Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೆನ್, ಪುಸ್ತಕ ಮಾರಾಟ ಮಾಡುತ್ತಿದ್ದ...

ಪೆನ್, ಪುಸ್ತಕ ಮಾರಾಟ ಮಾಡುತ್ತಿದ್ದ ಬಾಲಕನಿಗೆ ನೆರವಾದ ‘ಮೀಡಿಯಾ ಮನಸುಗಳು’ ಬಳಗ

ಎರಡು ತಿಂಗಳಿಗೆ ಸಾಕಾಗುವಷ್ಟು ರೇಷನ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ17 Nov 2026 2:19 PM IST
share
ಪೆನ್, ಪುಸ್ತಕ ಮಾರಾಟ ಮಾಡುತ್ತಿದ್ದ ಬಾಲಕನಿಗೆ ನೆರವಾದ ‘ಮೀಡಿಯಾ ಮನಸುಗಳು’ ಬಳಗ

ಮಂಗಳೂರು: ಶಾಲಾ ರಜೆಯ ವೇಳೆ ಪೆನ್, ಪುಸ್ತಕಗಳನ್ನು ಮಾರಾಟ ಮಾಡಿ ಹೆತ್ತವರ ಕಷ್ಟಕ್ಕೆ ನೆರವಾಗಲು ಪ್ರಯತ್ನಿಸುತ್ತಿದ್ದ ಬಾಲಕನ ಕುಟುಂಬಕ್ಕೆ ‘ಮೀಡಿಯಾ ಮನಸುಗಳು’ ಬಳಗ ನೆರವು ನೀಡಿದೆ.

ಶಿವಮೊಗ್ಗದಿಂದ ಬಂದು ನಂದಿಕೂರಿನಲ್ಲಿ ನೆಲೆಸಿರುವ ಕುಟುಂಬದ ಬಾಲಕ ಗಣೇಶ, ಶಾಲೆಯ ಬಿಡುವಿನ ವೇಳೆಯಲ್ಲಿ ದೇವಸ್ಥಾನ ಹಾಗೂ ಮಾರುಕಟ್ಟೆಗಳಲ್ಲಿ ಪೆನ್, ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದ. ಈ ಮೂಲಕ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಪ್ರಯತ್ನಿಸುತ್ತಿದ್ದ ಬಾಲಕನ ಸ್ಥಿತಿಗತಿಯನ್ನು ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ಶಶಿ ಬೆಳ್ಳಾಯರು ಸಾಮಾಜಿಕ ಜಾಲತಾಣದ ಮೂಲಕ ಬೆಳಕಿಗೆ ತಂದಿದ್ದರು.

ಇದಕ್ಕೆ ಸ್ಪಂದಿಸಿದ್ದ ದಾನಿಗಳು ಒಂದೇ ದಿನದಲ್ಲಿ 20 ಸಾವಿರ ರೂ.ಗೂ ಅಧಿಕ ಮೊತ್ತವನ್ನು ಬಾಲಕನ ತಾಯಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಆದರೆ, ಖಾತೆಯಲ್ಲಿದ್ದ ಹಣ ಸಂಪೂರ್ಣವಾಗಿ ದೋಚಲ್ಪಟ್ಟು ಕುಟುಂಬ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿತ್ತು.

ಈ ವಿಚಾರ ತಿಳಿದ ‘ಮೀಡಿಯಾ ಮನಸುಗಳು’ ಬಳಗ ಕುಟುಂಬದ ನೆರವಿಗೆ ಧಾವಿಸಿದೆ. ಅನಿ ಮಂಗಳೂರು, ಚಂದನ ಅರುಣ್ ಶೆಟ್ಟಿ ಹಾಗೂ ಟೀಮ್ ಕಾಲಭೈರವ ಮಂಗಳೂರು ತಂಡಗಳ ಸಹಕಾರದೊಂದಿಗೆ ಆರ್ಥಿಕ ನೆರವು ಸಂಗ್ರಹಿಸಿ, ಎರಡು ತಿಂಗಳಿಗೆ ಸಾಕಾಗುವಷ್ಟು ಅಗತ್ಯ ರೇಷನ್ ಸಾಮಗ್ರಿಗಳನ್ನು ಬಾಲಕನ ಮನೆಗೆ ತಲುಪಿಸಲಾಗಿದೆ.

ಈ ಮಾನವೀಯ ಕಾರ್ಯದಲ್ಲಿ ಶಶಿ ಬೆಳ್ಳಾಯರು, ರಜನ್ ಕುಮಾರ್ ಕಾವೂರು, ಶಿವು ಕುಲಾಲ್ ಹಾಗೂ ಅನಿ ಮಂಗಳೂರು ಕೈ ಜೋಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ಅನಿ ಮಂಗಳೂರು, “ಸಾಮಾಜಿಕ ಜಾಲತಾಣಗಳಲ್ಲಿ ಗಣೇಶನ ಕುಟುಂಬದ ವಿಡಿಯೊ ನೋಡಿದಂದಿನಿಂದ ಅವರನ್ನು ಭೇಟಿ ಮಾಡುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ‘ಮೀಡಿಯಾ ಮನಸುಗಳು’ ಸಂಘಟನೆಯನ್ನು ಸಂಪರ್ಕಿಸಿ ಅವರೊಂದಿಗೆ ಬಂದಿದ್ದೇನೆ. ಇದು ನಿಜಕ್ಕೂ ಖುಷಿ ನೀಡಿದ ಕಾರ್ಯಕ್ರಮ. ಸಂಘಟನೆಯ ಸಮಾಜಮುಖಿ ಕಾರ್ಯಗಳು ನಮಗೆಲ್ಲ ಸ್ಫೂರ್ತಿಯಾಗಿವೆ. ಇಂತಹ ಕಾರ್ಯಗಳು ಇನ್ನಷ್ಟು ನಡೆಯಲಿ. ನಾವು ಸದಾ ಅವರೊಂದಿಗೆ ಇರುತ್ತೇವೆ” ಎಂದು ಹೇಳಿದರು.




Tags

Media ManasugaluMangaluruudupiNandikuruShimoga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X