Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ| ಪುತ್ತಿಗೆ ಕನ್ವೆನ್ಶನ್...

ಮೂಡುಬಿದಿರೆ| ಪುತ್ತಿಗೆ ಕನ್ವೆನ್ಶನ್ ಸೆಂಟರ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ12 Dec 2024 8:15 PM IST
share
ಮೂಡುಬಿದಿರೆ| ಪುತ್ತಿಗೆ ಕನ್ವೆನ್ಶನ್ ಸೆಂಟರ್ ಶುಭಾರಂಭ

ಮೂಡುಬಿದಿರೆ: ಪುತ್ತಿಗೆ ಕಡಲಕೆರೆ ನೂರಾನಿ ಮಸೀದಿಯ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಪುತ್ತಿಗೆ ಕನ್ವೆನ್ಶನ್ ಸೆಂಟರ್ ಗುರುವಾರ ಉದ್ಘಾಟನೆಗೊಂಡಿತು.


ಕನ್ವೆನ್ಶನ್ ಸೆಂಟರ್‌ನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈ ದೇಶದಲ್ಲಿ ಜನಿಸಿರುವ ನಾವೆಲ್ಲರೂ ಭಾಗ್ಯವಂತರು. ಭಾರತ ಪ್ರಪಂಚದಲ್ಲೇ ಆದರ್ಶ ಪ್ರಾಯವಾದ ದೇಶ. ಅತೀ ಹೆಚ್ಚಿನ ಜನ ಸಂಖ್ಯೆ ಹೊಂದಿದ್ದದ್ದರೂ ಇದು ಒಂದು ಮತ, ಜಾತಿ, ಧರ್ಮ, ಭಾಷೆಗೆ ಸೀಮಿತವಾಗಿಲ್ಲ. ಮೂಡುಬಿದಿರೆ ಸೌಹಾರ್ದದ ನಾಡು. ಅದನ್ನು ಇದೇ ರೀತಿ ಮುಂದುವರಿಸಬೇಕಿದೆ ಎಂದರು.


ನಮ್ಮ ಪೂರ್ವಜರು ಮಾಡಿರುವ ಜಾತಿ, ಮತ, ಭಾಷೆ ಇವುಗಳನ್ನೆಲ್ಲಾ ಆಳವಾಗಿ ಅರ್ಥೈಸಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಸಂಸ್ಕಾರ ಇದ್ದರೆ ಮಾತ್ರ ಮನುಷ್ಯನಾಗಿ ಬದುಕಲು ಸಾಧ್ಯ ಎಂದ ಅವರು, ತನ್ನ ಜಾತಿ ಧರ್ಮದ ಬಗ್ಗೆ ಪೂರ್ಣವಾಗಿ ಅರಿತು ಇನ್ನೊಂದು ಜಾತಿ, ಧರ್ಮವನ್ನು ಸಹೋದರೆ ಭಾವನೆಯೊಂದಿಗೆ ಗೌರವಪೂರ್ಣವಾಗಿ ಕಾಣುವುದೇ ಸೌಹಾರ್ದ ಎಂದು ಅವರು ನುಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಲಂಗಾರು ಹೋಲಿ ರೋಸಿ ಚರ್ಚ್ ನ ರೆ. ಫಾ.ಮೆಲ್ವಿನ್ ನೊರೊನ್ಹಾ ಮಾತನಾಡಿ, ಮೂಡುಬಿದಿರೆ ಇಂದಿಗೂ ಸೌಹಾರ್ದ ತುಂಬಿರುವ ಸ್ಥಳ. ಇಲ್ಲಿನ ಸೌಹಾರ್ದಕ್ಕೆ ಇಲ್ಲಿನ ನೂರಾನಿ ಮಸೀದಿ ಜಾತಿ ಧರ್ಮಗಳೆಂಬ ಕಟ್ಟಲೆಗಳನ್ನು ಬದಿಗಿಟ್ಟು ಪರಸ್ಪರ ಎಲ್ಲರೂ ಒಗ್ಗೂಡಿಕೊಂಡು ಮಾಡುತ್ತಿರುವ ಕಾರ್ಯಕ್ರಮಗಳೇ ಸೌಹಾರ್ದದ ಪ್ರತೀಕ ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತಿಗೆ ನೂರಾನಿ ಮಸೀದಿಯ ಅಧ್ಯಕ್ಷ ಅಬುಲ್ ಅಲಾ ಪುತ್ತಿಗೆ, ಸೌಹಾರ್ದದ ನೈಜ ಚಿತ್ರಣ ಪುತ್ತಿಗೆ ಕನ್ವೆನ್ಶನ್ ಸೆಂಟರ್ ಉದ್ಘಾಟನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಯುತ್ತದೆ. ಇದು ನಮ್ಮ ಮೂಡುಬಿದಿರೆಯ ವೈಶಿಷ್ಟ್ಯ ಎಂದರು.


ಇದೇ ಸಂದರ್ಭ ನೂರಾನಿ ಮಸೀದಿಯ ವತಿಯಿಂದ ಅನಾರೋಗ್ಯಪೀಡಿತ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಸರ್ವಧರ್ಮೀಯ 10ಕ್ಕೂ ಅಧಿಕ ಕುಟುಂಬಗಳಿಗೆ ಆರ್ಥಿಕ ಸಹಾಯ ವಿತರಿಸಲಾಯಿತು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದಿರುವ ಅಮ್ರಿನ್, ಆರೋಗ್ಯ ಕ್ಷೇತ್ರದ ಸಾಧಕಿ ವಿಮಲಾ ಕೆ., ಶೈಕ್ಷಣಿಕ ಕ್ಷೇತ್ರದ ಸಾಧಕಿಯರಾದ ರಿಝಾ ಶೇಕ್ ರಿಯಾಝ್, ಆಯಿಶಾ ಅಮ್ನಾ ಶೇಕ್, ರಿಯಾ ರಫೀಕ್, ಉದ್ಯಮ ಕ್ಷೇತದ ಮಹಿಳಾ ಸಾಧಕಿ ನಝ್ಮಾರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಪುತ್ತಿಗೆ ಕನ್ವೆನ್ಶನ್ ಸೆಂಟರ್ ಮತ್ತು ನೂರಾನಿ ವೆಲ್ಫೇರ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪುತ್ತಿಗೆ ನೂರಾನಿ ಮಸೀದಿಯ ಉಪಾಧ್ಯಕ್ಷ ಶೇಕ್ ಬಶೀರ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಖಯ್ಯೂಮ್, ಪುತ್ತಿಗೆ ಗ್ರಾಪಂ ಸದಸ್ಯ ಮುಹಮ್ಮದ್ ಶರೀಫ್, ಮಹಿಳಾ ಉದ್ಯಮಿ ಸಾರಾ ಅಬ್ಬಾಸ್ ಮತ್ತಿತರು ಉಪಸ್ಥಿತರಿದ್ದರು.

ಬುಕ್ಕಿಂಗ್ ಆರಂಭ: ಶೇ.20 ರಿಯಾಯಿತಿ

ಪುತ್ತಿಗೆ ಕಡಲಕೆರೆ ನೂರಾನಿ ಮಸೀದಿಯ ವತಿಯಿಂದ ನೂತನವಾಗಿ ನಿರ್ಮಾಣಗೊಂಡು ಗುರುವಾರ ಲೋಕಾರ್ಪಣೆಗೊಂದ ಪುತ್ತಿಗೆ ಕನ್ವೆನ್ಶನ್ ಸೆಂಟರ್ ಸರ್ವ ಧರ್ಮೀಯರಿಗೆ ಮದುವೆ ಸಹಿತ ಶುಭ ಸಮಾರಂಭಗಳಿಗೆ ಲಭ್ಯವಿದೆ. ಡಿಸೆಂಬರ್ ಅಂತ್ಯದ ಒಳಗಾಗಿ ಬುಕ್ ಮಾಡುವ ಎಲ್ಲಾ ಕಾರ್ಯಕ್ರಮಗಳಿಗೆ ಶೇ.20ರಿಯಾಯಿತಿ ನೀಡಲಾಗುವುದು. ಈ ಸೆಂಟರ್‌ನಿಂದ ಬರುವ ಆದಾಯವನ್ನು ಬಡವರ ಅಭಿವೃದ್ಧಿ, ಅನಾರೋಗ್ಯ ಪೀಡಿತರಿಗೆ ಸಹಾಯ ಹಾಗೂ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಲು ತೀರ್ಮಾನಿಸಲಾಗಿದೆ ಎಂದು ನೂರಾನಿ ಮಸೀದಿಯ ಅಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಕನ್ವೆನ್ಶನ್ ಸೆಂಟರ್ ಲೋಕಾರ್ಪಣೆ ಸಂದರ್ಭ ಘೋಷಿಸಿದರು.

































































share
ವಾರ್ತಾಭಾರತಿ
ವಾರ್ತಾಭಾರತಿ
Next Story
X