ಮೂಡುಬಿದಿರೆ| ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಯ ಬಂಧನ

ಮೂಡುಬಿದಿರೆ: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವಿವಾಹಿತ ವ್ಯಕ್ತಿಯನ್ನು ಪೊಲೀಸರು ಮೂಡುಬಿದಿರೆ ಸಮೀಪ ಬಂಧಿಸಿದ್ದಾರೆ.
ಮೂಡುಬಿದಿರೆ ಸಮೀಪದ ನಿವಾಸಿ, ಲಾರಿ ಡ್ರೈವರ್, ವಿವಾಹಿತ ಲೋಕೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿನಿಯ ಪರಿಚಯಸ್ಥನೇ ಆಗಿರುವ ಲೋಕೇಶ್ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಯುವತಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದು, ಬಳಿಕ ದಾರಿ ಮಧ್ಯೆ ತಾನು ಹೊಸದಾಗಿ ನಿರ್ಮಾಣ ಮಾಡುತ್ತಿರುವ ಮನೆ ತೋರಿಸುವುದಾಗಿ ಮನೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




