ಮೂಡುಬಿದಿರೆ | ಗೂಡ್ಸ್ ಲಾರಿ-ಬೈಕ್ ಢಿಕ್ಕಿ: ಸಹ ಸವಾರ ಮೃತ್ಯು

ಮೂಡುಬಿದಿರೆ: ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸಹ ಸವಾರ ಮೃತಪಟ್ಟ ಘಟನೆ ಮೂಡುಬಿದಿರೆ ವಿದ್ಯಾಗಿರಿಯ ಗಾಂಧಿ ನಗರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಮಿಜಾರು ಮರಕಡ ನಿವಾಸಿ ಚಂದು (26) ಮೃತಪಟ್ಟ ಯುವಕ.
ವಿದ್ಯಾಗಿರಿ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬೈಕಿಗೆ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಗೂಡ್ಸ್ ಲಾರಿ ಹಿಂದಿನಿಂದ ಢುಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್ ಸಹ ಸವಾರ ಚಂದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೈಕ್ ಸವಾರ ಉದಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story






