Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆರೋಸಾ ಶಾಲೆಯ ಘಟನೆ, ಶಾಸಕರ ವರ್ತನೆಯ...

ಜೆರೋಸಾ ಶಾಲೆಯ ಘಟನೆ, ಶಾಸಕರ ವರ್ತನೆಯ ಬಗ್ಗೆ ತನಿಖೆಗೆ ಮಂಗಳೂರು ಧರ್ಮಪ್ರಾಂತ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Feb 2024 10:30 PM IST
share
ಜೆರೋಸಾ ಶಾಲೆಯ ಘಟನೆ, ಶಾಸಕರ ವರ್ತನೆಯ ಬಗ್ಗೆ ತನಿಖೆಗೆ ಮಂಗಳೂರು ಧರ್ಮಪ್ರಾಂತ ಆಗ್ರಹ

ಮಂಗಳೂರು: ಜೆಪ್ಪುವಿನ ಸೈಂಟ್ ಜೆರೋಸಾ ಶಾಲೆಯ ಘಟನೆಯ ಬಗ್ಗೆ ಮಂಗಳೂರು ಧರ್ಮಪ್ರಾಂತ ಕಳವಳ ವ್ಯಕ್ತಪಡಿಸಿದ್ದು, ಅಲ್ಲಿ ನಡೆದಿರುವ ಘಟನೆಗಳು ಮತ್ತು ಶಾಸಕರ ಆಘಾತಕಾರಿ ವರ್ತನೆಯ ಬಗ್ಗೆ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಮತ್ತು ಮಹಿಳಾ ಆಯೋಗ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದೆ.

ಶಿಕ್ಷಕಿಯರ ವಿರುದ್ಧ ಆರೋಪಗಳು ದುರದೃಷ್ಟಕರ ಎಂದು ಧರ್ಮಪಾಂತದಿಂದ ಹೊರಡಿಸಲಾದ ಹೇಳಿಕೆಯಲ್ಲಿ ಬಣ್ಣಿಸಿದೆ.

ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ.ಜೆ.ಬಿ.ಸಲ್ದಾನ ಮತ್ತು ವಂ.ರಾಯ್ ಕ್ಯಾಸ್ಟೀನೊ ಅವರು ಹೇಳಿಕೆಯ ವಿವರ ಇಂತಿವೆ.

7ನೇ ತರಗತಿಯ ಇಂಗ್ಲಿಷ್ ಟೀಚರ್ ಹಿಂದೂ ಧಾರ್ಮಿಕ ಆಚರಣೆಗಳು ಮತ್ತು ರಾಜಕೀಯ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದ ಮೂಲಕ ಎರಡು ಆಡಿಯೋ ಸಂದೇಶಗಳು ಫೆ.10ರಂದು ಹರಿದಾಡಿದ ಬೆನ್ನಲ್ಲೇ ವಿದ್ಯಾರ್ಥಿಗಳ ನಾಲ್ವರು ಪೋಷಕರು ಮುಖ್ಯೋಪಾಧ್ಯಾಯಿನಿಯನ್ನು ಸಂಪರ್ಕಿಸಿದ್ದರು. ಅವರು ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ, ಮಧ್ಯಾಹ್ನ 12.30ರ ವೇಳೆಗೆ ವ್ಯಕ್ತಿಗಳ ಗುಂಪು ಶಾಲೆಯ ಸುತ್ತಲೂ ಜಮಾಯಿಸಿತು. ಶಾಲೆಯ ಧರ್ಮ ಭಗಿನಿಯರು ಜಿಲ್ಲಾಡಳಿತಕ್ಕೆ ಪತ್ರ ಬರೆದು ಆಡಿಯೋ ಸಂದೇಶಗಳು ಸತ್ಯಕ್ಕೆ ದೂರವಾಗಿವೆ ಮತ್ತು ಯಾವುದೇ ಅಹಿತಕರ ಘಟ ನಡೆಯದಂತೆ ರಕ್ಷಣೆ ಕೋರಿದ್ದರು. ಫೆಬ್ರವರಿ 12 ರಂದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದಾಗ ಪರಿಸ್ಥಿತಿ ಉಲ್ಬಣ ಗೊಂಡಿತ್ತು. ಸ್ಥಳೀಯ ಶಾಸಕರಾದ ವೇದವ್ಯಾಸ್ ಕಾಮತ್ ಶಾಲೆಗೆ ಆಗಮಿಸಿ, ನ್ಯಾಯಯುತ ತನಿಖೆಯ ಸಾಂವಿಧಾನಿಕ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯವನ್ನು ಪ್ರದರ್ಶಿಸಿದರು.

ಅಲ್ಲಿ ನೆರೆದಿದ್ದ ಧರ್ಮ ಭಗಿನಿಯರು ಹಾಗೂ ಮಹಿಳಾ ಸಿಬ್ಬಂದಿಗಳ ಮೇಲೆ ಹರಿಹಾಯ್ದರು ಮತ್ತು ತಕ್ಷಣವೇ ಲಿಖಿತ ಕ್ಷಮೆ ಯಾಚನೆ ಮತ್ತು ಶಿಕ್ಷಕಿಯನ್ನು ಅಮಾನತುಗೊಳಿಸಬೇಕೆಂದು ಪಟ್ಟು ಹಿಡಿದರು. ಸಂಜೆ ವೇಳೆ ಮಕ್ಕಳೊಂದಿಗೆ ಘೋಷಣೆಗಳನ್ನು, ಶಿಕ್ಷಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಾಲಾ ಆಡಳಿತ ಮಂಡಳಿಯು ಒತ್ತಡಕ್ಕೆ ಮಣಿದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ವಿದ್ಯಾರ್ಥಿ ಸಮುದಾಯದ ಸುರಕ್ಷತೆಯನ್ನು ಖಾತ್ರಿಪಡಿಸಲು ವಿಚಾರಣೆಗೆ ಬಾಕಿಯಿರುವ ವರೆಗೂ ಶಿಕ್ಷಕಿಯನ್ನು ಅಮಾನತುಗೊಳಿಸಿತ್ತು..

ಜೆರೋಸಾ ಶಾಲೆಯಲ್ಲಿ ಆಂಗ್ಲ ಶಿಕ್ಷಕಿ 7ನೇ ತರಗತಿಯ ರಾಜ್ಯ ಮಂಡಳಿಯ ಇಂಗ್ಲಿಷ್ ಪಠ್ಯದಲ್ಲಿರುವ ರವೀಂದ್ರನಾಥ ಟ್ಯಾಗೋರ್ ಅವರ " Work is Worship'' Whom dost thou worship in this lonely dark corner of the temple with doors all shut ? ( ದೇವಾಲಯದ ಬಾಗಿಲು ಮುಚ್ಚಿರುವ ಈ ಏಕಾಂಗಿ ಕತ್ತಲೆ ಮೂಲೆಯಲ್ಲಿ ಯಾರನ್ನು ಪೂಜಿಸುತ್ತೀರಿ) ಎಂಬ ಸಾಲುಗಳನ್ನು ವಿವರಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವಂತೆ ಅವರು ಯಾವುದನ್ನೂ ಕಲಿಸಲಿಲ್ಲ ಅಥವಾ ಹೇಳಲಿಲ್ಲ.

ಆದರೆ ಈ ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು ಧರ್ಮಪ್ರಾಂತ್ಯವು ಚುನಾಯಿತ ಜನಪ್ರತಿನಿಧಿ ಮತ್ತು ಅವರ ಜನರಿಂದ ಶಿಕ್ಷಕ, ವಿದ್ಯಾರ್ಥಿಗಳು ಮತ್ತು ಶಾಲೆಗೆ ಅನ್ಯಾಯವಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X