ಪ್ರಾಕೃತಿಕ ವಿಕೋಪ ನಿರ್ವಹಣೆ | ದ.ಕ. ಜಿಲ್ಲೆಗೆ 25 ಕೋಟಿ ರೂ. ಹೆಚ್ಚುವರಿ ಬೇಡಿಕೆ : ಐವನ್ ಡಿಸೋಜಾ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆಯನ್ನು ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ 10 ಮನೆಗಳು ಸಂಪೂರ್ಣ ನಾಶವಾಗಿದೆ. 141 ಮನೆಗಳು ಭಾಗಶ ಹಾನಿಯಾಗಿವೆ. ಇದಕ್ಕೆ ಪರಿಹಾರವಾಗಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಪರಿಹಾರ ಮೊತ್ತ ಪಾವತಿಸಲಾಗಿದೆ. ಮೇ ತಿಂಗಳ ಮಳೆಯಿಂದ ಯಾವುದೇ ಕೃಷಿ ಹಾನಿಯಾಗಿಲ್ಲ. ಆದರೆ ತೋಟಗಾರಿಕೆಯಡಿ 2.564 ಹೆಕ್ಟೇರ್ ಹಾನಿಯಾಗಿದೆ ಎಂದು ಅವರು ಹೇಳಿದರು.
Next Story