Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಲೆಗಳಲ್ಲಿ ಮಿನಿ ಭಾರತ ನಿರ್ಮಾಣವಾಗಲಿ:...

ಶಾಲೆಗಳಲ್ಲಿ ಮಿನಿ ಭಾರತ ನಿರ್ಮಾಣವಾಗಲಿ: ಡಾ.ಎಂ. ಮೋಹನ್ ಆಳ್ವ

ಮೀಫ್ ವಾರ್ಷಿಕ ಸಮಾವೇಶ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 May 2025 9:08 PM IST
share
ಶಾಲೆಗಳಲ್ಲಿ ಮಿನಿ ಭಾರತ ನಿರ್ಮಾಣವಾಗಲಿ: ಡಾ.ಎಂ. ಮೋಹನ್ ಆಳ್ವ

ಮಂಗಳೂರು: ಶಿಕ್ಷಣ ಸಂಸ್ಥೆಗಳು ಆ ಸಂಸ್ಥೆಗಳನ್ನು ಕಟ್ಟಿದವರ ಸಮುದಾಯಕ್ಕೆ ಸೀಮಿತವಾಗಿರಬಾರದು. ಶಾಲೆಗಳು ಯಾವುದೇ ಜಾತಿ ಧರ್ಮ, ಜನಾಂಗಕ್ಕೆ ಸೀಮಿತವಾಗಿರದೆ ಅಲ್ಲಿ ಎಲ್ಲರಿಗೂ ಕಲಿಯಲು ಅವಕಾಶ ಇರಬೇಕು. ಶಾಲೆಗಳನ್ನು ಮಿನಿ ಭಾರತವನ್ನಾಗಿ ರೂಪಿಸಬೇಕಾಗಿದೆ ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅಭಿಪ್ರಾಯಪಟ್ಟಿದ್ದಾರೆ.

ಅಡ್ಯಾರ್‌ನ ಬರಕಾ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಮೀಫ್) ಇದರ ವಾರ್ಷಿಕ ಸಮಾವೇಶ, ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಗಳಲ್ಲಿ ಎಲ್ಲರಿಗೂ ಶಿಕ್ಷಣ ಪಡೆಯಲು ಅವಕಾಶ ಇರಬೇಕು. ಅಂತಹ ವಾತಾವರಣವನ್ನು ನಿರ್ಮಿಸಿಕೊಡಬೇಕಾಗಿದೆ. ಭಾರತದಲ್ಲಿ ಹೇಗೆ ನಾನಾ ಜಾತಿ, ಧರ್ಮ, ಭಾಷೆ ಜನಾಂಗದವರು ಇದ್ದಾರೋ ಅದೇ ರೀತಿ ಶಾಲೆಗಳು ಕೂಡಾ ಎಲ್ಲರನ್ನು ಒಳಗೊಂಡ ಮಿನಿ ಭಾರತವಾಗಬೇಕು ಎಂದು ಹೇಳಿದರು.

ಶಾಲೆಗಳು ಸಮಾಜದ ಪ್ರತಿಬಿಂಬವಾಗಬೇಕಾಗಬೇಕು. ಅಲ್ಲಿ ಸಮಾಜವನ್ನು ಕಟ್ಟುವ ಶಿಕ್ಷಣವನ್ನು ನೀಡಬೇಕಾಗಿದೆ. ಸಮಾಜವನ್ನು ಒಡೆಯುವ ಕೆಲಸವಾಗಬಾರದು ಎಂದರು.

ಮಕ್ಕಳಿಗೆ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಹಂತದಲ್ಲೇ ವಿದ್ಯಾರ್ಥಿಗಳಿಗೆ ಶಿಕ್ಷಣದ ಅಡಿಪಾಯ ಗಟ್ಟಿಯಾದರೆ ಅವರ ಭವಿಷ್ಯ ಉಜ್ವಲವಾಗುತ್ತದೆ. ಆ ನಿಟ್ಟಿನಲ್ಲಿ ನಾವು ಅವರಿಗೆ ಶಿಕ್ಷಣ ನೀಡಬೇಕು. ಶಾಲಾ ಆಡಳಿತ ಸಮಿತಿ, ಶಿಕ್ಷಕರು ಅಪ್ ಡೇಟ್ ಆಗಿ ಆಧುನಿಕ ಶಿಕ್ಷಣದ ವ್ಯವಸ್ಥೆಯಲ್ಲಾಗುವ ಬದಲಾವಣೆಗೆ ಹೊಂದಿಕೊಳ್ಳಬೇಕಾಗಿದೆ. ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ವ್ಯವಸ್ಥೆ ಒಂದೇ ರೀತಿ ಇರುವುದಿಲ್ಲ.ಇದನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಮೀಫ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಸಾಧನೆಯನ್ನು ಶ್ಲಾಘಿಸಿದ ಡಾ. ಎಂ. ಮೋಹನ್ ಆಳ್ವ ಅವರು ಮೀಫ್‌ನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್, ಗೈಡ್ಸ್ ತರಬೇತಿಗೆ ನೆರವು ನೀಡುವುದಾಗಿ ತಿಳಿಸಿದರು.

ಮೀಫ್‌ನ ಗೌರವಾಧ್ಯಕ್ಷ ಉಮರ್ ಟೀಕೆ ದಿ‌ಕ್ಸೂಚಿ ಭಾಷಣ ಮಾಡಿದರು. ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮೀಫ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಕಿರುಹೊತ್ತಗೆಯನ್ನು ಯೆನೆಪೋಯ ಗ್ರೂಪ್‌ನ ನಿರ್ದೇಶಕ ವೈ ಅಬ್ದುಲ್ಲಾ ಜಾವೇದ್ ಅನಾವರಣಗೊಳಿಸಿದರು.

ಬರಕಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ ಅಧ್ಯಕ್ಷ ಅಶ್ರಫ್ ಬಜ್ಪೆ ಮತ್ತು ಉಞ್ಞೆ ಹಾಜಿ , ಬಹರೈನ್‌ನ ಸಿನಾನ್ ಝಕರಿಯಾ ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್‌ನ ಉಪಾಧ್ಯಕ್ಷ ಸುಹೇಲ್ ಅಹ್ಮದ್, ಮಣಿಪಾಲ ಎಚ್‌ಪಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್‌ನ ಅಧ್ಯಕ್ಷ ಹರಿಪ್ರಸಾದ್ ರೈ ಅವರು ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

ಮೀಫ್ ಕೊಡಗು ಚಾಪ್ಟರ್ ಅಧ್ಯಕ್ಷ ಕೆ.ಎ.ಶಾದಲಿ, ಮೀಫ್ ಚಿಕ್ಕಮಗಳೂರು ಚಾಪ್ಟರ್ ಅಧ್ಯಕ್ಷ ಝಮೀರ್ ಅಹ್ಮದ್ , ಮೀಫ್ ಉಪಾಧ್ಯಕ್ಷ ಶಾಬಿಹ್ ಅಹ್ಮದ್ ಕಾಝಿ, ಕೋಶಾಧಿಕಾರಿ ನಿಸಾರ್ ಫಕೀರ್ ಮುಹಮ್ಮದ್ ಉಪಸ್ಥಿತರಿದ್ದರು.

ಮೀಫ್ ಶಾಲೆಗಳಲ್ಲಿ ಎಸೆಸೆಲ್ಸಿಯಲ್ಲಿ ಉನ್ನತ ಸಾಧನೆ ಮಾಡಿರುವ ಸುಮಯ್ಯ ನುಹಾ(619), ದಕ್ಷಿಣ್ ಎಸ್. ಸಾಲ್ಯಾನ್ (618), ನಿದಾ ಖದೀಜ ನೂರ್ (617), ದ್ವಿತೀಯ ಪಿಯುಸಿಯಲ್ಲಿ ಅಗ್ರ ಸ್ಥಾನಗಳನ್ನು ಪಡೆದ ಪೃಥ್ವಿ ಆಚಾರ್ಯ(585) , ಆಯಿಷಾ (584), ಆಯಿಷಾ ಶಮ್ರಿನ್ (584) ಫರ್ರಾಹತ್ ಎಂ.ಎ( 591), ಮಹೀನ್ ಫಾತಿಮಾ( 590), ಆಯಿಷಾ ಫಲಕ್(563), ಅಲೀಮತ್ ಸಯೀದಾ (556), ನಫಿಯಾ .ಎನ್(556), ಮೀಫ್ ಎಸೆಸೆಲ್ಸಿ ಕೊಡಗು- ಫಿಝಾ ವಿ(618), ಮೀಫ್ ಎಸೆಸೆಲ್ಸಿ ಚಿಕ್ಕಮಗಳೂರು -ತಹ್ಸೀನ್ ಫಾತಿಮಾ( 597) ಮತ್ತು ಕರ್ನಾಟಕ ಎಸೆಸೆಲ್ಸಿ ಮೊದಲ ಸ್ಥಾನ ಪಡೆದ ಶಿರಸಿಯ ಶಗುಫ್ತಾ ಅಂಜುಮ್(625) ಇವರಿಗೆ ಸ್ಮರಣಿಕೆ, ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಮೀಫ್ ಪೂರ್ವ ವಲಯ ಉಪಾಧ್ಯಕ್ಷ ಮುಸ್ತಫಾ ಸುಳ್ಯ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕೆ.ಬಿ ಮತ್ತು ಕಾರ್ಯದರ್ಶಿ ಮುಹಮ್ಮದ್ ಶಾರಿಕ್ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಫರ್ವೆಝ್ ಅಲಿ ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X