Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊರಗ ಭಾಷೆ -ಬ್ರಾಹುಯಿ ಭಾಷೆಗೂ ಸಾಮ್ಯತೆ:...

ಕೊರಗ ಭಾಷೆ -ಬ್ರಾಹುಯಿ ಭಾಷೆಗೂ ಸಾಮ್ಯತೆ: ಮಂಗಳೂರು ವಿವಿ ಸಂಶೋಧಕರು

ವಾರ್ತಾಭಾರತಿವಾರ್ತಾಭಾರತಿ26 Feb 2024 7:51 PM IST
share
ಕೊರಗ ಭಾಷೆ -ಬ್ರಾಹುಯಿ ಭಾಷೆಗೂ ಸಾಮ್ಯತೆ: ಮಂಗಳೂರು ವಿವಿ ಸಂಶೋಧಕರು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.

ಪಾಕಿಸ್ತಾನದ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿ ಮೂಡಿಸಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್‌ನಲ್ಲಿ ಬ್ರಾಹುಯಿ ಭಾಷೆಯನ್ನು ಮಾತನಾಡುವವರು ನೆಲೆಸಿದ್ದಾರೆ.

ಕೊರಗರ ಮಾತೃಸಂಬಂಧಿ ಜೀನೋಮ್‌ಗಳ (DNA)) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ ಕಡೆಗೆ ಓಡಿಹೋದ ಒಂದು ಮಾತೃಭಾಷೆಯನ್ನು ಪ್ರತಿನಿಧಿಸುತ್ತದೆ ಎಂದು ತಿಳಿದುಬಂದಿದೆ.

ಪ್ರಮುಖ ಲೇಖಕರಲ್ಲಿ ಒಬ್ಬರಾದ ಜೈಸನ್ ಸಿಕ್ವೇರಾ, ಕೊರಗರ ಅನುವಂಶಿಕತೆಯು ನಮಗೆ ಹಿಂದಿನ ಕನಿಷ್ಠ ಎರಡು ನಿರ್ಣಾಯಕ ಕಾಲಾವಧಿಗಳನ್ನು ತಿಳಿಸುತ್ತದೆ. ಮಾತೃಸಂಬಂಧಿ ವಂಶವಾಹಿ ಸಂಗ್ರಹ (ಜೀನ್ ಪೂಲ್) ಸುಮಾರು 16000 ವರ್ಷಗಳ ಹಿಂದಿನ ಪ್ಲೀಸ್ಟೋಸೀನ್ ಯುಗಕ್ಕೆ ಸಂಬಂಧಿಸಿದ್ದರೆ, ಪಿತೃ ವಂಶವಾಹಿ ಸಂಗ್ರಹವು ಮತ್ತೂ ಹಿಂದಕ್ಕೆ ಹೋಗಿ ಸುಮಾರು 30000 ವರ್ಷಗಳ ಹಿಂದಿನ ಕೊನೆಯ ಗ್ಲೇಶಿಯಲ್ ಗರಿಷ್ಠ (ಐಉಒ) ಯುಗಕ್ಕೆ ಸೇರಿರುತ್ತದೆ. ಈ ಯುಗವು ಭಾರತೀಯ ಉಪಖಂಡದ ಮೂಲ ಪಿತೃ ಅನುವಂಶಿಕತೆ ರೂಪುಗೊಂಡ ಕಾಲ’’ ಎನ್ನುತ್ತಾರೆ. ಈ ಅಧ್ಯಯನದ ಸಹ ಲೇಖಕ, ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುಸ್ತಾಕ್ ಎಂ.ಎಸ್ ಅವರ ಪ್ರಕಾರ ‘‘ದಕ್ಷಿಣ ಭಾರತದ ಪ್ರಾಚೀನ ಡಿಎನ್‌ಎ ದೊರೆಯದಿರುವಾಗ ಈ ಪ್ರಾಚೀನ ಬುಡಕಟ್ಟು ಸಮುದಾಯ ಉತ್ತಮ ಬದಲಿ ಪ್ರತಿನಿಧಿಯಾಗಿ ಕಂಡುಬರುತ್ತಿದೆ,’’ ಎನ್ನುತ್ತಾರೆ.

ವಿಶ್ವಪ್ರಸಿದ್ಧ ಭಾಷಾಶಾಸ್ತ್ರಜ್ಞ, ಡಾ. ಜಾರ್ಜ್ ವಾನ್ ಡ್ರೆಮ್ (ಬರ್ನ್ ವಿಶ್ವವಿದ್ಯಾಲಯ, ಸ್ವಿಝರ್‌ಲ್ಯಾಂಡ್), ಡಾ. ವಿನುತಲಕ್ಷ್ಮೀ ಮತ್ತು ಡಾ. ರಣಜಿತ್ ದಾಸ್ (ಯೆನಪೊಯಾ, ಡೀಮ್ಡ್ ವಿವಿ ) ಈ ಪ್ರಬಂಧದ ಸಹ ಲೇಖಕರಾಗಿದ್ದಾರೆ. ಈ ಸಂಶೋಧನಾ ಪ್ರಬಂಧ, ಪ್ರತಿಷ್ಠಿತ ಫ್ರಾಂಟಿಯರ್ಸ್ ಇನ್ ಜೆನೆಟಿಕ್ಸ್‌ನಲ್ಲಿ ಪ್ರಕಟಗೊಂಡಿದೆ.

ಕೊರಗ ಬುಡಕಟ್ಟು ಮುಖ್ಯವಾಗಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭಾಗಗಳಲ್ಲಿ, ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಉತ್ತರ ಕನ್ನಡದ ಶಿವಮೊಗ್ಗ ಮತ್ತು ಕೊಡಗಿನಲ್ಲಿ ಕಂಡುಬರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X