Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.1ರಂದು ದ.ಕ. ಜಿಲ್ಲೆಗೆ NDRF ತಂಡ...

ಜೂ.1ರಂದು ದ.ಕ. ಜಿಲ್ಲೆಗೆ NDRF ತಂಡ ಆಗಮನ: ಡಿಸಿ ಮುಲ್ಲೈ ಮುಗಿಲನ್

ಮುಂಗಾರು: ಸಂಭವನೀಯ ವಿಪತ್ತು ನಿರ್ವಹಣೆ

ವಾರ್ತಾಭಾರತಿವಾರ್ತಾಭಾರತಿ31 May 2024 4:09 PM IST
share
ಜೂ.1ರಂದು ದ.ಕ. ಜಿಲ್ಲೆಗೆ NDRF ತಂಡ ಆಗಮನ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು, ಮೇ 31: ಜೂನ್ ಪ್ರಥಮ ವಾರದಲ್ಲೇ ದ.ಕ. ಜಿಲ್ಲಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ NDRF (ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ) ತಂಡವು ಜೂನ್ 1ರಂದು ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಮುಂಗಾರು ಪೂರ್ವ ಸಿದ್ಧತೆಗಳ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡದ ಜತೆಗೆ ರಾಜ್ಯ ತಂಡವೂ ಮಂಗಳೂರು ಮತ್ತು ಪುತ್ತೂರಿನಲ್ಲಿ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ 86 ಗ್ರಾಮಗಳನ್ನು ಸಂಭವನೀಯ ಪ್ರವಾಹ ಪೀಡಿತ, ಭೂಕುಸಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಗ್ರಾಮಗಳ ಒಟ್ಟು 90 ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಹಾಗೂ 73 ಪ್ರದೇಶಗಳಲ್ಲಿ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 97 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭೂಕುಸಿತ, ಪ್ರವಾಹ, ಅಗ್ನಿ ಅವಘಡ ಸೇರಿದಂತೆ ಇತರ ಯಾವುದೇ ವಿಪತ್ತುಗಳು ಸಂಭವಿಸಿದ್ದಲ್ಲಿ ಸಮರ್ಪಕವಾಗಿ ಎದುರಿಸಲು ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ಪ್ರತಿ ಗ್ರಾಪಂ, ವಾರ್ಡ್ ಮಟ್ಟದಲ್ಲಿಯೂ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಲಾಗಿದೆ. ಇವರು ಸಂಭವನೀಯ ವಿಪತ್ತು ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಸ್ಥಳೀಯವಾಗಿ ಲಭ್ಯವಿರುವ ಬೋಟ್, ಮರ ಕತ್ತರಿಸುವ ಯಂತ್ರ, ಹಗ್ಗ, ಜೆಸಿಬಿ, ಕ್ರೇನ್ ಮೊದಲಾದ ರಕ್ಷಣಾ ವ್ಯವಸ್ಥೆ, ಮಾನವ ಸಂಪನ್ಮೂಲವನ್ನು ಕ್ರೋಡೀಕರಿಸಿಕೊಂಡು ಸಿದ್ಧರಾಗಿರಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ನುರಿತ ಈಜು ತಜ್ಞರು, ಮುಳುಗು ತಜ್ಞರನ್ನು ತಾಲೂಕು ಹಂತದಲ್ಲಿ ಗುರುತಿಸಲಾಗಿದೆ. ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರ, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ಜೂನ್ ನಿಂದ ಸೆಪ್ಟಂಬರ್ ವರೆಗೆ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24x7ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಮನಪಾ, ಪೊಲೀಸ್ ಇಲಾಖೆ, ಅಗ್ನಿಶಾಮಕ, ಮೆಸ್ಕಾಂ ಇಲಾಖೆಯಲ್ಲಿಯೂ ಕೂಡಾ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಮೆಸ್ಕಾಂಗೆ ಸಂಬಂಧಿಸಿದ ದೂರುಗಳಿಗೆ ಆರು ಗಂಟೆಯೊಳಗೆ ಸ್ಪಂದಿಸುವುದು ಹಾಗೂ 24 ಗಂಟೆಯೊಳಗೆ ವಿದ್ಯುತ್ ಪೂರೈಕೆ ಪುನರಾರಂಭಿಸುವ ಕುರಿತಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಪ್ರಾಕೃತಿಕ ವಿಕೋಪದಿಂದ ಒಟ್ಟು 124 ಮನೆಗಳು ಹಾನಿಗೊಳಗಾಗಿವೆ. ಸುಳ್ಯ ತಾಲೂಕಿನಲ್ಲಿ 3 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ವಿವಿಧ ತಾಲೂಕುಗಳಲ್ಲಿ ಒಟ್ಟು 16 ಮನೆಗಳು ತೀವ್ರವಾಗಿ ಹಾಗೂ 105 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದರು.


ಮುಂಗಾರು ಪೂರ್ವ ಸಿದ್ಧತೆ: ಇತರ ಪ್ರಮುಖ ಕ್ರಮಗಳು

♦ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗೃತಾ ಕ್ರಮ ವಹಿಸುವುದು ಹಾಗೂ ಆ್ಯಂಬುಲೆನ್ಸ್ ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ

♦ ಮೀನುಗಾರಿಕಾ ನಿಷೇಧ ಅವವಧಿಯಲ್ಲಿ ನಾಡದೋಣಿಗಳು ಸಮದ್ರ, ನದಿಗೆ ಹೋಗದಂತೆ ಕಟ್ಟನಿಟ್ಟಿನ ಕ್ರಮ ವಹಿಸಲು ಮೀನುಗಾರಿಕಾ ಇಲಾಖೆಗೆ ನಿರ್ದೇಶನ.

♦ ಘಾಟಿ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದಲ್ಲಿ ವಾಹನಗಳು, ಜನಸಾಮಾನ್ಯರು ಆ ಪ್ರದೇಶಕ್ಕೆ ಪ್ರವೇಶಿಸುವ ಮುಂಚಿತವಾಗಿ ಮಾಹಿತಿ ಲಭ್ಯ ಹಾಗೂ ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ.

♦ ರಸ್ತೆ ಬದಿ, ಕಟ್ಟಡಗಳ ಮೇಲಿನ ಅಪಾಯಕಾರಿ ಜಾಹೀರಾತು ಫಲಕ, ಫ್ಲೆಕ್ಸ್ ಗಳಿದ್ದಲ್ಲಿ ತೆರವಿಗೆ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X