Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿಯಲ್ಲಿ ದ.ಕ., ಉಡುಪಿ ಜಿಲ್ಲೆಯ...

ಮುಲ್ಕಿಯಲ್ಲಿ ದ.ಕ., ಉಡುಪಿ ಜಿಲ್ಲೆಯ ಸಮಾನ ಮನಸ್ಕರ ಸಭೆ: ಪುತ್ತೂರು ವೈದ್ಯರ ಸಂಘದ ಮತೀಯ ಪಕ್ಷಪಾತಿ ನಡೆಗೆ ಖಂಡನೆ

ಕರಾವಳಿಯ ಸೌಹಾರ್ದಕ್ಕಾಗಿ ಶ್ರಮಿಸಲು ಪಣ

ವಾರ್ತಾಭಾರತಿವಾರ್ತಾಭಾರತಿ31 May 2025 8:10 PM IST
share
ಮುಲ್ಕಿಯಲ್ಲಿ ದ.ಕ., ಉಡುಪಿ ಜಿಲ್ಲೆಯ ಸಮಾನ ಮನಸ್ಕರ ಸಭೆ: ಪುತ್ತೂರು ವೈದ್ಯರ ಸಂಘದ ಮತೀಯ ಪಕ್ಷಪಾತಿ ನಡೆಗೆ ಖಂಡನೆ

ಮುಲ್ಕಿ: ಭಾರತ ವೈದ್ಯರ ಸಂಘ (ಐಎಂಎ) ಪುತ್ತೂರು ಘಟಕದ ʼಮತೀಯ ತಾರತಮ್ಯದ ನಡೆʼ, ಮುನೀರ್ ಕಾಟಿಪಳ್ಳ ಹಾಗು ಅಬ್ದುಸ್ಸಲಾಂ ಪುತ್ತಿಗೆ ಮೇಲೆ ಮೊಕದ್ದಮೆ ದಾಖಲಿಸಿರುವ ಪ್ರಕರಣ, ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಕೋಮು ಸಂಘರ್ಷದ ಬೆಳವಣಿಗೆಯ ಹಿನ್ನಲೆಯಲ್ಲಿ ದ.ಕ., ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ಮುಲ್ಕಿ ಪಟ್ಟಣದ ಖಾಸಗಿ ಹೊಟೇಲ್‌ನ ಸಭಾಂಗಣದಲ್ಲಿ ಸಭೆ ನಡೆಸಿದರು. ಈ ಸಂದರ್ಭ ಕೋಮುವಾದದ ರಾಜಕಾರಣವನ್ನು ಬಯಲುಗೊಳಿಸುವ ನಿಟ್ಟಿನಲ್ಲಿ ಎರಡು ಪ್ರಮುಖ ಠರಾವುಗಳನ್ನು ಅಂಗೀಕರಿಸಲಾಯಿತು.

ವೈದ್ಯರ ಸಂಘದ ಮಂಗಳೂರು ಘಟಕದ ಬೆಂಬಲದೊಂದಿಗೆ ವೈದ್ಯರ ಸಂಘದ ಪುತ್ತೂರು ಘಟಕವು ಮುಸ್ಲಿಂ ಕುಟುಂಬವೊಂದರ ಜೊತೆಗಿನ ಸರಕಾರಿ ವೈದ್ಯರ ವಾಗ್ವಾದಕ್ಕೆ ಧರ್ಮದ ಗುರುತನ್ನು ಆರೋಪಿಸಿರುವುದು, ಕೋಮುವಾದಿ ಹಿನ್ನಲೆಯ ಸಂಘಪರಿವಾರದ ಪ್ರಮುಖರ ಜೊತೆ ಸೇರಿ ಪ್ರತಿಭಟನೆ ನಡೆಸಿರುವುದು, ಆ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಕ್ಕೆ ಅವಕಾಶ ಒದಗಿಸಿರುವುದನ್ನು ಸಮಾನ ಮನಸ್ಕರ ಸಭೆ ಆಘಾತಕಾರಿ ವಿದ್ಯಾಮಾನ ಎಂದು ಬಣ್ಣಿಸಿತು.

ವೈದ್ಯರ ಸಂಘದ ಈ ನಡೆ ವೈದ್ಯರ ಸಂಘದ ಕೋಮುವಾದಿ ಮನಸ್ಥಿತಿಯನ್ನು ಜಾಹೀರುಪಡಿಸಿದೆ. ಈ ನಡೆಯನ್ನು ಖಂಡಿಸಿದ ಮುನೀರ್ ಕಾಟಿಪಳ್ಳ ಹಾಗೂ ಪ್ರಕಟಿಸಿದ ಮಾಧ್ಯಮದ ಸಂಪಾದಕ ಪುತ್ತಿಗೆಯ ಮೇಲೆ ಸುಳ್ಳು ಆರೋಪ ಹೊರಿಸಿ ನ್ಯಾಯಾಲಯದ ಮೂಲಕ ಮೊಕದ್ದಮೆ ದಾಖಲಿಸಿರುವುದು ವೈದ್ಯ ವೃತ್ತಿಗೆ ಕಳಂಕ ತರುವ ವಿದ್ಯಾಮಾನವಾಗಿದೆ. ಭಾರತ ವೈದ್ಯರ ಸಂಘ (ಐಎಂಎ) ಪುತ್ತೂರು ಹಾಗು ಮಂಗಳೂರು ಘಟಕದ ಈ ವರ್ತನೆ, ಜನಪರ ಧ್ವನಿಗಳನ್ನು ಹತ್ತಿಕ್ಕುವ ಯತ್ನದ ವಿರುದ್ಧ ಕಾನೂನಾತ್ಮಕ ಹಾಗೂ ಬೀದಿ ಹೋರಾಟದ ಮೂಲಕ ಎದರಿಸಲಾಗುವುದು ಎಂಬ ಒಮ್ಮತದ ಅಭಿಪ್ರಾಯಕ್ಕೆ ಬಂದ ಸಭೆಯು ಜೂನ್ ಎರಡನೆ ವಾರದಲ್ಲಿ ಮಂಗಳೂರು ನಗರದಲ್ಲಿ ಪ್ರತಿಭಟನಾ ಸಭೆ ನಡೆಸಿ ತಪ್ಪಿತಸ್ಥ ವೈದ್ಯರು ಹಾಗು ಸಂಘದ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಲು ಸರಕಾರಕ್ಕೆ ಮನವಿ ಸಲ್ಲಿಸುವುದು ಎಂದು ತೀರ್ಮಾನಿಸಿತು.

ದ.ಕ. ಜಿಲ್ಲೆಯಲ್ಲಿ ಸಂಘಪರಿವಾರ ಹಾಗೂ ಬಿಜೆಪಿ ಶಾಸಕರುಗಳ ದ್ವೇಷ ಭಾಷಣ, ಕೋಮು ಧ್ರುವೀಕರಣವನ್ನು ಆಳಗೊಳಿಸಲು ಅದು ನಡೆಸುತ್ತಿರುವ ಹಿಂಸಾತ್ಮಕ ಪ್ರಯತ್ನಗಳ ಕುರಿತು ಸಭೆಯಲ್ಲಿ ವಿಸ್ತಾರವಾದ ಚರ್ಚೆ ನಡೆಯಿತು. ಈ ರಾಜಕಾರಣದ ಭಾಗವಾಗಿ ನಡೆದ ಭೀಕರ ಕೊಲೆಗಳು, ಅದರ ಸಾಮಾಜಿಕ ಪರಿಣಾಮಗಳ ಕುರಿತು ಸೇರಿದ ಪ್ರಮುಖರು ಕಳವಳ ವ್ಯಕ್ತಪಡಿಸಿದರು. ಇಂತಹ ಪರಿಸ್ಥಿತಿ ಎದುರಿಸುವಲ್ಲಿ ಸರಕಾರದ ವೈಫಲ್ಯ, ಮೃದುಧೋರಣೆಗಳು ಚರ್ಚೆಗೆ ಒಳಪಟ್ಟವು. ಕೆಲವು ತಿಂಗಳುಗಳಲ್ಲಿ ನಡೆದಿರುವ ಕೋಮುವಾದಿ ಕೃತ್ಯ, ದ್ವೇಷ ಭಾಷಣಗಳು ಸಮಾಜವನ್ನು ಆಳವಾಗಿ ವಿಭಜಿಸಿದ್ದು, ಸಮುದಾಯಗಳ ನಡುವೆ ಅಪನಂಬಿಕೆಗಳು ತೀವ್ರವಾಗಿದೆ. ಇಂತಹ ಕೋಮುಸಂಘರ್ಷದ ವಾತಾವರಣವನ್ನು ತಿಳಿಗೊಳಿಸಲು, ಸಾಮರಸ್ಯವನ್ನು ಬಲಗೊಳಿಸಲು ಎಲ್ಲಾ ಜನಪರ, ಜಾತ್ಯತೀತ ಶಕ್ತಿಗಳು ಬಿನ್ನಾಭಿಪ್ರಾಯಗಳ ಆಚೆಗೆ ಒಂದಾಗಿ ಶ್ರಮಿಸಲು, ಒಗ್ಗಟ್ಟಿನಲ್ಲಿ ದುಡಿಯಲು ಸಭೆ ನಿರ್ಣಯವನ್ನು ಕೈಗೊಂಡಿತು.

ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಜನತೆಯನ್ನು ನೇರವಾಗಿ ತಲುಪುವ ನಿಟ್ಟಿನಲ್ಲಿ ಹಲವು ಹಂತದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಹಬಾಳ್ವೆ ಉಡುಪಿ ಸಂಚಾಲಕ ಅಮೃತ್ ಶೆಣೈ ವಹಿಸಿದ್ದರು. ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ, ಯಶವಂತ ಮರೋಳಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ, ಸಿಪಿಐ ದ.ಕ. ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಎಂ.ಜಿ. ಹೆಗಡೆ, ವಿವಿಧ ದಲಿತ ಸಂಘಟನೆಗಳ ಪ್ರಮುಖರಾದ ಎಂ. ದೇವದಾಸ್, ಶೇಖರ ಹೆಜಮಾಡಿ, ರಘು ಎಕ್ಕಾರು, ಮುಸ್ಲಿಂ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್, ಉಪಾಧ್ಯಕ್ಷ ಸಾಲಿ ಮರವೂರು, ಉಡುಪಿ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಪದಾಧಿಕಾರಿಗಳಾದ ಇದ್ರಿಸ್ ಹೂಡೆ, ಪೀರ್ ಸಾಹೇಬ್, ಮುಸ್ಲಿಂ ಐಕ್ಯತಾ ವೇದಿಕೆಯ ಅಶ್ರಫ್ ಬದ್ರಿಯಾ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಆದಿವಾಸಿ ಹಕ್ಕುಗಳ ಸಮಿತಿಯ ಡಾ. ಕೃಷ್ಣಪ್ಪಕೊಂಚಾಡಿ, ಕಾರ್ಮಿಕ ಮುಂದಾಳುಗಳಾದ ಸುನಿಲ್ ಕುಮಾರ್ ಬಜಾಲ್, ಕರುಣಾಕರ ಮಾರಿಪಳ್ಳ, ಯೋಗೀಶ್, ಡಿವೈಎಫ್‌ಐ ಪ್ರಮುಖರಾದ ಸಂತೋಷ್ ಬಜಾಲ್, ಬಿ.ಕೆ. ಇಮ್ತಿಯಾಝ್, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ವಿವಿಧ ಸಂಘಟನೆಗಳ ಪ್ರಮುಖರಾದ ರಮೇಶ್ ತಿಂಗಳಾಯ ಉಡುಪಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮಹಾಬಲ ಕುಂದರ್, ಶ್ರೀನಾಥ್ ಕುಲಾಲ್, ಹರೀಶ್ ಪೇಜಾವರ, ಕೃಷ್ಣಾನಂದ ಡಿಎಸ್, ಬಾವಾ ಪದರಂಗಿ, ಸಿರಾಜ್ ಬಜ್ಪೆ ಹಮೀದ್ ಪಡುಬಿದ್ರೆ, ಸಂತೋಷ್ ಹೆಜಮಾಡಿ, ಸಮರ್ಥ್ ಭಟ್, ನೀನಾ ಟೆಲ್ಲಿಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X