ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಅನನ್ಯ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ

ಮಂಗಳೂರು, ಮೇ 26: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ರವಿವಾರ ನಡೆದ ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಅನನ್ಯ ಸಾಧಕರಿಗೆ 2024ರ ಯಕ್ಷಧ್ರುವ ಕಲಾ ಗೌರವ ಸಮರ್ಪಿಸಲಾಯಿತು.
ವೈದಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಯಾಜಿ ನಿರಂಜನ್ ಭಟ್, ಮಾಧ್ಯಮ ಕ್ಷೇತ್ರದಲ್ಲಿ ಚಿದಂಬರ ಬೈಕಂಪಾಡಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲೆ.ಕ. ವಿನ್ಸೆಂಟ್ ಡಿಸೋಜ, ಕಮಾಂಡರ್ ಶಾಮ್ ರಾಜ್, ಕಲಾ ಸಂಘಟನೆಗಾಗಿ ಯಕ್ಷಗಾನ ಅಭ್ಯಾಸ ತರಬೇತಿ ದುಬೈ, ಶಾಸ್ತ್ರೀಯ ಸಂಗೀತಕ್ಕಾಗಿ ಕುದುಮಾರು ಎಸ್. ವೆಂಕಟರಾವ್, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ. ರಮಾನಂದ ಬನಾರಿ, ಹರಿಕಥೆ ಜಗದೀಶ್ ದಾಸ್ ಪೊಳಲಿ, ರಂಗಭೂಮಿ ಸಾಧನೆ ಗಾಗಿ ಲಕ್ಷ್ಮಣ ಕುಮಾರ್ ಮಲ್ಲೂರು, ಭರತನಾಟ್ಯ ಕಮಲಾಕ್ಷ ಆಚಾರ್ ಬೆಳ್ತಂಗಡಿ, ಕಂಬಳ ಕ್ಷೇತ್ರದಲ್ಲಿ ಅಶೋಕ್ ಶೆಟ್ಟಿ ಬೇಲಾಡಿ, ಯಕ್ಷಗಾನ ಚಿದಂಬರ ಬಾಬು ಪೂಜಾರಿ, ಯಕ್ಷಗಾನ(ಬಡಗು) ನಿರ್ಜೆಡ್ದು ಚಂದ್ರ ಕುಲಾಲ್, ಯಕ್ಷಗುರು ಮಹಾವೀರ ಪಾಂಡಿ, ಹವ್ಯಾಸಿ ಜಗನ್ನಾಥ ಶೆಟ್ಟಿ ಸಚ್ಚರಿಪೇಟೆ, ಮಹಿಳಾ ಪೂರ್ಣಿಮಾ ಯತೀಶ್ ರೈ, ದೈವಾರಾಧನೆ ಕ್ಷೇತ್ರದಲ್ಲಿ ಕೊರಗ ಪಾಣಾರ, ಭಜನೆ ಭೋಜ ಸುವರ್ಣ ಕುಲಶೇಖರ ಅವರನ್ನು ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿರು.
ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು, ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆಯಾಗಿದೆ. ಪ್ರತೀ ವರ್ಷ ನಾವು ಯಕ್ಷಗಾನ ಕಲಾವಿದರಿಗಾಗಿ ಹೊಸ ಹೊಸ ಯೋಜನೆ ಮತ್ತು ಯೋಚನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.
ಆಶೀರ್ವಚನಗೈದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು, ಒಂಬತ್ತನೇ ವರ್ಷದ ಸಂಭ್ರಮ ದಲ್ಲಿರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶಕ್ತ ಕಲಾವಿದರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಪಟ್ಲ ಟ್ರಸ್ಟ್ ದೇವಸ್ಥಾನವಿದ್ದಂತೆ: ಐಕಳ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನುತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.
ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣರು ಮಾತನಾಡಿ, ಪಟ್ಲರು ಪರೋಪಕಾರಕ್ಕಾಗಿ ಸಂಘಟನೆಯನ್ನು ಸ್ಥಾಪಿಸಿದರು. ಈ ಮೂಲಕ ಬಹಳಷ್ಟು ಕಲಾವಿದರಿಗೆ ನಾನಾ ರೀತಿಯಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆಯೂ ಇವರ ಸಂಘಟನೆ ರಾಜ್ಯದೆಲ್ಲೆಡೆ ವಿಸ್ತರಣೆಯಾಗಲಿ. ಪಟ್ಲರ ಕೀರ್ತಿ ಎಲ್ಲೆಡೆ ಹರಡಲಿ ಎಂದು ಶುಭ ಹಾರೈಸಿದರು.
ಅರೋಗ್ಯ ಶಿಬಿರವನ್ನು ಕಿಟ್ ನೀಡುವ ಮೂಲಕ ಡಾ.ರವೀಶ್ ತುಂಗಾ ಅವರು ಹಾಗೂ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು.
ವೇದಿಕೆಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊಕ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮ ಯಾಜಿ, ನಿಟ್ಟೆ ಯೂನಿವರ್ಸಿಟಿಯ ಪ್ರೊ. ಡಾ.ಬಿ.ಸತೀಶ್ ಕುಮಾರ್ ಭಂಡಾರಿ, ಹಿರಿಯ ನ್ಯಾಯವಾದಿ ಭೋಜ ನಾರಾಯಣ ಪೂಜಾರಿ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಜಯರಾಮ್ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜ ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ,ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್ ಶೆಟ್ಟಿ ಪೆರ್ಮುದೆ, ಡಾ ಮನುರಾವ್, ದುರ್ಗಾಪ್ರಸಾದ್ ಪಿವಿ ಪಡುಬಿದ್ರೆ, ಜೊತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.
ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ರವಿ ಶೆಟ್ಟಿ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.







