Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಧ್ಯರಾತ್ರಿ ರಕ್ಷಣಾ ಕಾರ್ಯಾಚರಣೆ |...

ಮಧ್ಯರಾತ್ರಿ ರಕ್ಷಣಾ ಕಾರ್ಯಾಚರಣೆ | ಸಮುದ್ರಕ್ಕೆ ಬಿದ್ದ ಮೀನುಗಾರನ ಜೀವ ಉಳಿಸಿದ ಕೋಸ್ಟ್ ಗಾರ್ಡ್

ವಾರ್ತಾಭಾರತಿವಾರ್ತಾಭಾರತಿ2 Nov 2026 1:01 PM IST
share
ಮಧ್ಯರಾತ್ರಿ ರಕ್ಷಣಾ ಕಾರ್ಯಾಚರಣೆ | ಸಮುದ್ರಕ್ಕೆ ಬಿದ್ದ ಮೀನುಗಾರನ ಜೀವ ಉಳಿಸಿದ ಕೋಸ್ಟ್ ಗಾರ್ಡ್

ಮಂಗಳೂರು: ಮೀನುಗಾರಿಕಾ ಬಲೆ ಎಳೆಯುವಾಗ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರನ್ನು ಕೋಸ್ಟ್ ಗಾರ್ಡ್ ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಸುರಕ್ಷಿತವಾಗಿ ರಕ್ಷಿಸಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಕೋಮರ ರಾಮು ಎಂದು ಗುರುತಿಸಲಾಗಿದೆ.

ನವೆಂಬರ್ 1ರಂದು ಮಂಗಳೂರಿನಿಂದ ಸುಮಾರು 54 ನಾಟಿಕಲ್ ಮೈಲು (100 ಕಿ.ಮೀ.) ದೂರದಲ್ಲಿ ‘ಶಿವ ಸಾಗರ್’ (SHIV SAGAR) ಎಂಬ ದೋಣಿ (IFB) ಮೀನುಗಾರಿಕೆಯಲ್ಲಿ ತೊಡಗಿತ್ತು. ಈ ವೇಳೆ ಬಲೆ ಎಳೆಯುತ್ತಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾರೆ. ದೋಣಿಯಲ್ಲಿದ್ದ ಇತರ ಮೀನುಗಾರರು ತಕ್ಷಣವೇ ಅವರನ್ನು ನೀರಿನಿಂದ ಮೇಲೆತ್ತಿದರಾದರೂ, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿತ್ತು. ಹೀಗಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ನೆರವು ಕೋರಿದ್ದರು.

ದೋಣಿಯಿಂದ ಬಂದ ತುರ್ತು ಕರೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್‌ನ CGDHQ-3, ‘ICGS C-448’ ನೌಕೆಯನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿತು. ಮಧ್ಯರಾತ್ರಿಯ ದಟ್ಟ ಕತ್ತಲಿನ ನಡುವೆಯೇ ಕಾರ್ಯಾಚರಣೆ ನಡೆಸಿದ ನೌಕೆಯ ಸಿಬ್ಬಂದಿ ಮೀನುಗಾರಿಕಾ ದೋಣಿಯನ್ನು ಪತ್ತೆಹಚ್ಚಿದರು. ಆತಂಕಕ್ಕೊಳಗಾಗಿದ್ದ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ, ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರು.

ನಂತರ ಅವರನ್ನು NMPA ಜೆಟ್ಟಿಗೆ ಕರೆತರಲಾಯಿತು. ಅಲ್ಲಿಂದ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಇಂಡಿಯನ್ ಕೋಸ್ಟ್ ಗಾರ್ಡ್ ಪ್ರಕಟಣೆ ತಿಳಿಸಿದೆ.

Tags

FishermanCoast GuardRescue operation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X