ಸುರತ್ಕಲ್: ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ

ಸುರತ್ಕಲ್: ಇಲ್ಲಿನ ಮುಕ್ಕದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ರವಿವಾರ ವರದಿಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಕಾನ ಕಟ್ಲ ನಿವಾಸಿ ವಸಂತ (54) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ರವಿವಾರ ಸಂಜೆ ಕಾಲೇಜು ಮುಂಭಾಗದ ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಆರೋಪಿ ವಸಂತ ವಿದ್ಯಾರ್ಥಿನಿಯ ಮೈಮೇಲೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಲಾಗಿದೆ. ಈ ವೇಳೆ ವಿದ್ಯಾರ್ಥಿನಿ ಕಿರುಚಿದ ಪರಿಣಾಮ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





