Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಬಡಗಮಿಜಾರು ಅಕ್ರಮ ಕೆಂಪು...

ಮೂಡುಬಿದಿರೆ: ಬಡಗಮಿಜಾರು ಅಕ್ರಮ ಕೆಂಪು ಕಲ್ಲಿನಕೋರೆಗೆ ಲೋಕಾಯುಕ್ತ ದಾಳಿ

► ಕರ್ತವ್ಯ ಲೋಪಕ್ಕೆ ಗಣಿ ಇಲಾಖೆ ಅಧಿಕಾರಿಗಳ‌ ವಿರುದ್ಧ ಲೋಕಾಯುಕ್ತ ಆಕ್ರೋಶ ► ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ3 Dec 2024 10:47 PM IST
share
ಮೂಡುಬಿದಿರೆ: ಬಡಗಮಿಜಾರು ಅಕ್ರಮ ಕೆಂಪು ಕಲ್ಲಿನಕೋರೆಗೆ ಲೋಕಾಯುಕ್ತ ದಾಳಿ

ಮೂಡುಬಿದಿರೆ: ಬಡಗಮಿಜಾರುನಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕೆಂಪು ಕಲ್ಲಿನ ಕೋರೆಗೆ ಉಪ ಲೋಕಾಯುಕ್ತ ವೀರಪ್ಪ ಗೌಡ ನೇತೃತ್ವದಲ್ಲಿ ಸುಮಾರು 25ಕ್ಕೂ ಹೆಚ್ಚಿನ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ಮಾಡಿದ್ದಾರೆ.

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಜೆಸಿಬಿ ಜೊತೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿದ್ದ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲು ಲೋಕಾಯುಕ್ತ ಅಧಿಕಾರಿಗಳು ಮೂಡುಬಿದಿರೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಕಲ್ಲಿನ ಕೋರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ ವೀರಪ್ಪಗೌಡ ಅವರು ಕರ್ತವ್ಯ ಲೋಪ ಎಸಗಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ‌ ವಿರುದ್ಧ ಸ್ಥಳದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಾ‌ ಜಮೀನಿನಲ್ಲಿ ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಅಕ್ರಮವಾಗಿ ಕೆಂಪು ಕಲ್ಲಿನ ಕೋರೆ ನಡೆಸುತ್ತಿದ್ದು, ಕಂದಾಯ ನಿರೀಕ್ಷಕರು ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ವಾರ್ತಾಭಾರತಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅ. 7ರಿಂದ ಮೂಡುಬಿದಿರೆ ತಾಲೂಕಿನ ಬಡಗ ಮಿಜಾರು ಗ್ರಾಮದ ಮಂಜನಬೈಲು ನಿವಾಸಿ ಅರುಣ್‌ ಭಟ್‌ ಎಂಬವರು ಸರ್ವೇ ನಂಬರ್‌ 217/ 2ಎ ಯಲ್ಲಿ 3.22 ಎಕರೆ ಭೂ ಪ್ರದೇಶದಲ್ಲಿ ಅಕ್ರಮ ಕೆಂಪು ಕಲ್ಲಿನ ಕೋರೆ ನಡೆಸುತ್ತಿರುವ ಕುರಿತು ವಾರ್ತಾಭಾರತಿ ಸರಣಿ ಸುದ್ದಿಗಳನ್ನು ಪ್ರಕಟಿಸಿತ್ತು. ಆ ಬಳಿಕ ಗ್ರಾಮಸ್ಥರು ವಾರ್ತಾಭಾರತಿಯ ಸುದ್ದಿಯ ತುಣುಕುಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಕಲ್ಲಿನ ಕೋರೆಗೆ ದಾಳಿ ಮಾಡಿದ್ದಾರೆ.


ದಾಳಿಯ ಸಂದರ್ಭ ಎಡಿಸಿ ಸಂತೋಷ್, ಲೋಕಾಯುಕ್ತ ಎಸ್‌ಪಿ ನಟರಾಜ್, ಕಂದಾಯ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮೂಡುಬಿದಿರೆ ಪೊಲೀಸರು ಜೊತೆಗಿದ್ದರು.

ನಿಡ್ಡೋಡಿಯ ಬಂಗೇರಪದವುನಲ್ಲಿ ಇನ್ನೊಂದು ಅಕ್ರಮ ಕೋರೆ !

ಬಡಗಮಿಜಾರುನಲ್ಲಿ ಅಕ್ರಮ ಕೆಂಪು ಕಲ್ಲಿನ ಕೋರೆ ನಡೆಸುತ್ತಿದ್ದ ವ್ಯಕ್ತಿ ನಿಡ್ಡೋಡಿಯ ಬಂಗೇರಪದವುನಲ್ಲಿ ಹೊಸದಾಗಿ ಇನ್ನೊಂದು ಅಕ್ರಮ ಕೆಂಪು ಕಲ್ಲಿನ ಕೋರೆ ಆರಂಭಿಸಿರುವ ಬಗ್ಗೆ ಗ್ರಾಮಸ್ಥರು ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಬಡಗ ಮಿಜಾರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಅಕ್ರಮ ಕೆಂಪು ಕಲ್ಲಿನ ಕೋರೆಯ ಹೊಂಡಕ್ಕೆ ನಿಡ್ಡೋಡಿಯ ಬಂಗೇರಪದವಿನಲ್ಲಿ ನಡೆಸುತ್ತಿರುವ ಅಕ್ರಮ ಕೋರೆಯಿಂದ ಕೆಂಪು ಮಣ್ಣು ತಂದು ಸುರಿದು ತುಂಬಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಲ್ಲದೆ, ಈ ಅಕ್ರಮ ಕೆಂಪು ಕಲ್ಲಿನ ಕೋರೆ ನಡೆಸಲು ಮೂಡುಬಿದಿರೆಯ ಕಂದಾಯ ನಿರೀಕ್ಷಕರು ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಕುಮ್ಮಕ್ಕು ಇದೆ ಎಂದೂ ಗ್ರಾಮಸ್ಥರು ವಾರ್ತಾಭಾರತಿಗೆ ದೂರಿದ್ದಾರೆ. ‌

ಅಕ್ರಮಕ್ಕೆ ಕಂದಾಯ ನಿರೀಕ್ಷಕರು, ಗಣಿ ಇಲಾಖೆ ಅಧಿಕಾರಿಗಳ ಸಾಥ್‌: ಲೋಕಾಯುಕ್ತಕ್ಕೆ ಸಾಕ್ಷ್ಯ ಸಲ್ಲಿಕೆ

ಬಡಗಮಿಜಾರು ಗ್ರಾಮದಲ್ಲಿ ನಡೆಸುತ್ತಿದ್ದ ಅಕ್ರಮ ಕೆಂಪು ಕಲ್ಲಿನ ಕೋರೆಯ ಮಾಲಕರೊಂದಿಗೆ ಮೂಡುಬಿದಿರೆ ಕಂದಾಯ ನಿರೀಕ್ಷಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಕ್ರಮ ಕಲ್ಲು ಕೋರೆಯ ಮಾಲಕನೊಂದಿಗೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸಾಕ್ಷಿಯಿದ್ದು, ಇದನ್ನು ಲೋಕಾಯುಕ್ತಕ್ಕೆ ನೀಡಿ ಕಂದಾಯ ನಿರೀಕ್ಷಕರು ಮತ್ತು ಗಣಿ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಗ್ರಾಮಸ್ಥರು ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

ಲೊಕಾಯುಕ್ತ ದಾಳಿಗೂ ಮುನ್ನ ಮಾಹಿತಿ ಲೀಕ್‌ !

ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಬಗ್ಗೆ ಅಕ್ರಮ ಗಣಿ ಮಾಲಕರಿಗೆ ಮಾಹಿತಿ ಇತ್ತು ಎಂದು ಗ್ರಾಮಸ್ತರು ದೂರಿದ್ದಾರೆ. ಪ್ರತೀ ದಿನ ಬೆಳಗ್ಗಿನ ಜಾವ 4ಗಂಟೆಯಿಂದ ಅಕ್ರಮ ಗಣಿಗಾರಿಕೆ ಆರಂಭವಾಗುತ್ತಿತ್ತು. ಅದಕ್ಕೆ ಬೇಕಾದ ಎಲ್ಲಾ ಉಪಕರಣಗಳು ಸ್ಥಳದಲ್ಲೇ ಇಡಲಾಗುತ್ತಿತ್ತು. ಆದರೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮಾಹಿತಿ ತಿಳಿದಿದ್ದ ಕಾರಣ ಕೋರೆಯಲ್ಲಿ ಕಲ್ಲು ಕತ್ತರಿಸುವ ಯಂತ್ರೋಪಕರಣಗಳು ಸೇರಿದಂತೆ ಇತರ ಬೆಲೆಬಾಳುವ ಉಪಕರಣಗಳನ್ನು ರಾತ್ರಿಯೇ ಕೋರೆಯಿಂದ ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X