ಮಂಗಳೂರಿನ ಮುಕ್ಕ ಪ್ರೊಟೀನ್ಸ್ ಲಿಮಿಟೆಡ್ ಗೆ ಶ್ರೇಷ್ಠ ರಫ್ತು ಸಂಸ್ಥೆ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಂಗಳೂರಿನ ಮುಕ್ಕ ಪ್ರೊಟೀನ್ಸ್ ಲಿಮಿಟೆಡ್ ಗೆ ಶ್ರೇಷ್ಠ ರಫ್ತು ಸಂಸ್ಥೆಗೆ ರಾಜ್ಯ ಪ್ರಶಸ್ತಿ ಲಭಿಸಿದೆ.
ಶನಿವಾರ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳೂರಿನ ಮುಕ್ಕ ಪ್ರೊಟೀನ್ಸ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಕೆ ಮೊಹಮ್ಮದ್ ಹಾರಿಸ್ ಅವರು ಶ್ರೇಷ್ಠ ರಫ್ತು ಸಂಸ್ಥೆ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವ ಕುಮಾರ್ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story