Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಸೋಲದೆ ದ.ಕ. ಜಿಲ್ಲೆಯ ಅಭಿವೃದ್ಧಿ...

ಬಿಜೆಪಿ ಸೋಲದೆ ದ.ಕ. ಜಿಲ್ಲೆಯ ಅಭಿವೃದ್ಧಿ ಅಸಾಧ್ಯ: ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ19 Dec 2023 8:45 PM IST
share
ಬಿಜೆಪಿ ಸೋಲದೆ ದ.ಕ. ಜಿಲ್ಲೆಯ ಅಭಿವೃದ್ಧಿ ಅಸಾಧ್ಯ: ಮುನೀರ್ ಕಾಟಿಪಳ್ಳ

ಮಂಗಳೂರು: ಪ್ರಗತಿಪಥದಲ್ಲಿದ್ದ ದ.ಕ. ಜಿಲ್ಲೆ ಪ್ರಸ್ತುತ ಹತಾಶ ಸ್ಥಿತಿಗೆ ತಳ್ಳಲ್ಪಟ್ಟಿದೆ. ಬಿಜೆಪಿಯವರಿಗೆ ಸಾಮಾನ್ಯ ಜನರ ಕಷ್ಟ ತಿಳಿಯುವುದಿಲ್ಲ. ಅವರಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿಲ್ಲ. ಭಾವನಾತ್ಮಕ ವಿಚಾರ ಮುಂದಿಟ್ಟು ರಾಜಕೀಯ ಮಾಡುತ್ತಾರೆ. ಬಿಜೆಪಿಯನ್ನು ಸೋಲಿಸದೆ ಜಿಲ್ಲೆ ಸಮಗ್ರ ಅಭಿವೃದ್ಧಿಯ ಕಡೆಗೆ ಚಲಿಸಲು ಸಾಧ್ಯವೇ ಇಲ್ಲ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

ಸಿಪಿಐಎಂ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮದ ಅಂಗವಾಗಿ ನಡೆದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿ ಕಡೆಗಣನೆ, ಅರಾಜಕತೆಗೆ ಸಂಸದ ನಳಿನ್ ಕುಮಾರ್ ಕಟೀಲ್‌ರ ವೈಫಲ್ಯವೇ ಕಾರಣ ಎಂದು ಬಿಜೆಪಿ ಪರಿವಾರದ ಒಂದು ಗುಂಪು ಪ್ರಚಾರ ಮಾಡುವ ಮೂಲಕ ವೈಫಲ್ಯದಲ್ಲಿ ಬಿಜೆಪಿ ಪಕ್ಷದ ಪಾತ್ರವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ, ಕಳೆದ ಮೂರು ದಶಕಗಳ ಕಾಲ ಬಿಜೆಪಿ ಜನಪ್ರತಿನಿಧಿಗಳ ದುರಾಡಳಿತವೇ ತುಳುನಾಡಿನ ಇಂದಿನ ದುಸ್ಥಿತಿಗೆ ಕಾರಣ. ಜಿಲ್ಲೆಯನ್ನು ಪೂರ್ತಿಯಾಗಿ ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಸೇರಿದಂತೆ ಬಲಾಢ್ಯ ಶಕ್ತಿಗಳಿಗೆ ಒಪ್ಪಿಸುವಲ್ಲಿ ಬಿಜೆಪಿ ಸಂಸದ, ಶಾಸಕರ ಪಾತ್ರವೆ ದೊಡ್ಡದು. ಮತೀಯ ಅಜೆಂಡಾ ಮುಂದಿಟ್ಟು ಜನ ಸಾಮಾನ್ಯರನ್ನು ಮರಳು ಮಾಡಿ ಮತಪಡೆದು, ಬಲಾಢ್ಯ ಲಾಬಿಗಳ ಸೇವೆಯನ್ನು ನಿಷ್ಟೆಯಿಂದ ಮಾಡುವುದರಲ್ಲಿ ಬಿಜೆಪಿ ಪಳಗಿದೆ. ಇದರಿಂದ ಮತ ನೀಡಿದ ಜನಸಾಮಾನ್ಯರು ಬೀದಿಗೆ ಬಂದಿದ್ದಾರೆ ಎಂದ ಆರೋಪಿಸಿದರು.

ಬಿಜೆಪಿಯವರಿಂದ ದುರಾಡಳಿತ, ಕಮಿಷನ್ ದಂಧೆ ನಡೆಯುತ್ತಿದೆ. ಬಿಜೆಪಿ ಮುಖಂಡರ ಹಿಂಬಾಲಕರು ಮಟ್ಕಾ, ಮರಳು ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಜನರ ತೆರಿಗೆಯ ಹಣ ಪೋಲು ಮಾಡಲಾಗುತ್ತಿದೆ. ಮರಳು ಸಮಸ್ಯೆಯ ಬಗ್ಗೆ ಮಾತನಾಡುತ್ತಿಲ್ಲ. ಇಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಿಲ್ಲ. ಬದಲಾಗಿ ಹೊರ ರಾಜ್ಯದ ಕಾರ್ಮಿಕರಿಂದ ಜೀತ ಮಾಡಿಸಲಾಗುತ್ತಿದೆ. ವಸತಿ ಯೋಜನೆ ಜಾರಿಗೊಳಿಸಿಲ್ಲ. ಮೀನುಗಾರರ ಸಮಸ್ಯೆಗಳಿಗೂ ಸ್ಪಂದಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಬಿಜೆಪಿಯ ಜನವಿರೋಧಿ ರಾಜಕಾರಣವನ್ನು ಸೋಲಿಸಲು ಒಂದಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸತತ ಒಂಬತ್ತು ಭಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೆದ್ದಿದೆ. ಈ ಅವಧಿಯಲ್ಲಿ ಜನಸಾಮಾನ್ಯರ ಪ್ರಶ್ನೆಗಳು ಪೂರ್ತಿಯಾಗಿ ಕಡೆಗಣಿಸಲ್ಪಟ್ಟು ಅವರ ಬದುಕು ನಲುಗಿ ಹೋಗಿದೆ ಎಂದು ಆರೋಪಿಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಮುಂಭಾಗ ಬಹಿರಂಗ ಸಭೆ ನಡೆಯಿತು. ಮೆರವಣಿಗೆಯಲ್ಲಿ ಬಿಜೆಪಿ ವೈಫಲ್ಯಗಳನ್ನು ವಿರುದ್ಧ ಘೋಷಣೆ ಹಾಕಲಾಯಿತು.

ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಪ್ರಮುಖರಾದ ಪದ್ಮಾವತಿ ಶೆಟ್ಟಿ, ವಸಂತ ಆಚಾರಿ, ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟ್ಟು, ಸದಾಶಿವ, ಜಯಂತಿ ಶೆಟ್ಟಿ, ರಮಣಿ ಮೂಡುಬಿದಿರೆ, ವಸಂತಿ, ಯೋಗೀಶ್ ಜೆಪ್ಪಿನಮೊಗರು, ಕೃಷ್ಣಪ್ಪ ಸಾಲ್ಯಾನ್ ಮೊದಲಾದವರು ಪಾಲ್ಗೊಂಡಿದ್ದರು.

ಸುನಿಲ್ ಕುಮಾರ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು, ಸಂತೋಷ್ ಬಜಾಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X