Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಣಿ ಅಬ್ಬಕ್ಕನ ಕಾಲದಿಂದಲೂ ಮಳಲಿ ಮಸೀದಿ...

ರಾಣಿ ಅಬ್ಬಕ್ಕನ ಕಾಲದಿಂದಲೂ ಮಳಲಿ ಮಸೀದಿ ಇತ್ತು: ಅಬ್ದುಲ್ ನಾಸಿರ್ ಲಕ್ಕಿಸ್ಟಾರ್

"ಇತಿಹಾಸಕಾರರ ಹೇಳಿಕೆಯ ದಾಖಲೆ ಇದೆ"

ವಾರ್ತಾಭಾರತಿವಾರ್ತಾಭಾರತಿ3 Feb 2024 5:01 PM IST
share
ರಾಣಿ ಅಬ್ಬಕ್ಕನ ಕಾಲದಿಂದಲೂ ಮಳಲಿ ಮಸೀದಿ ಇತ್ತು: ಅಬ್ದುಲ್ ನಾಸಿರ್ ಲಕ್ಕಿಸ್ಟಾರ್

ಮಂಗಳೂರು: ಮಂಗಳೂರು ತಾಲೂಕಿನ ತೆಂಕ ಉಳಿಪ್ಪಾಡಿ ಗ್ರಾಮದ ಮಳಲಿ ಪೇಟೆ ಜುಮಾ ಮಸೀದಿಯು ಇತ್ತು ಎನ್ನುವುದಕ್ಕೆ ದಾಖಲೆಗಳು ನಮ್ಮ ಬಳಿ ಇದೆ. ಈ ಮಸೀದಿಯ ಆಸ್ತಿ ವಕ್ಫ್ ಆಸ್ತಿಯ ವ್ಯಾಪ್ತಿಗೆ ಒಳ ಪಡುವುದರಿಂದ ಅದರ ಬಗ್ಗೆ ವಿವಾದಗಳಿದ್ದರೆ ವಕ್ಫ್ ಟ್ರಿಬ್ಯೂನಲ್ ನಲ್ಲಿ ವಿಚಾರಣೆ ನಡೆಯಲಿ ಎನ್ನುವುದು ನಮ್ಮ ವಾದವಾಗಿತ್ತು. ಈ ಬಗ್ಗೆ ಇದೀಗ ಹೈ ಕೋರ್ಟ್ ಅದನ್ನು ಜಿಲ್ಲಾ ನ್ಯಾಯಾಲಯದಲ್ಲಿಯೂ ವಿಚಾರಣೆ ಮಾಡಬಹುದು ಎಂದು ತೀರ್ಪು ನೀಡಿದ್ದಾರೆ. ಎಲ್ಲಿ ವಿಚಾರಣೆ ನಡೆದರು ನಮಗೆ ನ್ಯಾಯ ಸಿಗಬಹುದು ಎಂಬ ನಂಬಿಕೆ ನಮಗಿದೆ. ನಮ್ಮ ಬಳಿ ಇರುವ ದಾಖಲೆಗಳೊಂದಿಗೆ ವಿಚಾರಣೆ ಎದುರಿಸುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಣಿ ಅಬ್ಬಕ್ಕನ ಕಾಲದಲ್ಲೂ ಇಲ್ಲಿ ಮಸೀದಿ ಇತ್ತು ಎನ್ನುವುದನ್ನುಖ್ಯಾತ ವಿದ್ವಾಂಸ ಡಾ.ಅಮೃತ ಸೋಮೇಶ್ವರರ ತಮ್ಮ ಅಬ್ಬಕ್ಕ ಸಂಕಥನ ಕೃತಿಯಲ್ಲಿ ವಿದೇಶಿ ಪ್ರವಾಸಿ ಕಂಡ ಅಬ್ಬಕ್ಕ ಲೇಖನದಲ್ಲಿ ದಾಖಲಿಸಿದ್ದಾರೆ. ಈ ಮಸೀದಿ ಬ್ರಿಷರ ಕಾಲ ದಲ್ಲೂ ಇತ್ತು. ಕಂದಾಯ ಇಲಾಖೆಯ ಹಳೆಯ (ಅಡಂಗಲ್)ದಾಖಲೆಯಲ್ಲಿ ಯೂ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆಗಳು ನಮ್ಮ ಬಳಿ ಇದೆ. ಮಸೀದಿಯ ನಿರ್ವಹಣೆಗೆ ಪ್ರಾಚೀನ ಕಾಲದಲ್ಲಿ ದೀಪದ ಎಣ್ಣೆ, ಬಳಿಕ ತಸ್ತೀಕ್, ಬ್ರಿಟಿಷ್ ಕಾಲದಲ್ಲಿ ಚಲಾವಣೆಯ ನಾಣ್ಯಗಳ ರೂಪದಲ್ಲಿ ತಸ್ತೀಕ್ ನೀಡಲಾಗಿರುವ ದಾಖಲೆಗಳಿವೆ. ಮಸೀದಿಯ ಆಸ್ತಿಯನ್ನು ವಕ್ಫ್ ನಲ್ಲಿ ನೋಂದಣಿ ಮಾಡುವಾಗ ತಹಶಿಲ್ದಾರರ ಮೂಲಕ ಪರಿಶೀಲನೆಯಾಗಿ, 2004ರಲ್ಲಿ ಸರ್ವೆ ನಡೆದು ದಾಖಲಾಗಿದೆ. ಸುಪ್ರೀಂ ಕೋರ್ಟ್ ನ ತೀರ್ಪು ಪ್ರಕಾರ ಒಮ್ಮೆ ಅದು ವಕ್ಫ್ ಆಸ್ತಿ ಎಂದು ದಾಖಲಾದ ಬಳಿ ಅದು ವಕ್ಫ್ ಸುಪರ್ದಿಗೆ ಬರುತ್ತದೆ. ಆದುದರಿಂದ ಈ ಬಗ್ಗೆ ವಿವಾದಗಳಿದ್ದರೆ ವಕ್ಫ್ ನ್ಯಾಯ ಮಂಡಳಿ ವಿಚಾರಣೆ ಮಾಡುತ್ತದೆ. ಆದರೆ ಇತ್ತೀಚೆಗೆ ಕೆಲವರು ಅದರಲ್ಲಿ ದೇವಾಲಯದ ಕುರುಹುಗಳಿವೆ ಎಂದು ವಿವಾದ ಮಾಡಿ ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದರ ವಿರುದ್ಧ ಮಸೀದಿಯ ಆಡಳಿತ ಮಂಡಳಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಇದೀಗ ಹೈಕೋರ್ಟ್ ಜಿಲ್ಲಾ ನ್ಯಾಯಾಲಯದಲ್ಲಿಯೂ ವಿಚಾರಣೆ ಮಾಡಬಹುದು ಎಂದು ತೀರ್ಪು ನೀಡಿದೆ ಹೊರತಾಗಿ ಅದು ಮಸೀದಿಯ ಜಾಗ ಅಲ್ಲ ಎಂದು ತೀರ್ಪು ನೀಡಿಲ್ಲ ಈ ಬಗ್ಗೆ ಗೊಂದಲ ಬೇಡ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸುವುದಾಗಿ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಸ್ಪಷ್ಟ ಪಡಿಸಿದರು.

ಮಳಲಿ ಹಳೆಯ ಮಸೀದಿ ಯಾಗಿರುವ ಕಾರಣ ಮತ್ತು ಈಗಿನ ಜನಸಂಖ್ಯೆ ಹೆಚ್ಚಿರುವ ಕಾರಣ ಅದರ ನವೀಕರಣ ಮಾಡಲು ಆಡಳಿತ ಸಮಿತಿ ಹೊರಟಿತ್ತು ಈ ಬಗ್ಗೆ ಕೆಲವರು ಗೊಂದಲ ನಿರ್ಮಿಸಲು ಹೊರಟ ಘಟನೆ ನಡೆದಿದೆ.ಹೊರತು ಅಲ್ಲಿನ ಸಾಕಷ್ಟು ಸ್ಥಳೀಯರು ಮಸೀದಿಯ ಬಗ್ಗೆ ಗೌರವ ಭಾವನೆ ಹೊಂದಿದ್ದಾರೆ. ಈ ಮಸೀದಿಯ ಆಸ್ತಿ ವಕ್ಫ್ ಗೆ ಸಂಬಂಧ ಪಟ್ಟಿರುವ ಕಾರಣ ಮುಂದೆ ವಕ್ಫ್ ಮಂಡಳಿಯ ಮೂಲಕವೂ ಕಾನೂನು ಹೋರಾಟ ನಡೆಸಲಾಗುವುದು ನ್ಯಾಯ ದೊರಕುವ ವಿಶ್ವಾಸವಿದೆ ಎಂದು ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಡಾ.ಎ.ಕೆ.ಜಮಾಲ್, ಸದಸ್ಯ ಸೈದುದ್ಧೀನ್ ಬಜ್ಪೆ, ಮಳಲಿ ಪೇಟೆ ಜುಮಾ ಮಸೀದಿಯ ಆಧ್ಯಕ್ಷ ಅಬ್ದುಲ್ ರಝಾಕ್, ಉಪಾಧ್ಯಕ್ಷ ಎಂ.ಎ.ಅಬೂಬಕ್ಕರ್, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X