Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಜೂರು ಉರೂಸ್ ಪ್ರಯುಕ್ತ ಕಾನೂನು...

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ವಾರ್ತಾಭಾರತಿವಾರ್ತಾಭಾರತಿ18 Jan 2025 12:54 PM IST
share
ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ: ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 24ರಿಂದ ಆರಂಭಗೊಂಡು ಫೆಬ್ರವರಿ 02 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜನವರಿ 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.

ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.

ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.

ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ನಾನಿಸಿ ಗೌರವಿಸಲಾಯಿತು.

ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಜಿಲ್ಲಾ ವಖಾಫ್ ಸಲಹಾ ಸಮಿತಿ ಸದಸ್ಯರು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯು ಆದ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು ಹಿರಿಯರಾದ ಬದ್ರುದ್ದೀನ್ ಕಾಜೂರು ಅಬೂಬಕ್ಕರ್ ಮಲ್ಲಿಗೆಮನೆ ಪುತ್ತುಮೋನು ಕಿಲ್ಲೂರು, ಶಾಹುಲ್ ಹಮೀದ್ ಅಮ್ಮಿ ,AU ಮೊಹಮ್ಮದಲಿ , ಯಾಕುಬ್ ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X