ಮರವೂರು ಹಳೆ ಸೇತುವೆಯಲ್ಲಿ ಸಂಚಾರ ನಿರ್ಬಂಧ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು, ಜೂ.13: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67ರ ರಸ್ತೆಯಲ್ಲಿನ ಮರವೂರು ಹಳೆ ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಈ ಸೇತುವೆಯಲ್ಲಿ ಘನ ಮತ್ತು ಲಘು ವಾಹನಗಳು ಅಧಿಕ ಸಂಖ್ಯೆಯಲ್ಲಿ ಚಲಿಸುತ್ತಿವೆ. ಸೇತುವೆಯ ಎರಡನೇ ಪಿಯರ್ನ ತಳಪಾಯವನ್ನು ಭದ್ರಪಡಿಸಬೇಕಾದ ಕಾರಣ ಸಂಚಾರ ನಿರ್ಬಂಧಿಸಲಾಗಿದೆ. ಈ ಸೇತುವೆಯನ್ನು ಸಂಪೂರ್ಣ ದುರಸ್ತಿ ಪಡಿಸುವವರೆಗೆ ಹೊಸ ಸೇತುವೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Next Story