Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಂದಿನಿ ನದಿ ಮಾಲಿನ್ಯ ಪ್ರಕರಣ |...

ನಂದಿನಿ ನದಿ ಮಾಲಿನ್ಯ ಪ್ರಕರಣ | ಸುರತ್ಕಲ್ ಎಸ್‌ಟಿಪಿ ಮೇಲ್ದರ್ಜೆಗೇರಿಸಲು ಅಂದಾಜುಪಟ್ಟಿಗೆ ಸೂಚನೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ28 Nov 2025 5:40 PM IST
share
ನಂದಿನಿ ನದಿ ಮಾಲಿನ್ಯ ಪ್ರಕರಣ | ಸುರತ್ಕಲ್ ಎಸ್‌ಟಿಪಿ ಮೇಲ್ದರ್ಜೆಗೇರಿಸಲು ಅಂದಾಜುಪಟ್ಟಿಗೆ ಸೂಚನೆ: ದಿನೇಶ್ ಗುಂಡೂರಾವ್

ಮಂಗಳೂರು, ನ. 28: ಸುರತ್ಕಲ್ ಮದ್ಯದಲ್ಲಿರುವ ಒಳಚರಂಡಿ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಹಳೆಯ ತಂತ್ರಜ್ಞಾನದಿಂದ ಕೂಡಿದ್ದು, ಹಲವು ನ್ಯೂನ್ಯತೆಗಳಿವೆ. ಅದನ್ನು ಮೇಲ್ದರ್ಜೆಗೇರಿಸಲು ಅಂದಾಜು ಪಟ್ಟಿ ತಯಾರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಪಡೀಲ್‌ನ ಪ್ರಜಾಸೌಧದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆಯ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಅಧಿಕಾರಗಳ ಜತೆ ಬೆಳಗ್ಗೆ ನಂದಿನಿ ನದಿ ನೀರು ಮಾಲಿನ್ಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಎಸ್‌ಟಿಪಿ ಜನರೇಟರ್ ಸಮಸ್ಯೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತವಾದಾಗ ತೊಂದರೆಯಾಗುತ್ತಿದೆ. ಹೊಸ ಜನರೇಟರ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಫೆಬ್ರವರಿಯೊಳಗೆ ಜನರೇಟರ್ ವ್ಯವಸ್ಥೆ ಆಗಲಿದೆ. ಅಲ್ಲಿಯವರೆಗೆ ಬಾಡಿಗೆ ಆಧಾರದಲ್ಲಿ ಜನರೇಟರ್ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ಎಸ್‌ಟಿಪಿಯನ್ನು ಮೇಲ್ದರ್ಜೆಗೇರಿಸಲು ಅಂದಾಜು ಪಟ್ಟಿ ತಯಾರಿಸಿದ ಬಳಿಕ ನಗರಾಭಿವೃದ್ಧಿ ಸಚಿವರ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವುದಾಗಿ ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಈ ಬಾರಿಯ ಕರಾವಳಿ ಉತ್ಸವವನ್ನು ಅದ್ದೂರಿಯಿಂದ ನಡೆಸಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗಿದೆ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಸರ್ಫಿಂಗ್, ಬೀಚ್ ಉತ್ಸವದ ಜತೆ ಕರಾವಳಿ ಉತ್ಸವ ನಡೆಸಲು ತಯಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಮೆಕ್ಕೆಜೋಳ ಸಮಸ್ಯೆ ಕುರಿತಂತೆ ಮುಖ್ಯಮಂತ್ರಿ ನೀಡಿರುವ ಪತ್ರ ನೀಡಲಾಗಿದ್ದು, ಅವರು ಸ್ವೀಕರಿಸಿದ್ದಾರೆ. ಅವರಿಂದ ಸ್ಪಂದನೆಯ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ರಾಜ್ಯದ ರೈತರು ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಟನ್‌ಗೆ 2400 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ ಪಡಿತರ ವ್ಯವಸ್ಥೆಯಲ್ಲಿ ಉಪಯೋಗಿಸುವುದಾದರೆ ಮಾತ್ರವೇ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಮೆಕ್ಕೆಜೋಳ ಪಡಿತರ ವ್ಯವಸ್ಥೆಯಲ್ಲಿ ವಿತರಣೆಯಾಗುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಅದಕ್ಕಾಗಿ ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಲಾಗಿದೆ. ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ ಸೇರಿದಂತೆ ಇತರರು ಈ ವಿಷಯದಲ್ಲಿ ರಾಜ್ಯ ಸರಕಾರವನ್ನು ದೂರುತ್ತಿದ್ದಾರೆ. ಕೇಂದ್ರ ಸರಕಾರ ಬೆಂಬಲ ಬೆಲೆ ನೀಡುವುದು. ಈ ಬಗಗೆ ಜೋಶಿಯವರು ರಾಜಕಾರಣ ಮಾಡುವ ಬದಲು ಬೆಳೆಗಾರರ ಹಿತರಕ್ಷಣೆ ಕಾಯುವ ನಿಟ್ಟಿನಲಲಿ ಕೇಂದ್ರ ಸರಕಾರದ ಗಮನ ಸೆಳೆಯಬೇಕಿದೆ ಎಂದವರು ಹೇಳಿದರು.

ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಮಿಥುನ್ ರೈ, ಮಮತಾ ಗಟ್ಟಿ, ಸದಾಶಿವ ಉಳ್ಳಾಲ್. ಶಶಿಧರ ಹೆಗ್ಡೆ, ಶಕುಂತಳಾ ಶೆಟ್ಟಿ, ಅಪ್ಪಿ, ಪದಮರಾಜ್, ಭಾಸ್ಕರ್, ಸಂತೋಷ್ ಕುಮಾರ್, ಪ್ರವೀಣ್ ಚಂದ್ರ ಆಳ್ವ ಮೊದಲಾದರು ಉಪಸ್ಥಿತರಿದ್ದರು.

ಸಿಎಂ ಬದಲಾವಣೆ ಕುರಿತಾದ ಚರ್ಚೆಯ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ, ಈ ವಿಚಾರದಲ್ಲಿ ಯಾವುದೇ ಅಭಿಪಾಯ ನೀಡಲು ಬಯಸುವುದಿಲ್ಲ. ಎಐಸಿಸಿ ಅಧ್ಯಕ್ಷರು ಈಗಾಗಲೇ ಅದನ್ನು ಸುಸೂತ್ರವಾಗಿ ಬಗೆಹರಿಸುವುದಾಗಿ ಹೇಳಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X