Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರೋಗ್ಯ ಸಂರಕ್ಷಣೆ, ವೈದ್ಯಕೀಯ ಕ್ಷೇತ್ರದ...

ಆರೋಗ್ಯ ಸಂರಕ್ಷಣೆ, ವೈದ್ಯಕೀಯ ಕ್ಷೇತ್ರದ ಮುನ್ನಡೆಯಲ್ಲಿ ಆಧುನಿಕತೆ, ತಂತ್ರಜ್ಞಾನದ ಪಾತ್ರ ಮಹತ್ವದ್ದು: ಡಾ.ಆಝಾದ್ ಮೂಪನ್

ವಾರ್ತಾಭಾರತಿವಾರ್ತಾಭಾರತಿ28 Oct 2023 7:27 PM IST
share
ಆರೋಗ್ಯ ಸಂರಕ್ಷಣೆ, ವೈದ್ಯಕೀಯ ಕ್ಷೇತ್ರದ ಮುನ್ನಡೆಯಲ್ಲಿ ಆಧುನಿಕತೆ, ತಂತ್ರಜ್ಞಾನದ ಪಾತ್ರ ಮಹತ್ವದ್ದು: ಡಾ.ಆಝಾದ್ ಮೂಪನ್

ಕೊಣಾಜೆ: ವೈದ್ಯಕೀಯ, ಆರೋಗ್ಯ ಸಂರಕ್ಷಣೆ, ಕಾಳಜಿ ಯ ವಿಷಯದಲ್ಲಿ ಭಾರತ ಪ್ರಾಚೀನ ಪರಂಪರೆಯನ್ನು ಹೊಂದಿದ್ದು, ಸುಮಾರು ಐದು ಸಾವಿರ ವರ್ಷಗಳ ಹಿಂದೆಯೇ ಯೋಗ, ಆಯುರ್ವೇದದ ಮೂಲಕ ಇಡೀ ಜಗತ್ತಿಗೇ ಪ್ರಭಾವವನ್ನು ಬೀರಿತ್ತು. ಭವಿಷ್ಯದ ಮೌಲ್ಯಾಧಾರಿತ ಸಮಾಜದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರದ ಅಗತ್ಯತೆ ಮತ್ತು ಸವಾಲು ಗಳುಗಳ ಬಗ್ಗೆ ಚಿಂತನೆಗಳು ಅಗತ್ಯ ಎಂದು ಆಸ್ಕರ್ ಡಿಎಂ ಹೆಲ್ತ್ ಕೇರ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಆಝಾದ್ ಮೂಪನ್ ಅವರು ಹೇಳಿದರು.

ಅವರು ಶನಿವಾರ ಯೆನೆಪೊಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದ 13ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಿದರು.

ಭಾರತದಲ್ಲಿ ಆರಂಭದಲ್ಲಿ ಅಂದರೆ 1835 ಕಲ್ಲತ್ತದಲ್ಲಿ ಮೊದಲ ಮೆಡಿಕಲ್ ಆರಂಭಗೊಂಡು ವೈದ್ಯಕೀಯ ಶಿಕ್ಷಣಕ್ಕೆ ಬುನಾದಿ ಹಾಕಿತು. ಈಗ 701 ಮೆಡಿಕಲ್ ಕಾಲೇಜುಗಳು ನಮ್ಮ ದೇಶದಲ್ಲಿದೆ. ಇಂದು ವೈದ್ಯಕೀಯ ಕ್ಷೇತ್ರ ಹಾಗೂ ಆರೋಗ್ಯದ ಕಾಳಜಿಯಲ್ಲಿ ಆಧುನಿಕತೆ, ತಂತ್ರಜ್ಞಾ‌ನದ ಪ್ರಭಾವ ಮಹತ್ತರವಾದುದು ಹಾಗೂ ವೈಧ್ಯಕೀಯ ಶಿಕ್ಷಣ ಕ್ಷೇತ್ರ ದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ ಮತ್ತು ಇದರಲ್ಲಿ ಯುವ ಸಮುದಾಯದ ಪಾತ್ರ ಪ್ರಮುಖವಾದುದು ಎಂದರು.

ಘಟಿಕೋತ್ಸವದ ಅಧ್ಯಕ್ಷತೆಯನ್ನು ಯೆನೆಪೋಯ ವಿವಿಯ ಕುಲಾಧಿಪತಿ ಡಾ.ಯೆನೆಪೊಯ ಅಬ್ಬುಲ್ಲಾ ಕುಂಞಿ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಐಎಇ ಟ್ರಸ್ಟನ ನ ಅಧ್ಯಕ್ಷರಾದ ಮೊಹಮ್ಮದ್ ಕುಂಞಿ, ಯನೆಪೊಯ ವಿವಿಯ ಸಹಕುಲಾಧಿಪತಿ ಫರ್ಹಾದ್ ಯೆನೆಪೋಯ, ಉಪಕುಲಪತಿ ಡಾ.ಬಿ.ಎಚ್.ಶ್ರೀಪತಿ ರಾವ್, ಕುಲಸಚಿವ ಡಾ.ಗಂಗಾಧರ ಸೋಮಯಾಜಿ, ಪರಿಕ್ಷಾಂಗ ಕುಲಸಚಿವರಾದ ಡಾ.ಬಿ.ಟಿ.ನಂದೀಶ್, ಬಿಒಎಂ ಸದಸ್ಯರಾದ ಯೆನೆಪೋಯ ಅಬ್ದುಲ್ ಜಾವೇದ್ ಹಾಗೂ ವಿವಿಧ ಕೇಂದ್ರಗಳ ಡೀನರು, ಮುಖ್ಯಸ್ಥರು, ಅಧ್ಯಾಪಕರು, ಶೈಕ್ಷಣಿಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ಪ್ರೊ.ವಿಜಯಕುಮಾರ್ ಸ್ವಾಗತಿಸಿದರು. ಡಾ.ಮಲ್ಲಿಕಾ ಶೆಟ್ಟಿ ಹಾಗೂ ಡಾ.ರೋಚೆಲ್ಲೆ ಟೆಲ್ಲಿಸ್ ಕಾರ್ಯಕ್ರಮ ನಿರೂಪಿಸಿದರು.

ಘಟಿಕೋತ್ಸವದಲ್ಲಿ ಪಿಎಚ್ ಡಿ, ಪೋಸ್ಟ್ ಡಾಕ್ಟರಲ್ ಫೆಲೋಶಿಪ್, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲಮೋ ಮತ್ತು ವಿವಿಧ ವಿಭಾಗಗಳು ಸೇರಿದಂತೆ ಒಟ್ಟು 2277 ಅಭ್ಯರ್ಥಿಗಳು ಪದವಿಯನ್ನು ಪಡೆದುಕೊಂಡರು. ವಿವಿಧ ಪದವಿ ಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಒಂಭತ್ತು ಮಂದಿ ಚಿನ್ನದ ಪದಕಗಳನ್ನು ಪಡೆದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X