ಶಾಸಕ ರಾಜೇಶ್ ನಾಯ್ಕ್ ರಿಗೆ ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ

ಮಂಗಳೂರು: ಕಸದಿಂದ ರಸ ತೆಗೆಯುತ್ತಿರುವ ಪ್ರಗತಿಪರ ಕೃಷಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರನ್ನು ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಗೌರವಿಸಲಾಯಿತು.
ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಬಾಲಕೃಷ್ಣ ಗಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಕಾರ್ಯ ದರ್ಶಿ ಬಿ.ಎನ್. ಪುಷ್ಪರಾಜ್, ಕೋಶಾಧಿಕಾರಿ ವಿಜಯ ಕೋಟ್ಯಾನ್ ಉಪಸ್ಥಿತರಿದ್ದರು.
ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.
Next Story





