ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಬ್ರಿಜೇಶ್ ಚೌಟ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಲೋಕಸಭೆಯಲ್ಲಿ ಕನ್ನಡದಲ್ಲಿ ಮಾಡಿದ ಪ್ರಮಾಣ ವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. ಬಳಿಕ ಮಾತೆರೆಗ್ಲಾ ಸೊಲ್ಮೆಲು ಎಂದು ಸಂಸತ್ತನ್ನು ಅಭಿನಂದಿಸಿದರು.
ತುಳುನಾಡಿಗೆ, ತುಳುಭಾಷೆಗೆ ಅವರು ಸಲ್ಲಿಸಿದ ಈ ಗೌರವ ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡಿದೆ.
Next Story





