ಮೂಡುಬಿದಿರೆ: ವಾರೆಂಟ್ ಆರೋಪಿಯ ಬಂಧನ

ಮೂಡುಬಿದಿರೆ: ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಬೂಬಕರ್ ಯಾನೆ ಅಬ್ದುಲ್ ಖಾದರ್ ಯಾನೆ ಇತ್ತೆ ಬರ್ಪೆ ಅಬೂಬಕರ್ ಎಂಬ ಆರೋಪಿಯನ್ನು ಆ.28ರಂದು ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಎಚ್.ಸಿ. ರವೀಂದ್ರ, ಪಿ.ಸಿ. ಲಿಂಗೇಶ್ ಹಾಗೂ ಕೋರ್ಟ್ ಪಿ.ಸಿ. ರಮೇಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story




