UPSC ಪರೀಕ್ಷೆಯಲ್ಲಿ 42ನೇ ರ‍್ಯಾಂಕ್‌

ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ UPSC ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್‌ ಪಡೆದ ಪ್ರಜ್ವಲ್, ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (NDA) ಪ್ರವೇಶಿಸಿದರು. ಅಲ್ಲಿ ಮೂರು ವರ್ಷಗಳ ತರಬೇತಿ ಪಡೆದ ಅವರು, ‘ಸೂಪರ್ ಡಿಮೋನಾ’ ವಿಮಾನದಲ್ಲಿ ಹಾರಾಟದ ತರಬೇತಿ ಪಡೆದರು.

ಬಳಿಕ ಹೈದರಾಬಾದ್ ನ ವಾಯುಪಡೆ ಅಕಾಡೆಮಿಯಲ್ಲಿ (AFA) ಒಂದು ವರ್ಷದ ಹಾರಾಟ ತರಬೇತಿ ಪೂರ್ಣ ಗೊಳಿಸಿದರು. ಈ ಅವಧಿಯಲ್ಲಿ ‘ಪಿಲಾಟಸ್’ ಮತ್ತು ‘ಕಿರಣ್’ ವಿಮಾನಗಳನ್ನು ಹಾರಿಸಿದರು. ವಾಯುಯಾನ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಅವರು, B.Tech ಪದವಿಯನ್ನೂ ಪಡೆದರು.

►ಹಾಕ್ ನಿಂದ ರಫೇಲ್ ವರೆಗೆ...

ಡಿಸೆಂಬರ್ 2022ರಲ್ಲಿ ಭಾರತೀಯ ವಾಯುಪಡೆಯ ಯುದ್ಧವಿಮಾನ ವಿಭಾಗಕ್ಕೆ ನಿಯೋಜನೆಗೊಂಡ ಪ್ರಜ್ವಲ್, ಪಶ್ಚಿಮ ಬಂಗಾಳದ ಕಲೈಕುಂಡ ವಾಯುನೆಲೆಯಲ್ಲಿ ‘ಹಾಕ್ Mk 132’ ವಿಮಾನದ ಮೂಲಕ ಒಂದು ವರ್ಷದ ಯುದ್ಧವಿಮಾನ ತರಬೇತಿ ಪೂರ್ಣಗೊಳಿಸಿದರು. ಈ ಹಂತದಲ್ಲಿಯೂ ಅವರು ಅತ್ಯುತ್ತಮ ಸಾಧನೆ ಮಾಡಿದರು.

ಬಳಿಕ ಅಂಬಾಲಾದ 17ನೇ ಸ್ಕ್ವಾಡ್ರನ್ ‘ಗೋಲ್ಡನ್ ಆರೋಸ್’ಗೆ ನಿಯೋಜನೆಗೊಂಡ ಅವರು, ರಫೇಲ್ ಯುದ್ಧ ವಿಮಾನದ ಪರಿವರ್ತನಾ ತರಬೇತಿ ಪೂರ್ಣಗೊಳಿಸಿದರು. ಈ ಮೂಲಕ ರಫೇಲ್ ಯುದ್ಧ ವಿಮಾನವನ್ನು ನಿರ್ವಹಿಸುವ ಕಾರ್ಯಾಚರಣಾ ಸಾಮರ್ಥ್ಯ ಪಡೆದರು.

ಕಠಿಣ ತರಬೇತಿ ಮತ್ತು ಪರಿಶ್ರಮದ ಮೂಲಕ ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನದ ಪೈಲಟ್ ಆಗಿರುವ ಪ್ರಜ್ವಲ್ ಅವರ ಸಾಧನೆ, ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಜನರಿಗೆ ಸ್ಫೂರ್ತಿಯಾಗಿದೆ.

ಪ್ರಜ್ವಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಉಳಿದೊಟ್ಟು ನಿವಾಸಿ ರಮೇಶ್ ಶೆಟ್ಟಿ ಮತ್ತು ಕೋಡೆತ್ತೂರು ಮೂಡುದೇವಸ್ಯದ ಸೀತಾ ಆರ್. ಶೆಟ್ಟಿ ದಂಪತಿಯ ಪುತ್ರ.

Tags

MangaluruPrajwal ShettyRafale pilotUPSC exam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X